ದೇಶದ ಪ್ರಗತಿಗೆ ಉದ್ಯಮಿಗಳ ಪಾತ್ರ ಮಹತ್ವದ್ದು
ಅವಶ್ಯಕತೆ ಇದ್ದರಷ್ಟೇ ಸಾಲ ಪಡೆದು ಅಭಿವೃದ್ಧಿ ಸಾಧಿಸಿ
Team Udayavani, May 3, 2022, 1:12 PM IST
ದಾವಣಗೆರೆ: ದೇಶದ ಆರ್ಥಿಕತೆಯಲ್ಲಿ ಉದ್ದಿಮೆದಾರರ ಪಾತ್ರ ಪ್ರಮುಖವಾದದ್ದು ಎಂದು ಲೀಡ್ ಬ್ಯಾಂಕ್ ಮಾರ್ಗದರ್ಶಿ ವ್ಯವಸ್ಥಾಪಕ ಸುಶೃತ್ ಡಿ. ಶಾಸ್ತ್ರಿ ಹೇಳಿದರು.
ನಗರದ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಸೆಮಿನಾರ್ ಹಾಲ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಮತ್ತು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ಒಂದು ದಿನದ ಉದ್ಯಮಶೀಲತಾ ತಿಳಿವಳಿಕೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಬ್ಯಾಂಕಿಂಗ್ ವ್ಯವಸ್ಥೆಯ ನೀತಿ ನಿಯಮಗಳು, ಅವಶ್ಯಕತೆಗೆ ಅನುಸಾರವಾಗಿ ಸಾಲ ಪಡೆಯಬೇಕು ಎಂದರು. ಉತ್ತಮ ಯೋಜನಾ ವರದಿಗಳ ಕುರಿತು ಹಾಗೂ ಉದ್ಯಮದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿಕೊಟ್ಟರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗಿರೀಶ್ ಕೆ.ಎನ್. ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯಮವನ್ನು ಸ್ಥಾಪಿಸುವುದಷ್ಟೇ ಅಲ್ಲದೆ ಉದ್ಯಮ ಕುರಿತು ಸಂಪೂರ್ಣ ಜ್ಞಾನ ಹೊಂದುವುದು ಅತ್ಯಂತ ಮುಖ್ಯ. ಉದ್ಯಮದ ಮಾರುಕಟ್ಟೆ ವ್ಯಾಪ್ತಿ, ಹಣಕಾಸಿನ ಸೌಲಭ್ಯ, ಸಂಪನ್ಮೂಲಗಳ ಸರಿಯಾದ ಬಳಕೆ ಬಗ್ಗೆ ಅರಿವು ಇರಬೇಕು. ಕಾಲಕ್ಕನುಗುಣವಾಗಿ ತಾಂತ್ರಿಕವಾಗಿ ಉನ್ನತೀಕರಣಗೊಂಡಲ್ಲಿ ಮಾತ್ರ ಯಶಸ್ವಿ ಉದ್ಯಮದಾರರಾಗಲು ಸಾಧ್ಯ ಎಂದರು.
ಶ್ರೀ ಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಕಾರ್ಯದರ್ಶಿ ಪ್ರವೀಣಕುಮಾರ ಎಸ್. ಮಾತನಾಡಿ, ಮೊದಲು ಸಣ್ಣ ಪ್ರಮಾಣದಲ್ಲಿ ಉದ್ಯಮ ಸ್ಥಾಪಿಸಬೇಕು. ಛಲ ಬಿಡದೆ ಸತತ ಪ್ರಯತ್ನ ಮಾಡಿದರೆ ಖಂಡಿತವಾಗಿಯೂ ಉದ್ಯಮದಲ್ಲಿ ಯಶಸ್ಸು ಗಳಿಸಬಹುದು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ಸಿಡಾಕ್‌ನ ಜಂಟಿ ನಿರ್ದೇಶಕ ಆರ್.ಪಿ. ಪಾಟೀಲ್, ಸಿಡಾಕ್ ಸಂಸ್ಥೆಯ ಕಾರ್ಯವೈಖರಿ, ಕಾರ್ಯಕ್ರಮಗಳು ಹಾಗೂ ತರಬೇತಿ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ದಾವಣಗೆರೆ ಜನಶಿಕ್ಷಣ ಸಂಸ್ಥೆಯ ನಿವೃತ್ತ ನಿರ್ದೇಶಕ ಮುಕುಂದಪ್ಪ ಬಿ. ಅವರು ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮವನ್ನು ಯಾವ ರೀತಿಯಲ್ಲಿ ಪ್ರಾರಂಭಿಸಬೇಕು. ಉದ್ಯಮ ಆರಂಭಿಸಲು ಇರುವಂತಹ ಅವಕಾಶಗಳನ್ನು ಗುರುತಿಸುವುದು ಹೇಗೆ, ಸವಾಲುಗಳನ್ನು ಎದುರಿಸುವ ಬಗೆ, ಸರ್ಕಾರಿ ಯೋಜನೆಗಳ ಮತ್ತು ವಿವಿಧ ಇಲಾಖೆಗಳ ಬಗ್ಗೆ ತಿಳಿಸಿದರು.
ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ಪ್ರಭಾರಿ ವ್ಯವಸ್ಥಾಪಕ ಶಾಂತರಾಜು, ತರಬೇತುದಾರ ಬಸವರಾಜ ಜಿ.ಬಿ., ವಿನಯ ಜಿ.ಕೆ. ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.