ಬರ ಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿ
Team Udayavani, Jan 10, 2017, 12:08 PM IST
ದಾವಣಗೆರೆ: ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿ ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸಜ್ಜಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಸೂಚಿಸಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಈ ಬಾರಿ ಇಡೀ ಜಿಲ್ಲೆ ಬರಕ್ಕೆ ತುತ್ತಾಗಿದೆ.
ಮಳೆಗಾಲಕ್ಕೆ ಇನ್ನೂ 6 ತಿಂಗಳು ಕಾಯಬೇಕಿದೆ. ಅಲ್ಲಿಯವರೆಗೆ ಬರ ಪರಿಸ್ಥಿತಿ ನಿಭಾಯಿಸಲು ಎಲ್ಲಾ ಇಲಾಖೆಗಳು ಸಜ್ಜಾಗಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಅಗತ್ಯ ಮೇವಿನ ದಾಸ್ತಾನು ಹಾಗೂ ನರೇಗಾ ಯೋಜನೆಯಿಂದ ಕೆಲಸ ನೀಡುವ ಮೂಲಕ ಪರಿಸ್ಥಿತಿ ನಿಭಾಯಿಸಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ಕೊಳವೆಬಾವಿ ಕೊರೆಸಲು ಪ್ರಸುತ್ತ ಸ್ಯಾಟ್‌ಲೆ„ಟ್ ಮ್ಯಾಪಿಂಗ್ ಅನುಸರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 384 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ.
ಈ ಪೈಕಿ 168 ಗ್ರಾಮಗಳ ಕಾಮಗಾರಿಗಳಿಗೆ ಕ್ರಿಯಾಯೋಜನೆ ಅನುಮೋದನೆ ದೊರೆತಿದೆ. 40 ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆಸಲು ಅನುದಾನ ಕೋರಲಾಗಿದೆ ಎಂದರು. ಟಾಸ್ಕ್ಪೋರ್ಸ್‌ಅಡಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 60 ಲಕ್ಷ ರೂ. ಬಿಡುಗಡೆಯಾಗಿದ್ದು, 308 ಕಾಮಗಾರಿ ಕೈಗೊಳ್ಳಲಾಗುವುದು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನಾಗನೂರು ಹಾಗೂ ಮಾರಗೊಂಡನಹಳ್ಳಿ ಕಾಮಗಾರಿ ಪೂರ್ಣಗೊಂಡಿವೆ. ಕುಡಿಯುವ ನೀರಿಗೆ ಹೆಚ್ಚು ಸಮಸ್ಯೆಗಳಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್ ಒಂದಕ್ಕೆ 800 ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.
ಆಗ ಮಧ್ಯ ಪ್ರವೇಶಿಸಿದ ಉಮಾಶಂಕರ್, ಬೆಂಗಳೂರಿನಲ್ಲಿ 400, ಚಿತ್ರದುರ್ಗದಲ್ಲಿ 600 ರೂ.ಗೆ ಒಂದು ಟ್ಯಾಂಕರ್ ನೀರು ದೊರೆಯುವಾಗ 800 ರೂಗಳು ಜಾಸ್ತಿಯಾಯಿತು ಮತ್ತೂಮ್ಮೆ ಪರಿಶೀಲಿಸಿ ಎಂದಾಗ, ಅಪರ ಜಿಲ್ಲಾಧಿಧಿಕಾರಿ ಪದ್ಮ ಬಸವಂತಪ್ಪ, ಕೆಲವು ಗ್ರಾಮಗಳು ದೂರದಲ್ಲಿರುವುದರಿಂದ ಆ ವ್ಯತ್ಯಾಸ ಆಗುತ್ತಿದೆ ಎಂದರು.
ಉದ್ಯೋಗ ಖಾತ್ರಿ ಯೋಜನೆ ಕುರಿತ ಚರ್ಚೆ ವೇಳೆ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ಷಡಾಕ್ಷರಪ್ಪ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಪ್ರಸಕ್ತ ಸಾಲಿಗೆ ಜಿಲ್ಲೆಗೆ 42.84 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಇದೀಗ 100 ರಿಂದ 150 ಮಾನವ ದಿನಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 5000 ದಿನಗಳು ಸೃಷ್ಟಿಯಾಗಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಉಮಾಶಂಕರ್, ಖಾತ್ರಿ ಯೋಜನೆಯಡಿ ಹೆಚ್ಚು ಜನರು ಕೆಲಸ ಮಾಡಲು ಪರಿಣಾಮಕಾರಿ ರೀತಿಯಲ್ಲಿ ಮನವೊಲಿಸಬೇಕು. ರಾಜ್ಯ ಸರ್ಕಾರ ನೀಡಿದ ಅನುದಾನದಲ್ಲಿ ಕಾರ್ಮಿಕರಿಗೆ ಪಾವತಿಸಿ, ಕೇಂದ್ರದ ಅನುದಾನದಲ್ಲಿ ಘಟಕಗಳ ಖರ್ಚಿಗೆ ಉಪಯೋಗಿಸಬಹುದು ಎಂದರು.
ಕೃಷಿ ಇಲಾಖೆ ಜಂಟಿ ನಿದೇಶಕ ವಿ. ಸದಾಶಿವ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಹವಾಮಾನ ಆಧಾರಿತ 4563, ಕೃಷಿ ಇಲಾಖೆಯಲ್ಲಿ 25000 ರೈತರು ಫಸಲ್ ಬಿಮಾ ಯೋಜನೆ ಅಡಿ ವಿಮೆ ಮಾಡಿಸಿದ್ದಾರೆ. ಈ ಬಾರಿ ಶೇ.50 ಇಳುವರಿ ಕಡಿಮೆ ಆಗಿದೆ. ಶೇಂಗಾ ಮತ್ತು ರಾಗಿ ಬೆಳೆಯಲ್ಲಿ ಹೆಚ್ಚು ನಷ್ಟ ಆಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಧಿಕಾರಿ ಎಸ್. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್. ಷಡಕ್ಷರಪ್ಪ, ಯೋಜನಾ ನಿರ್ದೇಶಕ ರಂಗಸ್ವಾಮಿ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.