Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
ಮುಂದಿನ ದಿನಗಳಲ್ಲಿ ಬಿಜೆಪಿಗರಿಗೆ ತಕ್ಕಪಾಠ...
Team Udayavani, Sep 26, 2024, 5:40 PM IST
ದಾವಣಗೆರೆ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ, ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಗುರುವಾರ(ಸೆ26) ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ‘ ರಾಜಭವನದ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚು ಮಾಡುತ್ತಿದೆ. ರಾಜ್ಯದಲ್ಲಿಯೂ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದೆ’ ಎಂದರು.
‘ ಸಿದ್ದರಾಮಯ್ಯ ಅವರ ಜನಪರ ಆಡಳಿತವನ್ನು ಸಹಿಸದ ಬಿಜೆಪಿಯವರು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರವೇನೂ ಇಲ್ಲ ಎಂಬುದು ಸ್ವತಃ ಬಿಜೆಪಿ ನಾಯಕರಿಗೇ ಗೊತ್ತಿದೆ. ಆದರೂ ಸಹ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವುದು ಸಾಧ್ಯ ಇಲ್ಲವೆಂದು ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರೆಸುತ್ತಿದ್ದಾರೆ ‘ ಎಂದರು.
‘ಸಿದ್ದರಾಮಯ್ಯನವರ ಪರ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ಶಾಸಕರಿದ್ದಾರೆ. ರಾಜ್ಯದ ಜನರ ಆಶೀರ್ವಾದವಿದ್ದು ಮುಂದಿನ ದಿನಗಳಲ್ಲಿ ಬಿಜೆಪಿಗರಿಗೆ ತಕ್ಕಪಾಠ ಕಲಿಸಲಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.