19 ರಂದು ಬೃಹತ್ ಇ-ಲೋಕ ಅದಾಲತ್
Team Udayavani, Sep 8, 2020, 6:23 PM IST
ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸೆ. 19 ರಂದು ಬೃಹತ್ ಇ-ಲೋಕ್ ಅದಾಲತ್ ಆಯೋಜಿಸಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ. ಗೀತಾ ತಿಳಿಸಿದರು.
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇ- ಲೋಕ್ ಅದಾಲತ್ ಮೂಲಕ ಪಕ್ಷಗಾರರು ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರ, ಸುಲಭವಾಗಿ ಮತ್ತು ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು. ಇ-ಅದಾಲತ್‌ನಿಂದ ಪಕ್ಷಗಾರರಲ್ಲಿರುವ ವೈಮನಸ್ಸುಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷಗಾರರನ್ನು ಸಂಪರ್ಕಿಸಿ ರಾಜಿ ಸಂಧಾನದಿಂದ ತೀರ್ಪು ಪ್ರಕಟಿಸಲಾಗುವುದು ಎಂದರು.
ಚೆಕ್ ಬೌನ್ಸ್ ಪ್ರಕರಣಗಳು, ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಕುಟುಂಬ ವಿವಾದಗಳು, ಬಾಡಿಗೆದಾರ ಹಾಗೂ ಮಾಲೀಕರ ನಡುವಿನ ಪ್ರಕರಣಗಳು, ಹಣ ವಾಪಾಸಾತಿ ಪ್ರಕರಣಗಳು ಸೇರಿದಂತೆ ಕಾನೂನಿನನ್ವಯ ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಇ-ಲೋಕ್ ಅದಾಲತ್ ಕುರಿತು ಹೆಚ್ಚಿನ ಮಾಹಿತಿಗಾಗಿ [email protected] ಅಥವಾ ದೂರವಾಣಿಸಂಖ್ಯೆ-9449624370 ಸಂರ್ಪಕಿಸಬಹುದು ಎಂದು ತಿಳಿಸಿದರು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್. ಎಚ್.ಅರುಣ್‌ಕುಮಾರ್, ಮುಖ್ಯ ಆಡಳಿತಾಧಿಕಾರಿ ಶ್ರೀಧರ್, ಆಡಳಿತ ಶಿರಸೇ¤ದಾರ್ ಮಾರುತಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.