ಕೋವಿಡ್ ಪರೀಕ್ಷೆಗೆ ಹಿಂಜರಿಕೆ ಬೇಡ: ಡಿಸಿ ಬೀಳಗಿ
Team Udayavani, Sep 25, 2020, 7:23 PM IST
ಹರಿಹರ: ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಲು ಯಾರೊಬ್ಬರೂ ಹಿಂಜರಿಯಬಾರದು. ಸೋಂಕಿನ ಅಲ್ಪ ಲಕ್ಷಣಗಳು ಕಂಡು ಬಂದರೂ ತಪ್ಪದೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ನಗರದ ಗುತ್ತೂರಿನ ಕೋವಿಡ್ ಕೇರ್ ಸೆಂಟರ್‌ಗೆ ಗುರುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರಕಾರದಿಂದ ಉಚಿತ ಪರೀಕ್ಷೆಯ ವ್ಯವಸ್ಥೆ ಮಾಡಲಾಗಿದೆ. ಹತ್ತಿರವಿರುವ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪಾಸಿಟಿವ್ ಬಂದಿದ್ದರೆ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಅಥವಾ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯಬೇಕು. ಅಗತ್ಯವಿದ್ದರೆ ಆಸ್ಪತ್ರೆಗೂ ದಾಖಲಾಗಬೇಕು. ಮನೆಯಿಂದ ಹೊರಕ್ಕೆಬರುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದರು. ಕೋವಿಡ್ ಸೆಂಟರ್‌ನಲ್ಲಿನ ಸಿಬ್ಬಂದಿಯೊಂದಿಗೆ ಮಾತನಾಡಿದ ಅವರು, ರೋಗಿಗಳಿಗೆ ಬಿಸಿನೀರು, ತಾಜಾ ಆಹಾರ, ಸೂಕ್ತ ಔಷ ಧಗಳನ್ನು ನೀಡಬೇಕು ಎಂದು ಸೂಚಿಸಿದರು.
ನಂತರ ನದಿ ಪ್ರವಾಹ ನುಗ್ಗಿದ್ದ ಗಂಗಾನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪ್ರವಾಹ ಇಳಿದಿದೆ, ಈಗ ನಿಶ್ಚಿಂತೆಯಿಂದ ಇರಬಹುದು ಎಂದರು. ಸ್ಥಳೀಯರು ಮಾತನಾಡಿ, ಸಾರ್, ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ನಾವು ಗಂಜಿ ಕೇಂದ್ರದ ಪಾಲಾಗುತ್ತೇವೆ. ನಮಗೆ ವಸತಿ ವ್ಯವಸ್ಥೆ ಮಾಡಿ ಕೊಡಿ ಎಂದು ಕೋರಿದರು. ಜಮೀನು ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ ವಿತರಿಸುವ ನಿವೇಶನಗಳನ್ನು ನಿಮಗೂ ದೊರೆಯುವಂತೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ತಹಶೀಲ್ದಾರ್ ರಾಮಚಂದ್ರಪ್ಪ, ಪೌರಾಯುಕ್ತೆ ಎಸ್. ಲಕ್ಷ್ಮೀ, ಎಇಇ ಎಸ್. ಎಸ್. ಬಿರಾದಾರ್, ನೌಷಾದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.