ಅಸಮಾನತೆ ಸೃಷ್ಟಿಸುತ್ತಿರುವ ಶಿಕ್ಷಣ ವ್ಯವಸ್ಥೆ: ಪರಮೇಶ್ವರಪ್ಪ
Team Udayavani, Feb 12, 2019, 7:39 AM IST
ಹರಿಹರ: ಶೈಕ್ಷಣಿಕ ವ್ಯವಸ್ಥೆಯಲ್ಲಿನ ಅಸಮಾನತೆಯಿಂದ ನಾಗರಿಕ ಸಮಾಜದಲ್ಲೂ ಅಸಮಾನತೆ ಸೃಷ್ಟಿಯಾಗುತ್ತಿದೆ ಎಂದು ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಅಧ್ಯಕ್ಷ, ಕರ್ನಾಟಕ ಸಮರ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಂದೂರು ಪರಮೇಶ್ವರಪ್ಪ ಹೇಳಿದರು.
ಇಲ್ಲಿನ ಕೆ.ಆರ್. ನಗರದಲ್ಲಿ ನಡೆದ ಸಮರ ಸೇನೆಯ ಕಾರ್ಯಕರ್ತರ ಸೇರ್ಪಡೆ ಹಾಗೂ ಹುದ್ದೆ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ಕಡೆ ಸಂಪ್ರದಾಯಿಕ ಸರ್ಕಾರಿ ಶಾಲೆಗಳು ಮತ್ತೂಂದೆಡೆ ಸಿಬಿಎಸ್‌ಇ, ಐಸಿಎಸ್‌ಇ ಮುಂತಾದ ಶೈಕ್ಷಣಿಕ ವ್ಯವಸ್ಥೆ ರೂಪಿಸುವ ಮೂಲಕ ನಮ್ಮ ಸರ್ಕಾರಗಳೇ ಸಮಾಜದಲ್ಲಿ ಅಸಮಾನತೆ ಮೂಡಿಸುತ್ತಿವೆ ಎಂದು ಆರೋಪಿಸಿದರು.
ಶಿಕ್ಷಣ ವ್ಯಾಪಾರದ ಸರಕಾಗಿದೆ. ಶ್ರೀಮಂತರು ತಮ್ಮ ಮಕ್ಕಳಿಗೆ ಅತ್ಯುತ್ತಮ ಸಂಸ್ಥೆಗಳಲ್ಲಿ ಶಿಕ್ಷಣ ಕೊಡಿಸಿದರೆ ಬಡ ಮಕ್ಕಳಿಗೆ ಸರ್ಕಾರಿ ಶಾಲೆಗಳು ಅನಿವಾರ್ಯವಾಗಿವೆ. ಉಚಿತ ಮತ್ತು ಗುಣಾತ್ಮಕ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಅಲ್ಲದೆ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಮೂಲಕ ಸಮಾನ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಸೇನೆಯ ರಾಜ್ಯ ಗೌರವಾಧ್ಯಕ್ಷ, ನಗರಸಭೆ ಸದಸ್ಯ ರೇವಣಸಿದ್ದಪ್ಪ, ಸಮಾನ ಶಿಕ್ಷಣ ಪದ್ಧತಿಯಿಂದ ಸಮಾಜದಲ್ಲಿ ತಾರತಮ್ಯ ಇಲ್ಲವಾಗುತ್ತದೆ ಎಂದರಲ್ಲದೆ ಕಾನೂನು, ಕಾಯಿದೆಗಳ ಅನುಷ್ಠಾನದ ಭಾಗವಾಗಿ ಸಂಘಟನೆಗಳು ಹೋರಾಡಬೇಕು ಎಂದರು.
ಪದಾಧಿಕಾರಿಗಳ ನೇಮಕ: ಎಸ್.ಅಬ್ದುಲ್ ಮಜೀದ್ (ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ), ವಿದ್ಯಾ ಮಂಜುನಾಥ್ (ಮಹಿಳಾ ಘಟಕದ ರಾಜ್ಯವಕ್ತಾರ), ಕವಿತಾ ಕುಬಸದ (ಹಾವೇರಿ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ), ಕೆ.ಯು. ಕುಬಸದ (ಹಾವೇರಿ ಜಿಲ್ಲಾ ಅಧ್ಯಕ್ಷ), ಪ್ರೇಮಲೀಲಾ (ರಾಜ್ಯ ಸಂಘಟನಾ ಕಾರ್ಯದರ್ಶಿ), ಪ್ರಜ್ವಲ್ (ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ), ಮಂಜುಳಾ (ಮಹಿಳಾ ಘಟಕದ ಕಾರ್ಯದರ್ಶಿ), ವಕೀಲರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಲತೇಶ್ ನೇಮಕ ಮಾಡಲಾಯಿತು.
ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಬಿ.ವಾಸುದೇವ್ ಅಧ್ಯಕ್ಷೆತೆ ವಹಿಸಿದ್ದರು. ರಾಜ್ಯ ಪದಾಧಿಕಾರಿಗಳಾದ ಸಿದ್ದೇಶ ಕೋಟೆಹಾಳ್, ಉಮೇಶ ಪಾಟೀಲ್, ಜಿ.ಪಿ. ಪ್ರಕಾಶ, ದಾವಣಗೆರೆ ಜಿಲ್ಲಾಧ್ಯಕ್ಷ ಯೋಗೇಶ್, ಜಿಲ್ಲಾಧ್ಯಕ್ಷೆ ಲೀಲಾ ಮಾಗನಹಳ್ಳಿ , ಭಾಗ್ಯದೇವಿ, ಮಾಲಾ, ಮನು, ಲಕ್ಷ್ಮಿ, ಹರಿಣಿ, ಮಧುಮತಿ, ಪ್ರೇಮ, ಮಂಜುನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.