ಲಾರಿ ಮಾಲೀಕರಿಗೆ ವಿನಾಯಿತಿ ನೀಡಿ: ಸೈಯದ್
Team Udayavani, May 29, 2021, 9:41 AM IST
ದಾವಣಗೆರೆ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಲಾರಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಲಾರಿ ಮಾಲೀಕರಿಗೆ ಕೆಲವು ವಿನಾಯಿತಿ ನೀಡಿ, ಚಾಲಕರಿಗೆ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಜಿಲ್ಲಾ ಲಾರಿ ಮಾಲೀಕರು ಮತ್ತು ಟ್ರಾನ್ಸ್‌ಪೊàರ್ಟ್ ಏಜೆಂಟರ್ ಸಂಘದ ಅಧ್ಯಕ್ಷ ಸೈಯದ್ ಸೈಫುಲ್ಲಾ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾರಿ ಮಾಲೀಕರ ಸಂಕಷ್ಟವನ್ನು ಅರಿತು ಸರ್ಕಾರ 1ರಿಂದ 3 ಲಾರಿ ಹೊಂದಿರುವ ಮಾಲೀಕರಿಗೆ ಒಂದು ವರ್ಷ ಕಾಲ ತೆರಿಗೆ ವಿನಾಯಿತಿ ನೀಡಬೇಕು. ಮಾಲೀಕರ ಆರ್ಥಿಕ ಸ್ಥಿತಿ ಸುಧಾರಿಸುವವರೆಗೂ ಕನಿಷ್ಠ 3 ತಿಂಗಳುಗಳ ಕಾಲ ಟೋಲ್ ಸಂಗ್ರಹಿಸಬಾರದು. ಲಾರಿ ಖರೀದಿಗೆ ಹಣಕಾಸು ಸಂಸ್ಥೆಗಳು ನೀಡಿರುವ ಸಾಲ ಮರು ಪಾವತಿ ಮಾಡಲು ಒಂದು ಬಡ್ಡಿ ರಹಿತವಾಗಿ ಕಂತು ತುಂಬಿಸಿಕೊಳ್ಳಲು ನಿರ್ದೇಶನ ನೀಡಬೇಕು. ಲಾರಿ ಚಾಲಕರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು. ಕಳೆದ ವರ್ಷದ ಲಾಕ್‌ಡೌನ್ ವೇಳೆಯಲ್ಲಿ ಲೀಟರ್‌ಗೆ 68 ರೂ. ಇದ್ದ ಡೀಸೆಲ್ ಈಗ 91 ರೂ. ತಲುಪಿದೆ. ಹೀಗೆ ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಸರ್ಕಾರದ ಕ್ರಮದಿಂದ ಲಾರಿ ಮಾಲೀಕರಿಗೆ ಆರ್ಥಿಕ ಹೊರೆ ಆಗುತ್ತಿದೆ. ಆದ್ದರಿಂದ ತಕ್ಷಣವೇ ಡೀಸೆಲ್ ಬೆಲೆ ಏರಿಕೆಯನ್ನು ವಾಪಾಸ್ ಪಡೆಯಬೇಕು. ಇಲ್ಲದಿದ್ದರೆ, ಲಾಕ್‌ಡೌನ್ ಬಳಿಕ ಲಾರಿ ಮಾಲೀಕರು ಮುಷ್ಕರ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೋವಿಡ್ ಸಂಕಷ್ಟದ ನಡುವೆಯೇ ಡೀಸೆಲ್, ವಾಹನಗಳ ಬಿಡಿ ಭಾಗಗಳು, ಟೈರ್‌ಗಳ ಬೆಲೆ ಶೇ.15 ರಷ್ಟು ಏರಿಕೆಯಾಗಿವೆ. ಈ ಬೆಲೆ ಏರಿಕೆಯು ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಲಾರಿ ಮಾಲೀಕರ ಗಾಯದ ಮೇಲೆ ಬರೆ ಎಳೆದಿದೆ. ಅಲ್ಲದೇ ಟೋಲ್, ಟ್ಯಾಕ್ಸ್, ತ್ತೈಮಾಸಿಕ ರಸ್ತೆ ತೆರಿಗೆ, ಎಫ್‌ಸಿ, ಪರ್ಮಿಟ್ ಶುಲ್ಕಗಳು ಸಹ ಹೆಚ್ಚಳವಾಗಿದೆ. ಈ ನಡುವೆ ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್‌ಡೌನ್, ಜನತಾ ಕರ್ಫ್ಯೂ ವಿಧಿಸಿ, ಅಗತ್ಯ ವಸ್ತುಗಳ ಸರಕು ಸಾಗಾಣಿಕೆಗೆ ಅವಕಾಶ ನೀಡಿದೆ. ಆದರೆ, ಉದ್ದಿಮೆ ಮತ್ತು ಕೈಗಾರಿಕೆಗಳು ಬಂದ್ ಆಗಿರುವುದರಿಂದ ಉತ್ಪಾದನೆಯಾಗುತ್ತಿಲ್ಲ. ಹೀಗಾಗಿ ಲಾರಿಗಳು ನಿಂತಲ್ಲೇ ನಿಂತಿವೆ. ಆದ್ದರಿಂದ ಲಾರಿ ಮಾಲೀಕರು ಸಹ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಲಾರಿ ಮಾಲೀಕರು ಜೀವನ ನಡೆಸುವುದೇ ದುಸ್ತರವಾಗಿದೆ ಎಂದರು.
ಸಂಘದ ಕಾರ್ಯದರ್ಶಿ ಎಸ್.ಕೆ. ಮಲ್ಲಿಕಾರ್ಜುನ್, ಪದಾಧಿಕಾರಿಗಳಾದ ದಾದಾಪೀರ್, ಮಹಾಂತೇಶ್ ಒಣರೊಟ್ಟಿ, ಮುರುಗೇಶ್, ಖಲೀಲ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.