ದಾವಣಗೆರೆಯಲ್ಲೇ ಎಐಐಎಂಎಸ್ ಸ್ಥಾಪಿಸಲು ಆಗ್ರಹ
Team Udayavani, Jan 10, 2019, 9:51 AM IST
ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ತಾಲೂಕಲ್ಲಿ ಅಖೀಲ ಭಾರತ ವೈದ್ಯಕೀಯ ವಿಜ್ಞಾನಗಳ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ (ಎಐಐಎಂಎಸ್)ಸ್ಥಾಪಿಸಬೇಕೆಂದು ನಗರದ ಹಲವು ಸಂಘ-ಸಂಸ್ಥೆಗಳ ಮುಖಂಡರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬುಧವಾರ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ರೇವಣ್ಣ ಬಳ್ಳಾರಿ, ಕರ್ನಾಟಕದಲ್ಲಿ ಎಐಐಎಂಎಸ್ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತಿಸಿದೆ ಎಂಬ ಮಾಹಿತಿ ಇದೆ. ಶೈಕ್ಷಣಿಕ ನಗರಿ, ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಎಐಐಎಂಎಸ್ ಆರಂಭಿಸಲು ಅತ್ಯಂತ ಸೂಕ್ತ ಸ್ಥಳವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಸಕಲ ಸೌಲಭ್ಯವಿರುವ ದಾವಣಗೆರೆ ಅಕ್ಕ ಪಕ್ಕದಲ್ಲೆ ಎಐಐಎಂಎಸ್ ಸ್ಥಾಪಿಸಲು ಕ್ರಮ ವಹಿಸಬೇಕು ಎಂದರು.
ದಶಕಗಳ ಹಿಂದೆಯೇ ದಾವಣಗೆರೆ 2ನೇ ರಾಜಧಾನಿ ಆಗಬೇಕಿತ್ತು. ರಾಜಕೀಯ ಕಾರಣದಿಂದಾಗಿ ಅದರಿಂದ ವಂಚಿತವಾಯಿತು. ಇತ್ತೀಚೆಗೆ ಐಐಟಿ ವಿಷಯದಲ್ಲೂ ಹಾಗೆಯೇ ಆಯಿತು. ಮೇಲಾಗಿ ದಾವಣಗೆರೆ ಇಲ್ಲವೇ ಕೊಂಡಜ್ಜಿಯಲ್ಲೇ ಐಐಟಿ ಸ್ಥಾಪಿಸಬೇಕೆಂದು ನಾವು ಹೋರಾಟ ಮಾಡಿದಾಗ ಯಾವ ಜನಪ್ರತಿನಿಧಿಗಳು ಸಹಕಾರ ನೀಡಲಿಲ್ಲ. ನಿಜಕ್ಕೂ ಇದು ದೌರ್ಭಾಗ್ಯದ ಸಂಗತಿ. ನಮ್ಮ ಹೋರಾಟ ಸ್ವಾರ್ಥ ಸಾಧನೆಗಲ್ಲ. ಐಐಟಿ, ಎಐಐಎಂಎಸ್‌ನಂತಹ ಸಂಸ್ಥೆ ದಾವಣಗೆರೆಯಲ್ಲಿ ಸ್ಥಾಪಿತವಾದಲ್ಲಿ ಸಾವಿರಾರು ಜನರಿಗೆ ಉದ್ಯೋಗ ದೊರೆಯುವ ಜತೆಗೆ ಈ ಭಾಗ ಮತ್ತಷ್ಟು ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಹೇಳಿದರು.
ಹೋರಾಟಗಾರ ಎಂ.ಎಸ್.ಕೆ.ಶಾಸ್ತ್ರಿ ಮಾತನಾಡಿ, ಹುಚ್ಚವ್ವನಹಳ್ಳಿ-ರಾಂಪುರದ ಬಳಿ 1600 ಎಕರೆ ಸರ್ಕಾರದ ಭೂಮಿ ಇದೆ. ಅಲ್ಲಿ ಎಐಐಎಂಎಸ್ ಸ್ಥಾಪಿಸಬಹುದು. ಈ ವಿಚಾರವಾಗಿ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿಯವರನ್ನ ನಿಯೋಗದ ಮೂಲಕ ಭೇಟಿಯಾಗಿ, ಮನವರಿಕೆ ಮಾಡಿಕೊಡಲಾಗುವುದು ಎಂದರು.
ಈ ಹಿಂದೆ ದಾವಣಗೆರೆಯಲ್ಲೇ ಐಐಟಿ ಸ್ಥಾಪನೆ ಆಗಬೇಕೆಂದು ತೀವ್ರ ಹೋರಾಟ ನಡೆಸಿದೆವು. ನ್ಯಾಯಾಲಯದ ಮೊರೆ ಸಹ ಹೋಗಿದ್ದೆವು. ದುರ್ಬಲ ಸಂಸದರ ಪಡೆದ ಫಲವಾಗಿ ನಮಗೆ ಆ ವಿಚಾರದಲ್ಲಿ ಹಿನ್ನಡೆ ಆಯಿತು. ಚಿತ್ರದುರ್ಗ ಜಿಲ್ಲೆಗೆ ಸೇರಿದ ವ್ಯಕ್ತಿಯನ್ನು ಸಂಸದರನ್ನಾಗಿ ಆಯ್ಕೆ ಮಾಡಿದ ಅಪರಾಧಕ್ಕೆ ನಾವು ಶಿಕ್ಷೆ ಅನುಭವಿಸುವಂತಾಗಿದೆ. ಮಧ್ಯ ಕರ್ನಾಟಕದ ದಾವಣಗೆರೆಯಲ್ಲೇ ಐಐಟಿ ಸ್ಥಾಪನೆ ಆಗಬೇಕೆಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ನಡೆಸುವುದಾಗಿ ಹೇಳಿದರು.
ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಅಜ್ಜಂಪುರ ಶೆಟ್ರಾ ಶಂಭುಲಿಂಗಪ್ಪ, ಮೃತ್ಯುಂಜಯ ಎನ್. ಹಿರೇಮಠ, ವಿಭೂತಿ ಬಸವಾನಂದ, ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ, ಅಕ್ಕ ಮಹಾದೇವಿ ಸಮಾಜದ ಅಧ್ಯಕ್ಷೆ ನೀಲಗುಂದ ಜಯ್ಯಮ್ಮ ಸಹ ದಾವಣಗೆರೆಯಲ್ಲೇ ಎಐಐಎಂಎಸ್ ಸ್ಥಾಪನೆ ಆಗಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.