ಉತ್ತಮ ಕೆಲಸದಿಂದ ಜನರ ಪ್ರೀತಿ ಗಳಿಸಿ
ಗ್ರಾಮಲೆಕ್ಕಾಧಿಕಾರಿಗಳ ರಾಜ್ಯಮಟ್ಟದ ಸಮಾವೇಶ
Team Udayavani, May 15, 2022, 1:59 PM IST
ದಾವಣಗೆರೆ: ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದ ಜನರು ಪ್ರೀತಿಯಿಂದ ಕಾಣುವ ರೀತಿಯಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ ಶನಿವಾರ ನಗರದ ನೂತನ್ ಕಾಲೇಜು ಮೈದಾನದಲ್ಲಿ ಗ್ರಾಮ ಆಡಳಿತ ಅಧಿಕಾರಿ ಬೇಡಿಕೆ ಘೋಷಣೆಗಾಗಿ ಏರ್ಪಡಿಸಿದ್ದ ಗ್ರಾಮಲೆಕ್ಕಾಧಿಕಾರಿಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಲೆಕ್ಕಾಧಿಕಾರಿಗಳ ನಡೆ-ನುಡಿಯೂ ಚೆನ್ನಾಗಿರಬೇಕು. ನಿವೃತ್ತಿಯಾದರೆ ಜನ ಎಂತಹ ಒಳ್ಳೆಯ ವ್ಯಕ್ತಿ ಸೇವೆಯಿಂದ ನಿವೃತ್ತಿಯಾಗುತ್ತಿದ್ದಾರೆಂದು ಕಣ್ಣೀರು ಹಾಕಬೇಕು. ನಿವೃತ್ತಿಯಾದಾಗ ಸನ್ಮಾನಿಸಿ, ತುಂಬು ಹೃದಯದಿಂದ ಅಭಿನಂದಿಸಬೇಕು. ಆ ರೀತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸ ಮಾಡಬೇಕು ಎಂದರು.
ಗ್ರಾಮ ಲೆಕ್ಕಾಧಿಕಾರಿಗಳು ಉತ್ತಮ ಕೆಲಸ ಮಾಡಿ ಕಂದಾಯ ಇಲಾಖೆಗೆ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಸಚಿವನಾಗಿ ನಾನು ಆದೇಶ ಮಾಡುತ್ತೇನೆ. ಅದನ್ನು ನೀವು ಅನುಷ್ಠಾನ ಗೊಳಿಸದಿದ್ದರೆ ಏನೂ ಬದಲಾವಣೆ ಆಗದು. ನೀವು ಉತ್ತಮವಾಗಿ ಕೆಲಸ ಮಾಡಿದರೆ ಮಾತ್ರ ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ ಎಂದರು.
ಕಳೆದ 40 ವರ್ಷಗಳಿಂದ ಆಗದ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಾಕಷ್ಟು ವಿರೋಧದ ನಡುವೆಯೂ ತಿದ್ದುಪಡಿ ತಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಮುಂಬಡ್ತಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಈ ಕೆಲಸ ಹಿಂದೆಯೇ ಆಗಿದ್ದರೆ ಅದೇಷ್ಟೋ ಗ್ರಾಮಲೆಕ್ಕಾಧಿಕಾರಿಗಳು ಬಡ್ತಿ ಲಾಭ ಪಡೆದುಕೊಳ್ಳುತ್ತಿದ್ದರು ಎಂದ ಸಚಿವರು, ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ, 78 ಗಂಟೆಗಳಲ್ಲಿ ಒಂದು ಕರೆ ಮಾಡಿದರೆ ಪಿಂಚಣಿ ಕೊಡುವ ಕಾರ್ಯಕ್ರಮ, ರೈತರೇ ತಮ್ಮ ಜಮೀನಿನ ನಕ್ಷೆ ಹಾಕಿಕೊಳ್ಳಲು ಅನುಕೂಲ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗಿದೆ ಎಂದರು.
ಕೇಂದ್ರ ಮಾದರಿ ವೇತನದ ಬಗ್ಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಒಂದು ಸುತ್ತು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದಾರೆ. ನಾನೂ ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸುತ್ತೇನೆ ಎಂದರು.
ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಸರ್ಕಾರದ ಎಲ್ಲ ಯೋಜನೆಗಳು ಗ್ರಾಮಲೆಕ್ಕಾಧಿಕಾರಿಗಳ ಮೂಲಕವೇ ಅನುಷ್ಠಾನವಾಗುತ್ತವೆ. ಹಾಗಾಗಿ ಗ್ರಾಮಲೆಕ್ಕಾಧಿಕಾರಿಗಳು ಇಲ್ಲದಿದ್ದರೆ ಗ್ರಾಮವೇ ಇಲ್ಲ ಎನ್ನುವ ಸ್ಥಿತಿ ಇದೆ. ಗ್ರಾಮಲೆಕ್ಕಾಧಿಕಾರಿಗಳು ಬಡವರ, ರೈತರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಸೌಲಭ್ಯ ಕಲ್ಪಿಸುವ ಕೆಲಸ ಮಾಡಬೇಕು. ತನ್ಮೂಲಕ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷ ಬಿ. ದೊಡ್ಡಬಸಪ್ಪರೆಡ್ಡಿ ಇನ್ನಿತರ ಪ್ರಮುಖರು ಸಮಾವೇಶದಲ್ಲಿದ್ದರು.
ಕಾದು ಕಾದು ಸುಸ್ತಾದರು
ಗ್ರಾಮಲೆಕ್ಕಿಗರ ಸಮಾವೇಶದ ಉದ್ಘಾಟನೆ ಕಾರ್ಯಕ್ರಮ ಬೆಳಗ್ಗೆ 11ಗಂಟೆಗೆ ನಿಗದಿಯಾಗಿತ್ತು. ಆದರೆ, ಕಾರ್ಯಕ್ರಮ ಶುರುವಾಗಿದ್ದು ಸಂಜೆ 4 ಗಂಟೆಗೆ. ರಾಜ್ಯದ ವಿವಿಧೆಡೆಯಿಂದ ಬಂದ ಗ್ರಾಮಲೆಕ್ಕಾಧಿಕಾರಿಗಳು ಕಾರ್ಯಕ್ರಮ ವಿಳಂಬವಾಗಿದಕ್ಕೆ ಬೇಸರ ವ್ಯಕ್ತಪಡಿಸಿದರು. ನಿರೂಪಕರು “ಕೆಲವೇ ನಿಮಿಷಗಳಲ್ಲಿ ಅತಿಥಿಗಳು ಬರುತ್ತಾರೆ’ ಎಂದಾಗಲೆಲ್ಲ ಸಭಿಕರು ಕೇಕೇ ಹಾಕಿ ಅಸಮಾಧಾನ ವ್ಯಕ್ತಪಡಿಸಿದರು. ಅನೇಕರು ದಾವಣಗೆರೆ ನಗರ ಸುತ್ತಾಡಿ ಶಾಂಪಿಂಗ್ ಮಾಡಿದರು. ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವರ ಹೆಸರು ಮುದ್ರಿಸಲಾಗಿತ್ತು. ಆದರೆ, ಕಂದಾಯ ಸಚಿವರು ಮಾತ್ರ ಬಂದಿರುವುದು ಗ್ರಾಮಲೆಕ್ಕಾಧಿಕಾರಿಗಳಿಗೆ ಇನ್ನಷ್ಟು ಬೇಸರ ಮೂಡಿಸಿತು.
ನಿರಾಸೆಗೊಳಗಾದ ಗ್ರಾಮ ಲೆಕ್ಕಿಗರು
ಗ್ರಾಮಲೆಕ್ಕಾಧಿಕಾರಿಗಳನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಘೋಷಿಸುವ ಬೇಡಿಕೆಯನ್ನೇ ಮುಖ್ಯವಾಗಿರಿಸಿಕೊಂಡು ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘದಿಂದ ರಾಜ್ಯಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಬಹುತೇಕ ಎಲ್ಲರೂ ಕಂದಾಯ ಸಚಿವರು ಇದೇ ವೇದಿಕೆಯಲ್ಲಿ ಗ್ರಾಮಲೆಕ್ಕಾಧಿಕಾರಿಗಳನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಘೋಷಿಸುತ್ತಾರೆ ಎಂದು ಆಶಿಸಿದ್ದರು. ಆದರೆ, ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರಿಂದ ಗ್ರಾಮಲೆಕ್ಕಾಧಿಕಾರಿಗಳು ನಿರಾಸೆಗೊಳಗಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.