ಸಂಸ್ಕೃತಿ, ಸಂಸ್ಕಾರದಿಂದ ಜೀವನ ವಿಕಾಸ
•ವೀರಶೈವ ಧರ್ಮಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರು-ಬಸವಣ್ಣನವರು ಎರಡು ಕಣ್ಣು ಇದ್ದ ಹಾಗೆ
Team Udayavani, Jul 30, 2019, 9:21 AM IST
ದಾವಣಗೆರೆ: ಅಭಿನವ ರೇಣುಕ ಮಂದಿರದಲ್ಲಿ 24ನೇ ವರ್ಷದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಂಗಮದ 3ನೇ ದಿನ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್‌ರನ್ನು ಸನ್ಮಾನಿಸಿದ ಸಂದರ್ಭ.
ದಾವಣಗೆರೆ: ಅಂತರಂಗ-ಬಹಿರಂಗ ಶುದ್ಧಿಗೊಂಡಾಗ ಬದುಕಿನಲ್ಲಿ ಶಾಂತಿ ಕಾಣಲು ಸಾಧ್ಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ| ವೀರಸೋಮೇಶ್ವರ ಜಗದ್ಗುರುಗಳು ಹೇಳಿದ್ದಾರೆ.
ಸೋಮವಾರ, ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಂಗಮ 3ನೇ ದಿನ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಸತ್ಯ ಶುದ್ಧವಾದ ಸಂಸ್ಕಾರ ಮತ್ತು ಸಂಸ್ಕೃತಿ ಅಳವಡಿಸಿಕೊಂಡಾಗ ಜೀವನ ವಿಕಾಸಗೊಳ್ಳುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಪ್ರತಿಪಾದಿಸಿದರು.
ಪ್ರತಿಯೊಬ್ಬ ಮನುಷ್ಯನಿಗೆ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ಪುರುಷಾರ್ಥಗಳ ಅವಶ್ಯಕತೆಯಿದೆ. ಧರ್ಮದ ತಳಹದಿಯ ಮೇಲೆ ಅವೆಲ್ಲವುಗಳನ್ನು ಪಡೆಯಬೇಕಿದೆ. ಒಳ್ಳೆಯದಕ್ಕೂ ಕೆಟ್ಟದ್ದಕ್ಕೂ ಮನುಷ್ಯನ ಮನಸ್ಸೇ ಕಾರಣ. ಮನುಷ್ಯ ಬಾನೆತ್ತರದ ಸಾಧನೆ ಮಾಡಿದರೂ ಕಾಲು ನೆಲದಲ್ಲಿಯೇ ಇರಬೇಕಿದೆ ಎಂದು ಹೇಳಿದರು.
ಜಾಗತೀಕರಣ, ಉದಾರೀಕರಣದ ಜೊತೆಗೆ ಮಾನವೀಯತೆಯ ಅಂತ:ಕರಣ ಬೆಳೆಯುವ ಅವಶ್ಯಕತೆ ಇದೆ. ಶಾಂತಿ ಒಂದಿದ್ದರೆ ಸಕಲ ಸಿರಿ ಸಂಪತ್ತು ಇದ್ದಂತೆ. ಶಾಂತಿಗೆ ಸಮನಾದ ಸಂಪತ್ತು ಇನ್ನೊಂದಿಲ್ಲ. ಆಚಾರ್ಯರು ಮತ್ತು ಶರಣರು ಶಾಂತಿ ಸಮೃದ್ಧಿಯ ಬದುಕಿನ ನಿರ್ಮಾಣಕ್ಕಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವ ಧರ್ಮಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಮತ್ತು ಬಸವಣ್ಣನವರು ಎರಡು ಕಣ್ಣು ಇದ್ದ ಹಾಗೆ. ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಆಚಾರ್ಯರು ಮತ್ತು ಶರಣರ ಧಾರ್ಮಿಕ, ಸಾಮಾಜಿಕ ಚಿಂತನೆಗಳು ನಮ್ಮೆಲ್ಲರಿಗೂ ದಾರಿ ದೀಪ ಎಂದರು.
ಇದೇ ಸಂದರ್ಭದಲ್ಲಿ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ ಇವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ, ಆಶೀರ್ವದಿಸಿದರು.
ಕಂದನಕೋವಿ ಶಿವಕುಮಾರ್, ಇತರರು ಅತಿಥಿಗಳಾಗಿದ್ದರು. ಹಲವು ಗಣ್ಯರು ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರು ರಕ್ಷೆಯಿತ್ತು ಶುಭ ಹಾರೈಸಿದರು. ಆವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಉಪಸ್ಥಿತರಿದ್ದರು.
ಗದುಗಿನ ಗಾನಭೂಷಣ ವೀರೇಶ ಕಿತ್ತೂರ ಅವರಿಂದ ಭಕ್ತಿಗೀತೆ, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ ಜರುಗಿತು. ಜಿ.ಕೆ. ವಿಜಯಕುಮಾರ ಸ್ವಾಗತಿಸಿದರು. ಐನಹಳ್ಳಿ ವಸಂತಕುಮಾರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.