ಭ್ರಷ್ಟಾಚಾರ ಮರೆಮಾಚಲು ಸರ್ಕಾರಕ್ಕೆ ಸುಳ್ಳು ಮಾಹಿತಿ


Team Udayavani, Dec 21, 2018, 4:53 PM IST

dvg-1.jpg

ದಾವಣಗೆರೆ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 2010ನೇ ಸಾಲಿನಿಂದ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ ಮುಚ್ಚಿಹಾಕುವ ಉದ್ದೇಶದಿಂದ ಸರ್ಕಾರಕ್ಕೇ ಸುಳ್ಳು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಸ್‌. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಗುರುವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ಸಲ್ಲಿಸಿದ್ದಾರೆ.

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 2010ನೇ ಸಾಲಿನಿಂದ ಭ್ರಷ್ಟಾಚಾರ ನಡೆಸಿರುವ 6 ತಾಪಂ ಕಾರ್ಯ ನಿರ್ವಹಕಾಧಿಕಾರಿಗಳು, ಪಂಚಾಯತ್‌ ರಾಜ್‌ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌(ಎಇಇ) ಮತ್ತು ಸಂಬಂಧಿತ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಒಂದಕ್ಕೆ ಮೂರರಷ್ಟು ಯೋಜನಾ ವರದಿ ತಯಾರಿಸಿ, ಬೋಗಸ್‌ ಬಿಲ್‌ ಬರೆದುಕೊಂಡಿರುವುದರ ಬಗ್ಗೆ ಮುಕ್ತ ತನಿಖೆ ನಡೆಸಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆಯಿಂದ 2014ರ ಆ.11 ರಂದು ಪಂಚಾಯತ್‌ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ದೂರು ಸಲ್ಲಿಸಲಾಗಿತ್ತು ಎಂದು ಎಸಿಬಿಗೆ ಸಲ್ಲಿಸಿರುವ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ. 

ರೈತ ಸಂಘ ಮತ್ತು ಹಸಿರು ಸೇನೆ ನೀಡಿದ್ದಂತಹ ದೂರಿನ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಆಯುಕ್ತರ ನಿರ್ದೇಶನದಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಕಾಧಿಕಾರಿಗೆ ಅನೇಕ ಉಲ್ಲೇಖ ಮತ್ತು ಸುತ್ತೋಲೆ ನೀಡಿದ್ದರೂ ಯಾವುದೇ ತನಿಖೆ ನಡೆಸಿಲ್ಲ. 6 ತಾಪಂ ಕಾರ್ಯ ನಿರ್ವಹಕಾಧಿಕಾರಿಗಳು, ಪಂಚಾಯತ್‌ರಾಜ್‌ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ (ಎಇಇ) ಮತ್ತು ಸಂಬಂಧಿತ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಎಸಗಿರುವ ಭ್ರಷ್ಟಾಚಾರ ಮುಚ್ಚಿ ಹಾಕುವ ಉದ್ದೇಶದಿಂದ 2018ರ ಅ. 4 ರಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣಗಳನ್ನ ಮುಚ್ಚಿ ಹಾಕಿರುವ ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಮತ್ತು ಉಪ ಕಾರ್ಯದರ್ಶಿ ವಿರುದ್ಧ ಕೂಡಲೇ ತನಿಖೆ ನಡೆಸಿ, ದುರ್ಬಳಕೆ ಆಗಿರುವ ಸಾರ್ವಜನಿಕರ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಬೇಕು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ ಇತರರು ದೂರು ಸಲ್ಲಿಸಿದ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.