ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಕಲ್ಪಿಸಿ 


Team Udayavani, Oct 31, 2021, 2:30 PM IST

ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಕಲ್ಪಿಸಿ 

ದಾವಣಗೆರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳುನೇರವಾಗಿ ಮನೆಬಾಗಿಲಿಗೆ ತಲುಪುವಂತಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಟ್ರಾನ್ಸ್‌ಜೆಂಡರ್‌ ಹಾಗೂ ದಮನಿತ ಮಹಿಳೆಯರ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ, ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಮಧ್ಯವರ್ತಿಗಳು ಇಲ್ಲದೆ ಸರ್ಕಾರದ ಸೌಲಭ್ಯಗಳು ನೇರವಾಗಿಯೇ ಲಿಂಗತ್ವ ಅಲ್ಪಸಂಖ್ಯಾತರಿಗೆ ದೊರೆಯುವಂತೆ ಆಗಬೇಕು.ಅವರು ಸಹ ಇತರರಂತೆ ಬದುಕು ನಡೆಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಅಭಿವೃದ್ಧಿ ನಿರೀಕ್ಷಕಿ ಕೆ. ಮಂಜುಳ ಮಾತನಾಡಿ, ದುರ್ಗಾಶಕ್ತಿ ಏಡ್ಸ್‌ ತಡೆಗಟ್ಟುವ ಮಹಿಳಾ ಸಂಘ ಸಂಸ್ಥೆಯಲ್ಲಿ ಒಟ್ಟು 3456 ದಮನಿತ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಆಧಾರ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿಹೊಂದಿದ್ದಾರೆ. 3431 ದಮನಿತ ಮಹಿಳೆಯರುಬಿಪಿಎಲ್‌ ಕಾರ್ಡ್‌, 148 ದಮನಿತ ಮಹಿಳೆಯರು ಖಾಲಿ ನಿವೇಶನ ಹೊಂದಿದ್ದಾರೆ. 3125 ದಮನಿತ ಮಹಿಳೆಯರು ನಿವೇಶನ ಹೊಂದಿಲ್ಲ. ಅಭಯಸ್ಪಂದನ ಸಂಸ್ಥೆಯಲ್ಲಿ 974 ಲಿಂಗತ್ವ ಅಲ್ಪಸಂಖ್ಯಾತರು ನೋಂದಣಿ ಮಾಡಿಕೊಂಡಿದ್ದಾರೆ. ಟ್ರಾನ್ಸ್‌ಜೆಂಡರ್‌ ಗುರುತಿನಚೀಟಿ ಪಡೆಯಲು

961, ಆಧಾರ್‌ ಕಾರ್ಡ್‌ ಹೊಂದಿರುವವರು 914, ಚುನಾವಣಾ ಗುರುತಿನ ಚೀಟಿ ಹೊಂದಿರುವವರು 800, ಖಾಲಿ ನಿವೇಶನ ಹೊಂದಿರುವವರು 7, ನಿವೇಶನ ಹೊಂದಿಲ್ಲದವರು 967, ಪಡಿತರ ಚೀಟಿ ಹೊಂದಿರುವ ಲಿಂಗತ್ವ ಅಲ್ಪಸಂಖ್ಯಾತರು 230, ಪಡಿತರ ಚೀಟಿ ಹೊಂದಿಲ್ಲದವರು 744 ಲಿಂಗತ್ವಅಲ್ಪಸಂಖ್ಯಾತರು ಇದ್ದಾರೆ.ಪ್ರಸಕ್ತ ಸಾಲಿನಲ್ಲಿ ಧನಶ್ರೀಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಫಲಾನುಭವಿಗಳು, ಅರ್ಜಿಗಳ ಬಗ್ಗೆ ಮಾಹಿತಿ ನೀಡಿದರು.

ಸಿಪಿಐ ಎಚ್‌.ಗುರುರಾಜ್‌ ಮಾತನಾಡಿ, ತುಂಗಭದ್ರಾ ಬಡಾವಣೆಯಿಂದ ಬಾಡಾ ಕ್ರಾಸ್‌ವರೆಗೂ ಮಂಗಳಮುಖಿಯರ ಹಾವಳಿ ತಡೆಗೆ ಹಲವು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಬೀದಿದೀಪ, ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕುತ್ತಿದ್ದಾರೆ. ಮಂಗಳಮುಖಿಯರನ್ನು ಪೊಲೀಸ್‌ ಠಾಣೆಗೆ ಕರೆಸಿ ಐಟಿಪಿ ಕಾಯ್ದೆಯಡಿ ಇರುವ ಕಾನೂನು ಕ್ರಮಗಳನ್ನು ತಿಳಿಸಿದ್ದೇವೆ. ಆದರೂ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬೀದಿದೀಪ ಹಾಗೂ ಸಿಸಿಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.

ರಾತ್ರಿ 8 ಗಂಟೆ ನಂತರ ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆಗೂಡಿ ಗಸ್ತು ಬರಲಿದ್ದೇನೆ. ಯಾರೇ ಕಂಡುಬಂದರೂ ಮುಲಾಜಿಲ್ಲದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಪ್ರವೀಣ್‌ ನಾಯಕ್‌ ಮಾತನಾಡಿ, ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಅದೇ ವೃತ್ತಿಯಲ್ಲಿ ತೊಡಗಿಸಿಕೊಳ್ಳಬಾರದು. ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಭಳಕೆ ಮಾಡಿಕೊಳ್ಳಿ ಎಂದರು.

ಸಮುದಾಯದ ಮುಖಂಡರು ಮಾತನಾಡಿ, ನಮ್ಮ ಸಮುದಾಯದಲ್ಲೂ ಕೆಟ್ಟವರು, ಒಳ್ಳೆಯವರು ಇರುತ್ತಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡವರ ವಿರುದ್ಧ ಕ್ರಮಕ್ಕೆ ಪ್ರೋತ್ಸಾಹಿಸುತ್ತೇವೆ. ಸೆಕ್ಸ್‌ ವರ್ಕ್‌ ಹಾಗೂ ಭಿûಾಟನೆ ನಮ್ಮ ವೃತ್ತಿಯಾಗಿದ್ದು ಅದನ್ನು ತಡೆಯಬೇಡಿ ಎಂದು ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿದ್ದರು.

ಮಾದಕ ವಸ್ತು ಮಾರಾಟ ತಡೆಗೆ ಕ್ರಮ :  ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಯ ಸುತ್ತಮುತ್ತಲ ಪ್ರದೇಶಗಳಲ್ಲಿ, ಪಾರ್ಕ್ಗಳಲ್ಲಿ, ವಿಶ್ರಾಂತಿ ಧಾಮಗಳಲ್ಲಿ ಹಾಗೂಜನಸಾಂದ್ರತೆಯಿರುವ ಪ್ರದೇಶಗಳಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆದೂರುಗಳು ಕೇಳಿಬರುತ್ತಿರುವ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿಗಳೊಂದಿಗೆ ಈಗಾಗಲೆಚರ್ಚಿಸಿದ್ದೇನೆ. ಮಾದಕ ವಸ್ತುಗಳ ಮಾರಾಟ ಜಾಲವನ್ನು ಹಿಡಿದು ಮಟ್ಟ ಹಾಕಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು. ಮಾದಕ ವಸ್ತುಗಳ ಜಾಲಹರಡದಂತೆ ಸೂಕ್ತ ಕಾರ್ಯಾಚರಣೆ ನಡೆಸುವಮೂಲಕ ಮಾದಕ ವಿಷ ವರ್ತುಲದಿಂದ ಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ತಿಳಿಸಿದರು.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.