ಶಿಕ್ಷಣ-ಸಂಸ್ಕಾರದಿಂದ ಉತ್ತಮ ಭವಿಷ್ಯ


Team Udayavani, Feb 13, 2017, 1:18 PM IST

dvg6.jpg

ಹರಿಹರ: ಚಿಕ್ಕಂದಿನಲ್ಲೇ ಮಕ್ಕಳಿಗೆ ಪೋಷಕರು ಶ್ರೇಷ್ಠ ಶಿಕ್ಷಣ, ಸಂಸ್ಕಾರ ನೀಡಿದರೆ ಮಾತ್ರ ಅವರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಾಣೇಹಳ್ಳಿ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. 

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಪ್ರವಚನ ಮಾಲಿಕೆ ನಡೆಯುತ್ತಿರುವ ನಗರದ ಗಿರಿಯಮ್ಮ ಪದವಿ ಕಾಲೇಜು ಆವರಣದಲ್ಲಿ ಭಾನುವಾರ ಸಿದ್ದೇಶ್ವರ ಶ್ರೀಗಳ ಬಳಗ ಮತ್ತು ದೊಡ್ಡಬಾತಿ ತಪೋವನ ಆಯುರ್ವೇದ ಮೆಡಿಕಲ್‌ ಕಾಲೇಜು ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರಕ್ಕೆ ಸಸಿಗಳಿಗೆ  ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಬಹುತೇಕ ಪೋಷಕರು ಕೇವಲ ಶಾಲಾ- ಲೇಜುಗಳಲ್ಲಿ ದೊರೆಯುವ ಲೌಕಿಕ ಶಿಕ್ಷಣವನ್ನೇ ಅವಲಂಬಿಸಿರುತ್ತಾರೆ. ಇದರಿಂದ ಮಕ್ಕಳು ಉತ್ತಮ ಅಂಕ ಗಳಿಸಿ, ಒಳ್ಳೆಯ ಉದ್ಯೋಗ ನಂತರ ಹಣವನ್ನೂ ಸಂಪಾದನೆ ಮಾಡಬಹುದು. ಆದರೆ, ಬದುಕಿನಲ್ಲಿ ನೆಮ್ಮದಿಯಿಂದ ಇರುತ್ತಾರೆ ಎಂಬುದು ಖಾತ್ರಿಯಿಲ್ಲ ಎಂದರು. ಶಾಲಾ ಶಿಕ್ಷಣದ ಜತೆಗೆ ಪೋಷಕರು ಮಕ್ಕಳಿಗೆ ಸಚ್ಚಾರಿತ್ರ, ಸದ್ಭಾವನೆ ರೂಢಿಸಿಕೊಳ್ಳುವಂತಹ ನೈತಿಕ ಶಿಕ್ಷಣವನ್ನೂ ನೀಡಬೇಕು.

ನಗರದಲ್ಲಿ ಆಯೋಜಿಸಿರುವ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಪ್ರವಚನ ಇದಕ್ಕೆ ಅತ್ಯುತ್ತಮ ಅವಕಾಶವಾಗಿದೆ. ಯಾವುದೇ ಜಾತಿ, ಧರ್ಮಗಳಿಗೆ ಸೀಮಿತವಾಗದ ಶ್ರೀಗಳ ಪ್ರವಚನ ಪ್ರತಿಯೊಬ್ಬರಿಗೂ ಅತ್ಯುತ್ತಮ ರೀತಿಯಲ್ಲಿ ಬದುಕುವುದನ್ನು ಕಲಿಸಿಕೊಡುತ್ತದೆ ಎಂದರು.

ಮನುಷ್ಯ ದೈಹಿಕ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕವಾಗಿ ಬಲಿಷ್ಠನಾಗಿದ್ದರೆ ಮಾತ್ರ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಸರ್ವ ರೀತಿಯಲ್ಲಿ ಸಮರ್ಥಗೊಳಿಸುವ ಶಕ್ತಿ ಇರುವ ಶ್ರೀಗಳ ಪ್ರವಚನವನ್ನು ಕುಟುಂಬದ ಎಲ್ಲ ಸದಸ್ಯರೂ ಬಂದು ಕೇಳಿದರೆ ಶ್ರೀಗಳ ಹಿತವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು. 

ತಪೋವನ ಆಯುರ್ವೇದ ಆಸ್ಪತ್ರೆಯ ವೈದ್ಯರ ತಂಡ ಪ್ರವಚನಕ್ಕೆ ಕೇಳಲು ಆಗಮಿಸಿದ್ದ ಸಾವಿರಾರು ಭಕ್ತ ಜನರ ಆರೋಗ್ಯ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಿದರು. ಸಿದ್ದೇಶ್ವರ ಶ್ರೀಗಳು, ಸೇವಾ ಬಳಗದ ಗೌರವಾಧ್ಯಕ್ಷ ಎನ್‌.ಜಿ. ನಾಗನಗೌಡ, ಅಧ್ಯಕ್ಷ ಶರತ್‌ ಕೊಣ್ಣೂರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಎಚ್‌. ಪ್ಯಾಟಿ, ದಿನೇಶ್‌ ಕೊಣ್ಣೂರ್‌, ಆರ್‌. ಪ್ರಕಾಶ್‌, ಬೆಳ್ಳೂಡಿ ರಾಮಚಂದ್ರಪ್ಪ, ಆರ್‌.ಆರ್‌. ಕಾಂತರಾಜ್‌ ಶ್ರೇಷ್ಠಿ, ಎಂ.ಆರ್‌. ಸತ್ಯನಾರಾಯಣ, ತಪೋವನದ ಅಧ್ಯಕ್ಷ ಶಶಿಕುಮಾರ್‌ ಮತ್ತಿತತರಿದ್ದರು.  

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.