ಉದ್ಯೋಗ ಖಾತ್ರಿ ಹಣ ಕನ್ನಡಿಯೊಳಗಿನ ಗಂಟು
Team Udayavani, Apr 10, 2017, 1:06 PM IST
ಹೊನ್ನಾಳಿ: ಉದ್ಯೋಗ ಖಾತ್ರಿ ಹಣ ಕನ್ನಡಿಯೊಳಗಿನ ಗಂಟು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ತಾಲೂಕಿನ ಬೆಳಗುತ್ತಿ ಗ್ರಾಮದ ಇಸ್ರಾಪುರ ಬಾಳೆಕಟ್ಟೆ ಕೆರೆ ಹೂಳೆತ್ತುವುದು ಸೇರಿದಂತೆ ರಸ್ತೆ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಸಾಕಷ್ಟು ಅನುದಾನವಿದೆ. ಆದರೆ ಕೂಲಿ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಿಲ್ಲ. ಮತ್ತೆ ಕೆಲವೆಡೆ ಗುತ್ತಿಗೆದಾರರೇ ಮುಂಗಡವಾಗಿ ಕಾರ್ಮಿಕರಿಗೆ ಹಣ ನೀಡಿ ಕೆಲಸ ಮಾಡಿಸುತ್ತಾರೆ. ಆದರೆ ನಂತರದ ದಿನಗಳಲ್ಲಿ ಜಾಬ್ ಕಾರ್ಡ್ ಹೊಂದಿರುವ ಕಾರ್ಮಿಕರು ತಮ್ಮ ಖಾತೆಗಳಿಗೆ ಸಂದಾಯವಾದ ಹಣವನ್ನು ಬಿಡಿಸಿಕೊಡುವಲ್ಲಿ ಅನಗತ್ಯ ವಿಳಂಬ ಮಾಡುತ್ತಾರೆ.
ಇದರಿಂದ ಗುತ್ತಿಗೆದಾರರು ನಷ್ಟ ಅನುಭವಿಸುವಂತಾಗುತ್ತದೆ. ಕಾಮಗಾರಿಗಳನ್ನು ನಿರ್ವಹಿಸಲು ಯಾರೂ ಮುಂದೆ ಬರುತ್ತಿಲ್ಲ. ಈ ಕಾರಣಕ್ಕಾಗಿ ಉದ್ಯೋಗ ಖಾತ್ರಿ ಹಣ ಕನ್ನಡಿಯೊಳಗಿನ ಗಂಟಿನಂತಾಗಿದೆ ಎಂದು ಅಭಿಪ್ರಾಯಪಟ್ಟರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಕಾಮಗಾರಿಗಳನ್ನು ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಅನುಷ್ಠಾನಗೊಳಿಸಿ ಎಂದು ಸೂಚಿಸುತ್ತವೆ.
ಖಾತ್ರಿ ಯೋಜನೆಯಡಿ ಸಾಕಷ್ಟು ಅನುದಾನವೂ ಲಭ್ಯವಿದೆ. ಆದರೆ ಕೂಲಿ ಕಾರ್ಮಿಕರ ಕೊರತೆಯ ಕಾರಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ನಡೆಸಲು ಆಗುತ್ತಿಲ್ಲ. ವಿವಿಧೆಡೆ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹರಟೆ ಕಟ್ಟೆಗಳಲ್ಲಿ ಕುಳಿತು ಕಾಲಹರಣ ಮಾಡುತ್ತಾರೆಯೋ ಹೊರತು ಖಾತ್ರಿ ಯೋಜನೆಯಡಿ ಕೆಲಸಕ್ಕೆ ಬರುವುದಿಲ್ಲ.
ಈ ಬೇಸಿಗೆಯಲ್ಲಿ ಅತಿ ಹೆಚ್ಚಿನ ಬಿಸಿಲು ಇರುವ ಕಾರಣಕ್ಕೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಕೆಲಸ ನಿರ್ವಹಿಸಿ ಎಂದು ರಿಯಾಯಿತಿ ತೋರಿಸಿದರೂ ಯಾರೂ ಕೆಲಸಕ್ಕೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಳಗುತ್ತಿ ಗ್ರಾಮದ 13 ಹೆಕ್ಟೇರ್ ವಿಸ್ತೀರ್ಣದ ಇಸ್ರಾಪುರ ಬಾಳೆಕಟ್ಟೆ ಕೆರೆ ಹೂಳೆತ್ತುವುದು, ರಸ್ತೆ ಅಭಿವೃದ್ಧಿ, ಕೆರೆ ಏರಿ ದುರಸ್ತಿ, ಕೋಡಿ ದುರಸ್ತಿ, ತೂಬು ದುರಸ್ತಿ, ಕಾಲುವೆಗಳ ಲೆ„ನಿಂಗ್, ಕೆರೆ ಸುತ್ತ ಟ್ರೆಂಚ್ ಹೊಡೆಸಿ ಗಿಡಗಳನ್ನು ನೆಡುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಲು ನಬಾಡ್ ìನಿಂದ 39 ಲಕ್ಷ ರೂ. ಬಿಡುಗಡೆಯಾಗಿದೆ. ಮಳೆಗಾಲ ಪಾರಂಭವಾಗುವುದರೊಳಗೆ ಹೂಳೆತ್ತುವ ಕೆಲಸ ಶೀಘ್ರ ಮುಗಿಸಬೇಕು ಎಂದು ಸೂಚಿಸಿದರು.
ಬೆಳಗುತ್ತಿ-ಹೊಸಕೊಪ್ಪ ಮಾರ್ಗದ 3ಕಿ.ಮೀ. ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಯಾಗಿದೆ. ಶೀಘ್ರದಲ್ಲೇ ಈ ಕಾಮಗಾರಿ ಪ್ರಾರಂಭವಾಗಲಿದೆ. ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ 72 ಕೋಟಿ ರೂ.ಗಳಷ್ಟು ಹಣ ಮೀಸಲಿಡಲಾಗಿದೆ. ಈ ವರ್ಷದ ಡಿಸೆಂಬರ್ ಕೊನೆಯ ಒಳಗೆ ಎಲ್ಲಾ ರಸ್ತೆಗಳನ್ನೂ ಅಭಿವೃದ್ಧಿಪಡಿಸಲಾಗುವುದು.
ತಾಲೂಕಿನ ಕುಂದೂರು ಕೆರೆ ಅಭಿವೃದ್ಧಿಗೂ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. ಬೆಳಗುತ್ತಿ ಗ್ರಾಪಂ ಅಧ್ಯಕ್ಷೆ ರೇಖಾ ಪ್ರಕಾಶ್, ಉಪಾಧ್ಯಕ್ಷ ಮಲ್ಲಿಗೇನಹಳ್ಳಿ ಪರಮೇಶ್ವರಪ್ಪ ಗ್ರಾಪಂ ಸದಸ್ಯ ಬಿ.ಟಿ. ಕುಬೇರಪ್ಪ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಂ.ಜಿ. ಬಸವರಾಜಪ್ಪ ಮಾತನಾಡಿದರು. ಗ್ರಾಪಂ ಸದಸ್ಯರಾದ ಎಸ್.ಟಿ. ಅಶೋಕ್,
ಎಸ್.ಕೆ. ತೀರ್ಥಲಿಂಗಪ್ಪ, ಎ.ಕೆ. ಕರಿಬಸಪ್ಪ, ಎಲ್. ನಾಗರಾಜ್, ನಾಗರತ್ನಮ್ಮ, ರಶ್ಮಿ, ಸಿದ್ಧಾರ್ಥಿನಿ ಅರಸ್, ಮಾಜಿ ಉಪಾಧ್ಯಕ್ಷ ಎ.ಕೆ. ಕಳ್ಳಿಹಾಲಪ್ಪ, ಮುಖಂಡರಾದ ಕೆ. ಮಹೇಶ್ವರಪ್ಪ, ಕೆ. ಶೇಖರಪ್ಪ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಂಜುನಾಥ್ ಕಪಾಲಿ, ಎಇಇ ಗಿರೀಶ್, ಗುತ್ತಿಗೆದಾರ ಎಂ.ಜಿ. ಸಿದ್ದೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.