ದಾರ್ಶನಿಕರನ್ನು ಜಾತಿಗೆ ಸೀಮಿತ ಮಾಡಬೇಡಿ
Team Udayavani, Oct 25, 2021, 1:58 PM IST
ಧಾರವಾಡ: ನಾಡಿನ ದಾರ್ಶನಿಕರು, ಶರಣರು, ಸ್ವಾತಂತ್ರ್ಯ ಹೋರಾಟಗಾರರನ್ನು ಯಾವುದೇ ಸಮಾಜಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಹೇಳಿದರು.
ಸಿ.ಬಿ. ನಗರದ ಲಿಂಗಾಯತ ಭವನದಲ್ಲಿ ಹಮ್ಮಿಕೊಂಡಿದ್ದ ವೀರರಾಣಿ ಕಿತ್ತೂರು ಚನ್ನಮ್ಮನ 243ನೇ ಜಯಂತಿ ಹಾಗೂ 198ನೇ ವಿಜಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಡಿನ ಮತ್ತು ಸಮಾಜದ ಒಳಿತಿಗಾಗಿ ಶ್ರಮಿಸಿದವರನ್ನು ತಮ್ಮ ಸ್ವಾರ್ಥ ಸಾಧನೆಗಾಗಿ ಒಂದು ವರ್ಗಕ್ಕೆ ಸೀಮಿತಗೊಳಿಸಬಾರದು. ಇದರಿಂದ ಮಹಾತ್ಮರ ಉದ್ದೇಶಗಳಿಗೆ ಅಪಚಾರ ಮಾಡಿದಂತಾಗುತ್ತದೆ. ಇದಲ್ಲದೇ ಮಹಾನ ನಾಯಕರು, ಹೋರಾಟಗಾರರ ಇತಿಹಾಸ ತಿರುಚುವುದು ಕೂಡ ಸಮಂಜಸವಲ್ಲ ಎಂದರು.
ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ ಮಾತನಾಡಿ, ಝಾನ್ಸಿರಾಣಿ ಲಕ್ಷ್ಮೀಬಾಯಿಗಿಂತ ಮೊದಲು ಸ್ವಾತಂತ್ರ್ಯ ಕಹಳೆ ಊದಿದ ಕಿತ್ತೂರು ಚನ್ನಮ್ಮನನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ಕಾರ್ಯವನ್ನು ನಾಡಿನ ಜನಪ್ರತಿನಿಧಿಗಳು ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ: ಸೋತವನ ವಿರುದ್ದವೇ ಶರಣಾಗಿದ್ದೀಯ: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್
ಕಾರ್ಯಕಾರಿ ಸಮಿತಿ ಸದಸ್ಯ ಶಂಕರ ಕುಂಬಿ ಮಾತನಾಡಿ, ವೀರವನಿತೆ ಕಿತ್ತೂರು ಚನ್ನಮ್ಮನ ಕುರಿತು ಇನ್ನಷ್ಟು ಸಂಶೋಧನೆಗಳು ನಡೆಯಬೇಕು. ಈ ಮೂಲಕ ಮುಂಬರುವ ಪೀಳಿಗೆಗೆ ಚನ್ನಮ್ಮನ ಹೋರಾಟ, ತ್ಯಾಗವನ್ನು ತಿಳಿಸುವ ಕೆಲಸ ಆಗಬೇಕು ಎಂದರು.
ಬಿ.ಎಸ್. ಗೋಲಪ್ಪನವರ, ಬಿ.ವೈ. ಪಾಟೀಲ, ಪಾರ್ವತಿ ಹಾಲಭಾವಿ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಮಹಾದೇವಿ ಯಾದವಾಡ, ಬಿ.ಎಂ. ಸೂರಗೊಂಡ, ಶಿವಾನಂದ ಕವಳಿ, ಆರ್.ಎಸ್. ಉಪ್ಪಿನ, ರಾಜೇಂದ್ರ ಕಪಲಿ, ಗಂಗಪ್ಪ ಈರೇಶನವರ, ಎಂ.ಡಿ. ಪಾಟೀಲ, ಎಸ್. ಎನ್. ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.