ದವಸ-ಧಾನ್ಯ-ಧನ ಸಂಗ್ರಹಕ್ಕೆ ಚಾಲನೆ
Team Udayavani, Jan 5, 2019, 10:51 AM IST
ದಾವಣಗೆರೆ: ನಗರದ ಶಿವಯೋಗಾಶ್ರಮದಲ್ಲಿ ಜ. 18ರಿಂದ 20ರ ವರೆಗೆ ನಡೆಯಲಿರುವ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ 62ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ದವಸ-ಧಾನ್ಯ, ಧನ ಸಂಗ್ರಹ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಶುಕ್ರವಾರ, ಶಿವಯೋಗಾಶ್ರಮದ ಆವರಣದಲ್ಲಿ ವಿರಕ್ತಮಠದ ಚರಮೂರ್ತಿ ಶ್ರೀ ಬಸವಪ್ರಭು ಸ್ವಾಮೀಜಿ, ಧವಸ- ಧಾನ್ಯ-ಧನ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ವಿಶ್ವಗುರು ಬಸವಣ್ಣನವರು ಸಾರಿದ ಕಾಯಕ ಮತ್ತು ದಾಸೋಹದ ತತ್ವಗಳನ್ನು 20ನೇ ಶತಮಾನದಲ್ಲಿ ಬಡವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿ ನಿಲಯಗಳನ್ನು ಪ್ರಥಮವಾಗಿ ಸ್ಥಾಪಿಸುವುದರ ಮೂಲಕ ಸಾಮಾಜಿಕ, ಧಾರ್ಮಿಕ, ಶಿಕ್ಷಣ ಕ್ರಾಂತಿ ಮಾಡಿದವರು ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮೀಜಿ ಎಂದು ಸ್ಮರಿಸಿದರು.
ಜಗದ್ಗುರುಗಳು ಲಿಂಗೈಕ್ಯರಾಗಿ 62 ವರ್ಷಗಳು ಪೂರೈಸಿವೆ. ಅವರು ಧಾರ್ಮಿಕ ಹಾಗೂ ರಾಷ್ಟ್ರ ಕಲ್ಯಾಣಕ್ಕಾಗಿ ಮಾಡಿರುವ ಅಗಣಿತ ಮಹಾಕಾರ್ಯ, ಸಾಧನೆ ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಈ ವರ್ಷವೂ ಜ. 18, 19, ಹಾಗೂ 20ರಂದು ಮೂರು ದಿನಗಳ ಕಾಲ ಅವರ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ, ಸಹಜ ಶಿವಯೋಗ ಕಾರ್ಯಕ್ರಮ ಚಿತ್ರದುರ್ಗದ ಡಾ| ಶ್ರೀ ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದರು.
ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಭಕ್ತರ ಸಹಾಯ, ಸಹಕಾರ ಅಗತ್ಯ. ಶ್ರೀ ಜಯದೇವ ಜಗದ್ಗುರುಗಳ ಸ್ಮರಣೋತ್ಸವಕ್ಕೆ ಉದಾರವಾಗಿ ದವಸ, ಧಾನ್ಯ, ಧನ ನೀಡುವುದರ ಜತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಠದ ಸಮಿತಿಯ ಕುಂಟೋಜಿ ಚನ್ನಪ್ಪ, ಲಂಬಿ ಮುರುಗೇಶಪ್ಪ, ಶರಣಬಸವ, ಚಂದ್ರಶೇಖರಯ್ಯ, ಸರ್ಪಭೂಷಣ, ಕೀರ್ತಿಕುಮಾರ್, ನಾಗರಾಜ್, ಉಮಾಪತಿ, ಸಂಗಮೇಶ್, ನೂರುಲ್ಲಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.