Davanagere: ಮಠದ ವಿರುದ್ಧ ಸುಳ್ಳು ಆರೋಪ… ಬಂಡವಾಳ ಶಾಹಿಗಳ ವಿರುದ್ಧ ತೊಡೆತಟ್ಟಿದ ಭಕ್ತರು


Team Udayavani, Aug 20, 2024, 1:48 PM IST

Davanagere: ಮಠದ ವಿರುದ್ಧ ಸುಳ್ಳು ಆರೋಪ… ಬಂಡವಾಳ ಶಾಹಿಗಳ ವಿರುದ್ಧ ತೊಡೆತಟ್ಟಿದ ಭಕ್ತರು

ದಾವಣಗೆರೆ: ಸಿರಿಗೆರೆಯ ತರಳಬಾಳು ಬೃಹನ್ಮಠದ ವಿರುದ್ಧ ಸುಳ್ಳು ಆರೋಪ, ವದಂತಿ ಹಬ್ಬಿಸುವವರು ಹಾಗೂ ಆರೋಪ ಮಾಡುವ ಬಂಡವಾಳ ಶಾಹಿಗಳ ವಿರುದ್ಧ ದಾವಣಗೆರೆ ತಾಲೂಕಿನ ಹೆಮ್ಮನಬೇತೂರು ಗ್ರಾಮದ ಸದ್ಭಕ್ತರು ತೊಡೆತಟ್ಟಿದ್ದಾರೆ.

ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೇ ಪೀಠಾಧಿಪತಿಗಳಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿ ರಕ್ತದಲ್ಲಿ ಸಹಿ ಚಳವಳಿ ನಡೆಸುವ ಮೂಲಕ ಮಠದ ವಿರೋಧಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೆಮ್ಮನಬೇತೂರು ಗ್ರಾಮದ ಮಠದ ಸದ್ಭಕ್ತರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಅವರೇ ಪೀಠದಲ್ಲಿ ಮುಂದುವರಿಯಬೇಕೆಂದು ಒಮ್ಮತದಿಂದ ನಿರ್ಣಯ ತೆಗೆದುಕೊಂಡು ರಕ್ತದಲ್ಲಿ ಸಹಿ ಮಾಡುವ ಮೂಲಕ ಮಠಕ್ಕೆ ಪತ್ರ ಕಳುಹಿಸಿಕೊಟ್ಟಿದ್ದಾರೆ.

ಯಾರ ಒತ್ತಡಕ್ಕೂ ಮಣಿಯದೇ ಸ್ವಯಂಪ್ರೇರಿತರಾಗಿ ನಾವೆಲ್ಲರೂ ಸಭೆ ನಡೆಸಿ ನಿರ್ಧಾರಕ್ಕೆ ಬಂದಿದ್ದೇವೆ. ಶ್ರೀಗಳ ವಿರುದ್ಧ ನಡೆಸುತ್ತಿರುವ ಪಿತೂರಿ ವಿರುದ್ದ ಹೋರಾಟಕ್ಕೆ ಸಿದ್ಧರಿದ್ದೇವೆ. ಸಮಾಜದಲ್ಲಿ ವಿನಾಕಾರಣ ಸುಳ್ಳು ಹೇಳುತ್ತಾ ಮಠದ ಹೆಸರು ಕೆಡಿಸಲು ಯತ್ನಿಸುತ್ತಿರುವವರು ಸುಮ್ಮನಿದ್ದರೆ ಒಳಿತು. ಇಲ್ಲದಿದ್ದರೆ ನಾವೂ ತಿರುಗೇಟು ನೀಡುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ಹಳ್ಳಿ ಹಳ್ಳಿಗಳಲ್ಲಿ ಎಲ್ಲಾ ಜನಸಾಮಾನ್ಯರು, ಪ್ರಜ್ಞಾವಂತ ಭಕ್ತರು ಪೂಜ್ಯರ ಮುಂದಾಳತ್ವದಲ್ಲಿ ಬಲಿಷ್ಠ ಸಮ ಸಮಾಜದ ಬೇಡಿಕೆಯನ್ನು ಇಟ್ಟು, ಯಾವ ಅಪಪ್ರಚಾರಕ್ಕೆ ಬಗ್ಗದೆ ಪರಮಪೂಜ್ಯರು ಆಶೀರ್ವಾದಪೂರ್ವಕ ಮಾರ್ಗದರ್ಶನ ನೀಡುತ್ತಿದ್ದಾರೆ. ಪಿತೂರಿ ನಡೆಸುವವರ ಬಗ್ಗೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ಇಷ್ಟು ದಿನ ಇಲ್ಲದ ಗೊಂದಲ, ಸುಳ್ಳು ಆರೋಪ, ಪಿತೂರಿ ಹೆಚ್ಚಾಗಿ ನಡೆಯುತ್ತಿದೆ. ನಾವೆಲ್ಲರೂ ಶ್ರೀಗಳ ಪರ ನಿಲ್ಲುವ ಮೂಲಕ ಸರಿಯಾದ ಉತ್ತರ ನೀಡೋಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ದೇವಾಲಯದಲ್ಲಿ ಗ್ರಾಮದ ಮುಖಂಡರು, ಭಕ್ತರೆಲ್ಲರೂ ಸೇರಿ ಶ್ರೀ ತರಳಬಾಳು ಬೃಹನ್ಮಠದ ಮೇಲೆ ಸುಳ್ಳು ಸುದ್ದಿ ಪಿತೂರಿ ಆರೋಪ ಮಾಡುವ ಬಂಡವಾಳಶಾಹಿಗಳ ವಿರುದ್ಧ ತೊಡೆ ತಟ್ಟಿ ನಿಲ್ಲೋಣ. ಜಗದ್ಗುರುಗಳವರ ದಿವ್ಯ ನೇತೃತ್ವದಲ್ಲಿ ಸಮಾಜ ಮುಂದುವರೆಯಲೆಂಬ ಆಶಯದೊಂದಿಗೆ ರಕ್ತದಲ್ಲಿ ಸಹಿ ಮಾಡಿ ನಿರ್ಣಯ ಕೈಗೊಂಡಿದ್ದೇವೆ. ಎಲ್ಲರೂ ಸಮ್ಮತಿಸಿ, ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.ಸಿರಿಗೆರೆ ಮಠವು ಬೇರೆ ಮಠಗಳಂತೆ ಆಗಬಾರದು. ರಕ್ತದಲ್ಲಿ ಸಹಿ ಮಾಡಿ ಸ್ವಾಮೀಜಿಗಳು ಕೊನೆ ಉಸಿರು ಇರುವವರೆಗೂ ಮುಂದುವರಿಯಬೇಕು. ಹೆಮ್ಮಬೇತೂರು ಗ್ರಾಮ ಮಾತ್ರವಲ್ಲ, ಸುತ್ತಮುತ್ತಲಿನ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಆಧುನಿಕ ಭಗೀರಥರು. ಎಷ್ಟೋ ಹಳ್ಳಿಗಳಲ್ಲಿ ಇಂದಿಗೂ ನೀರಾವರಿ ಸೌಲಭ್ಯ ಕಂಡಿದೆ ಅದು ಸಿರಿಗೆರೆ ಶ್ರೀಗಳಿಂದ ಆಗಿರುವ ಕಾರ್ಯದಿಂದ ಮಾತ್ರ. ಹಾಗಾಗಿ ಶ್ರೀಗಳ ಬದಲಾವಣೆ ಮಾಡಬಾರದು ಎಂಬ ನಿರ್ಣಯ ತೆಗೆದುಕೊಂಡು ಶ್ರೀಗಳ ವಿರುದ್ಧ ಇರುವವರ ಷಡ್ಯಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದರು.ಪರಮಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಕರಣಧಾರತ್ವದಲ್ಲಿ ಕಾರ್ಯಗತಗೊಂಡಿರುವ 20 ಕ್ಕೂ ಹೆಚ್ಚು ಏತನೀರಾವರಿ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೆರೆಗಳಿಗೆ ನೀರು ತುಂಬಿಸುವ ಸತ್ಕಾರ್ಯ ಮಾಡಿದ್ದಾರೆ. ಸಮಾಜಮುಖಿ ನಿಸ್ವಾರ್ಥ ಮುಂದಾಳತ್ವ ಎಷ್ಟು ಅವಶ್ಯಕ, ಅದರಲ್ಲೂ ಸರ್ಕಾರ ಕೈಗೊಳ್ಳುವ ಜನಪರ ಯೋಜನೆಗಳು ಪರಿಣಾಮಕಾರಿ ಅನುಷ್ಠಾನದ ವಿಚಾರದಲ್ಲಿ ಪರಮಪೂಜ್ಯರು ಮತ್ತು ಶ್ರೀ ಮಠದ ಕಾರ್ಯವೈಖರಿ ಒಂದು ಜಲ್ವಂತ ಉದಾಹರಣೆ ಎಂದು ತಿಳಿಸಿದರು.

ಸಭೆಯಲ್ಲಿ ಎಸ್. ಆರ್. ಪ್ರಕಾಶ್, ನಾಗರಾಜಪ್ಪ, ಎಸ್. ಎನ್. ಕಲ್ಲೇಶಪ್ಪ, ಎನ್. ಎಂ. ಪ್ರಸನ್ನ, ಎಸ್. ಬಸವರಾಜ್, ಬಿ. ಎಸ್. ಸಚಿನ್, ಪಂಪಣ್ಣ, ಸಿ. ಎಸ್. ಪ್ರಕಾಶ, ಹೆಚ್. ಆರ್. ಶಿವಕುಮಾರ, ಇ. ರಮೇಶ, ಕರಿಬಸಣ್ಣ, ಎಸ್. ಎಸ್. ಸೋಮಶೇಖರ್, ಯು. ಆರ್. ಎಸ್. ಶ್ರೀನಿವಾಸ್, ಜಿ ಎಸ್ ರಾಜಶೇಖರ್, ತಿಪ್ಪೇಸ್ವಾಮಿ, ಪರಿಶಿಷ್ಟ ಪಂಗಡ ಸಮಾಜದ ಮುಖಂಡ ಟಿ ಡಿ ರಮೇಶ್, ಬಕ್ಕೇಶ್ ಇತರರು ಇದ್ದರು.

ಇದನ್ನೂ ಓದಿ: Actor Darshan: ಸದ್ಯಕ್ಕಿಲ್ಲ ದರ್ಶನ್‌ಗೆ ಮನೆಯೂಟದ ಭಾಗ್ಯ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.