ಬರ ಪರಿಸ್ಥಿತಿ ಮನವರಿಕೆ: ಶಿವಮೂರ್ತಿ
Team Udayavani, Feb 28, 2019, 8:28 AM IST
ದಾವಣಗೆರೆ: ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಸಮಗ್ರವಾಗಿ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಜಿ.ಶಿವಮೂರ್ತಿ ಹೇಳಿದ್ದಾರೆ.
ಬುಧವಾರ ಜಿಲ್ಲೆಯ ದಾವಣಗೆರೆ ಹಾಗೂ ಜಗಳೂರು ತಾಲೂಕಿನಲ್ಲಿ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ವೇಳೆ ಜಗಳೂರಿನ ರಂಗಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಿಂಗಾರಲ್ಲಿ ಕೃಷಿ, ತೋಟಗಾರಿಕೆ ಬೆಳೆ ಹಾನಿ ಹಾಗೂ ಅನಾವೃಷ್ಟಿಯಿಂದಾಗಿ ಹಳ್ಳಿಗಳಲ್ಲಿ ಜನ-ಜಾನುವಾರುಗಳಿಗೆ ಎದುರಾಗಿರುವ ಕುಡಿಯುವ ನೀರಿನ ಅತೀವ ತೊಂದರೆ ಬಗ್ಗೆ ತಂಡದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.
ರಂಗಾಪುರ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ತಂದು ನೀರು ಶುದ್ಧೀಕರಿಸಿ, ಪೂರೈಸಲಾಗುತ್ತಿದ್ದು, ಇದೇ ರೀತಿ ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಅಂಕಿ-ಅಂಶಗಳ ಮೂಲಕ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಮೇಲಾಗಿ ಫಸಲ್ ಬಿಮಾ ಯೋಜನೆ ತಮಗೆ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ರೈತರು ದೂರಿರುವ ಬಗ್ಗೆಯೂ ತಂಡದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಸಂಪೂರ್ಣ ಚಿತ್ರಣವನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ತಂಡ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಭೇಟಿ ನೀಡಿ, ಅಧ್ಯಯನ ನಡೆಸಿದ ನಂತರ ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸ್ಪಂದಿಸುವ ನಂಬಿಕೆ ಇದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.