Election Campaign; ಜಾತಿ ರಾಜಕಾರಣದಿಂದ ನನಗೆ ಟಿಕೆಟ್ ಕೈ ತಪ್ಪಿತು: ರಘುಪತಿ ಭಟ್
Team Udayavani, May 28, 2024, 6:45 PM IST
ಹೊನ್ನಾಳಿ: ಜಾತಿ ರಾಜಕೀಯದಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲಾಯಿತು ಎಂದು ಉಡುಪಿ ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಆರೋಪಿಸಿದರು.
ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ನಾನು ಈಗಾಗಲೇ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಿದ್ದೇನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಪ್ರಭಾರಿಯಾಗಿ ಪಕ್ಷದ ಅಭ್ಯರ್ಥಿ ಪರ ಸತತ 42 ದಿನ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.
ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ ಮೇಲೆ ವಿಧಾನ ಪರಿಷತ್ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದರು.
ಈಗ ಟಿಕೆಟ್ ನೀಡದೆ ಕೈ ಕೊಟ್ಟಿದ್ದರಿಂದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಮತಯಾಚನೆ ಮಾಡುತ್ತಿದ್ದೇನೆ. ನನ್ನ ಗೆಲುವು ಗ್ಯಾರಂಟಿ. ನಾನು ಗೆದ್ದ ಮೇಲೆ ಪುನಃ ಬಿಜೆಪಿ ಸೇರುತ್ತೇನೆ. ಜನಸೇವೆಗಿಂತ ಮಿಗಿಲಾದ ಸೇವೆಯಿಲ್ಲ ಎಂದು ನಂಬಿರುವ ನಾನು, ಶಾಸಕನಾಗಿದ್ದ ಸಂದರ್ಭದಲ್ಲಿ ಬರಡು ಬಿದ್ದಿದ್ದ ಉಡುಪಿ ಕ್ಷೇತ್ರದ ಸಾವಿರಾರು ಎಕರೆ ಜಮೀನನ್ನು ಕೃಷಿ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆ. ಇದರ ಫಲವಾಗಿ ಇಂದು ಭೂಮಿ ಹಸಿರಿನಿಂದ ಕಂಗೊಳಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.