ನಿರ್ದಿಷ್ಟ ವಿಷಯಕ್ಕೆ ಸೀಮಿತರಾಗಬೇಡಿ: ರಮೇಶ್ ಸಲಹೆ
Team Udayavani, Aug 19, 2017, 2:25 PM IST
ದಾವಣಗೆರೆ: ನಿರ್ದಿಷ್ಟ ವಿಷಯಕ್ಕೆ ಸೀಮಿತಗೊಳ್ಳುವ ಶೈಕ್ಷಣಿಕ ವ್ಯವಸ್ಥೆಯಿಂದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹೊರ ಬರಬೇಕು ಎಂದು ಜಿಲ್ಲಾಧಿಕಾರಿ ಡಿ. ಎಸ್. ರಮೇಶ್ ಸಲಹೆ ನೀಡಿದ್ದಾರೆ.
ಶುಕ್ರವಾರ, ತೋಳಹುಣಸೆ ಗ್ರಾಮದ ಹೊರವಲಯದ ದಾವಣಗೆರೆ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾನಿಲಯದ 9ನೇ ವರ್ಷದ ಸಂಸ್ಥಾಪನಾ ದಿನಾಚಾರಣೆ ಉದ್ಘಾಟಿಸಿ, ಮಾತನಾಡಿದ ಅವರು, ವಿಶ್ವವಿದ್ಯಾನಿಲಯಗಳು ಯೂನಿವರ್ಸಲ್ ಎನ್ನುವ ಸಿದ್ಧಾಂತ ಹೊಂದಿರುತ್ತವೆ. ಆದ್ದರಿಂದ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನ ಹೊಂದಿರಬೇಕು. ಆದರೆ, ಇಂದು ವಿಶ್ವವಿದ್ಯಾನಿಲಯದಲ್ಲಿನ ವಿದ್ಯಾರ್ಥಿಗಳು ಒಂದು ವಿಷಯದ ಅಧ್ಯಯನಕ್ಕೆ ಸೀಮಿತಗೊಳ್ಳುತ್ತಿದ್ದಾರೆ. ಇದು ಇತರೆ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗುತ್ತಿಲ್ಲ ಎಂದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಬಿ.ಬಿ. ಕಲಿವಾಳ ಮಾತಾನಾಡಿ, ದಾವಿವಿ ಸ್ಥಾಪನೆಗೆ ಅನೇಕ ಗಣ್ಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಪ್ರಸ್ತುತ ವಿಶ್ವವಿದ್ಯಾನಿಲಯವು 251 ಎಕರೆ ವಿಸ್ತೀರ್ಣ ಹೊಂದಿದೆ. ಹಾಲುವರ್ತಿ ಸಮೀಪ ಸರ್ಕಾರ 72 ಎಕರೆ ಜಮೀನು ವಿಶ್ವವಿದ್ಯಾನಿಲಯಕ್ಕೆ ನೀಡಿದೆ. ಇದಕ್ಕೆ ಹೊಂದಿಕೊಂಡಂತಿರುವ 40 ಎಕರೆ ಹೆಚ್ಚುವರಿ ಅರಣ್ಯ ಪ್ರದೇಶವನ್ನು ಸರ್ಕಾರ ವಿಶ್ವವಿದ್ಯಾನಿಲಯಕ್ಕೆ ನೀಡಿದರೆ ಅದನ್ನು ಬಟಾನಿಕಲ್ ಗಾರ್ಡನ್ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು. ಇದರಿಂದ ಔಷ ಧ ಆಧಾರಿತ ಸಸ್ಯಗಳನ್ನು ಬೆಳೆಸಲು ಅನುಕೂಲವಾಗುವುದು. ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ಕುಲಸಚಿವ ಪ್ರೊ| ಎಸ್.ವಿ. ಹಲಸೆ, ಹಣಕಾಸು ನಿರ್ವಹಣಾ ಅಧಿಕಾರಿ ಪ್ರೊ| ಎಚ್.ಎಸ್. ಅನಿತಾ, ಮೌಲ್ಯಮಾಪನ ಕುಲಸಚಿವ ಕೆ.ಎನ್. ಗಂಗಾನಾಯ್ಕ, ಸಿಂಡಿಕೇಟ್ ಸದಸ್ಯರಾದ ಡಾ| ಎಚ್. ವಿಶ್ವನಾಥ್, ಕೊಂಡಜ್ಜಿ ಜಯಪ್ರಕಾಶ್ ಕಾರ್ಯಕ್ರಮದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.