ಪ್ರತಿಯೊಬ್ಬರು ಉತ್ತಮಆರೋಗ್ಯವಂತರಾಗಲಿ


Team Udayavani, Oct 30, 2017, 3:41 PM IST

30-24.jpg

ದಾವಣಗೆರೆ: ರೈತರು, ಬಡವರು ಶ್ರಮಿಕ ವರ್ಗದವರು ಸರ್ಕಾರ ರೂಪಿಸಿ ಯೋಜನೆಗಳ ಸೌಲಭ್ಯ ಪಡೆಯುವ ಮೂಲಕ ಉತ್ತಮ ಆರೋಗ್ಯವಂತರಾಗಬೇಕು ಎಂದು ಡಾ| ಪ್ರಭಾ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಿಳಿಸಿದರು.

ಬೇತೂರು ಗ್ರಾಮ ಪಂಚಾಯತಿ ಮತ್ತು ಬಾಪೂಜಿ ವಿದ್ಯಾಸಂಸ್ಥೆಯ ಎಸ್‌. ಎಸ್‌. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಸಹಯೋಗದಲ್ಲಿ ಬೇತೂರು ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಬೃಹತ್‌ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಮಾನಗಳಲ್ಲಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವುದು ಅನಿವಾರ್ಯ ಮತ್ತು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶದ ಜನತೆಗೆ ಆರೋಗ್ಯದ ಬಗ್ಗೆ ಅರಿವು ಮತ್ತು ಸೌಲಭ್ಯ ನೀಡುವ ಹಿನ್ನೆಲೆಯಲ್ಲಿ ಕಳೆದ  ಒಂದು ತಿಂಗಳಿನಿಂದ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಶಿಬಿರದ ಮೂಲಕ ತಮ್ಮ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ತೆಗೆದುಕೊಂಡು ಬಂದಿದ್ದು, ಶಿಬಿರದಲ್ಲಿ ಕೇವಲ ಆರೋಗ್ಯ ತಪಾಸಣೆ ಮಾತ್ರ ಮಾಡಲಾಗುವುದು. ಹೆಚ್ಚಿನ ಚಿಕಿತ್ಸೆ ಅನಿವಾರ್ಯವಾದಲ್ಲಿ ಸರ್ಕಾರದ ಸೌಲಭ್ಯದೊಂದಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ರಕ್ತದಾನ ಮಹಾದಾನ. 18-60 ವರುಷದ ಪುರುಷ- ಮಹಿಳೆಯರು ಎಂಬ ಬೇಧವಿಲ್ಲದೇ ರಕ್ತದಾನ ಮಾಡಬಹುದು. ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸುವುದರ ಜೊತೆಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. 

ಪ್ರಾಸ್ತಾವಿಕ ಮಾತುಗಳಾಡಿದ ಎಸ್‌. ಎಸ್‌. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ| ಬಿ.ಎಸ್‌. ಪ್ರಸಾದ್‌, ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಪ್ರಾಂಶುಪಾಲ ಡಾ| ವಸುಂಧರಾ ಶಿವಣ್ಣ, ಆರೋಗ್ಯವಂತರಾದರೆ ಮಾತ್ರ ನಾವು ಜೀವನದಲ್ಲಿ ಏನನ್ನಾದರೂ ಸಾ ಧಿಸಲು ಸಾಧ್ಯ. ಪ್ರತಿಯೊಬ್ಬರು ಅರಿತು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಶಿಬಿರ ಸಂಘಟಕ ವೀರೇಶ್‌ ಪಟೇಲ್‌ ಮಾತನಾಡಿ, ಕಳೆದ 4 ಭಾನುವಾರಗಳಿಂದ ದಾವಣಗೆರೆ ತಾಲ್ಲೂಕಿನ ಪ್ರಮುಖ ಪಂಚಾಯಿತಿ ವ್ಯಾಪ್ತಿಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗಿದೆ. ಮುಂದಿನ ಭಾನುವಾರ ಕುಕ್ಕವಾಡ ತದ ನಂತರ ಕಡ್ಲೆಬಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷ ರತ್ನಮ್ಮ ಪರಸಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಸದಸ್ಯೆ ರೇಣುಕಾ ಕರಿಬಸಪ್ಪ, ಮಾಜಿ ಸದಸ್ಯ ಪಿ. ಕರಿಬಸಪ್ಪ, ಕಾಡಾ ಸಮಿತಿ ಸದಸ್ಯ ಎಚ್‌. ಬಸವರಾಜಪ್ಪ, ಎಪಿಎಂಸಿ ನಿರ್ದೇಶಕರಾದ ಎಂ.ಕೆ. ರೇವಣಸಿದ್ದಪ್ಪ, ರಾಜಣ್ಣ ತೋಟದ್‌, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ ಬಸವರಾಜಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಂಬಾ, ಡಾ| ಆರ್‌.ಜಿ. ಗೀತಾಲಕ್ಷ್ಮಿಇತರರು ಇದ್ದರು.

ಟಾಪ್ ನ್ಯೂಸ್

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

Kannada Rajyotsava: ಕರ್ನಾಟಕಕ್ಕೆ ಬಂದಿದ್ದೇ ಒಂದು ಪವಾಡ

Kannada Rajyotsava: ಕರ್ನಾಟಕಕ್ಕೆ ಬಂದಿದ್ದೇ ಒಂದು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Gold worth Rs 12.95 crore stolen from Nyamathi SBI Bank

Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.