ಎಷ್ಟೇ ಕಷ್ಟವಾದ್ರೂ ಮಕ್ಕಳಿಗೆ ಶಿಕ್ಷಣ ನೀಡಿ


Team Udayavani, Jun 30, 2017, 1:07 PM IST

dvg5.jpg

ದಾವಣಗೆರೆ: ಎಷ್ಟೇ ಕಷ್ಟ ಬಂದರೂ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿಸಬಾರದು ಎಂದು ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಡಾ| ಎಂ.ಎ. ಸಲೀಂ ತಿಳಿಸಿದ್ದಾರೆ. ಎಸ್‌ಪಿಎಸ್‌ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲಾವರಣದಲ್ಲಿ ಗುರುವಾರ ಡಾನ್‌ ಬಾಸ್ಕೋ, ಕೀಂ ಯೋಜನೆ, ಬಿಆರ್‌ಇಎಡಿಎಸ್‌ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಇತರೆ ಸಂಘ, ಸಂಸ್ಥೆಗಳಿಂದ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು.

ಪೋಷಕರು ತಮ್ಮ ಮನೆಯಲ್ಲಿ ಎಷ್ಟೇ ಕಷ್ಟ, ಸಮಸ್ಯೆ ಬಂದರೂ ಮಕ್ಕಳ ವಿದ್ಯಾಭ್ಯಾಸ ಮೊಟಕು ಮಾಡದಂತೆ ನೋಡಿಕೊಳ್ಳಬೇಕು ಎಂದರು ಬಡ ಕುಟುಂಬಗಳಲ್ಲಿನ ಮಕ್ಕಳು ಇಂದು ಸಾಕಷ್ಟು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಸೇರಿದಂತೆ ಅನೇಕ ಸಾಮಾಜಿಕ ಅನಿಷ್ಟ ಪದ್ಧತಿಗೆ ಬಲಿಯಾಗುತ್ತಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ಇಡೀ ಸಮಾಜ ಶ್ರಮಿಸಬೇಕಿದೆ ಎಂದರು. 

ಇಂದಿನ ತಾಂತ್ರಿಕ ಯುಗದಲ್ಲಿ ನಾವು ಸಾಕಷ್ಟು ಸವಲತ್ತು ಪಡೆಯುತ್ತಿದ್ದೇವೆ. ಉತ್ತಮ ಸಮಾಜ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸವಲತ್ತು ನಮಗಿವೆ. ಇವೆಲ್ಲಾ ನಮ್ಮ ಪೂರ್ವಜರ ಕೊಡುಗೆ. ಇವನ್ನು ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಮಕ್ಕಳು ದೊಡ್ಡ ದೊಡ್ಡ ಕನಸು ಕಟ್ಟಿಕೊಂಡು, ಅವುಗಳ ಸಾಕಾರಕ್ಕೆ ಶ್ರಮಿಸಬೇಕು ಎಂದು ಅವರು ತಿಳಿಸಿದರು.

ಮಕ್ಕಳ ರಕ್ಷಣೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ್‌, ಪ್ರತಿ ವರ್ಷ ಜಗತ್ತಿನ 150 ಕೋಟಿ ಜನ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಸಂಘರ್ಷಗಳಿಂದ ಸಮಸ್ಯೆಗೆ ಗುರಿಯಾಗುತ್ತಿದ್ದರೆ, ಇನ್ನೂ 20 ಕೋಟಿ ಜನ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ದಿವಾಳಿಯಾಗುತ್ತಿದ್ದಾರೆ.

ಈ ಅಂಕಿ ಅಂಶದ ಮೂರನೇ ಒಂದು ಭಾಗದ ಮಕ್ಕಳು, ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಇದು ಆಘಾತಕಾರಿ ಎಂದರು. ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕೆ ಹೋದರೆ, ಅವರ ಶಿಕ್ಷಣ ಹಾಳಾಗಲಿದೆ. ಮಕ್ಕಳನ್ನು ದುಡಿಮೆಗೆ ಕಳುಹಿಸುವ ಸಲುವಾಗಿ ಮಕ್ಕಳ ಅಪಹರಿಸಿ, ಅಂಗಹೀನರನ್ನಾಗಿ ಮಾಡಿ ಬಲವಂತವಾಗಿ ಅತ್ಯಂತ ಹೀನ ದುಡಿಮೆಗೆ ಹಚ್ಚುವ ಜಾಲವೂ ಇದೆ. ಇಂತಹ ಜಾಲಗಳ ವಿರುದ್ಧ ಇಡೀ ಸಮಾಜ ಕಣ್ಣಿಡಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಅಧ್ಯಕ್ಷತೆ ವಹಿಸಿದ್ದರು. ರೈಲ್ವೆ ರಕ್ಷಣಾ ದಳ ನಿರೀಕ್ಷಕ ಶಾಜಿ ಮ್ಯಾಥು, ಬಿಇಒ ಬಿ.ಆರ್‌. ಬಸವರಾಜಪ್ಪ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪರಶುರಾಮ, ಮುಖ್ಯೋಪಾಧ್ಯಾಯ ಡಿ.ಆರ್‌. ನಾಗೇಂದ್ರಪ್ಪ, ಡಾನ್‌ ಬೋಸ್ಕೋ ಸಂಸ್ಥೆ ನಿರ್ದೇಶಕ ಸಿರಿಲ್‌ ಸಗಾಯರಾಜ್‌, ಎಸ್‌.ಡಿ. ಶಿವಾನಂದ, ಪಾಸ್ಟರ್‌ ಜೋಷ್‌ ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.