ರೈತರೇ ಬೆಲೆ ನಿರ್ಧರಿಸುವ ಕಾಲ ಬರಲಿ

Team Udayavani, Dec 24, 2019, 11:00 AM IST

DG-TDY-2

ದಾವಣಗೆರೆ: ತಾವು ಬೆಳೆದಂತಹ ಬೆಳೆಗಳಿಗೆ ರೈತರೇ ಬೆಲೆ ನಿರ್ಧರಿಸುವ ಕಾಲ ಬಂದಾಗ ಮಾತ್ರ ರೈತ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಜಿ. ಹನುಮಂತಪ್ಪ ಕುಂದೂರು ತಿಳಿಸಿದರು.

ಸೋಮವಾರ ರೈತರ ದಿನಾಚರಣೆ ಪ್ರಯುಕ್ತ ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತ ಶಕ್ತಿ ಗುಂಪುಗಳಿಗೆ ಸಾಮರ್ಥ್ಯ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ನಮ್ಮ ದೇಶದಲ್ಲಿ ಶೇ. 60 ರಷ್ಟು ರೈತರು ಸಂಪೂ ರ್ಣವಾಗಿ ಕೃಷಿಯನ್ನೇ ಅವಲಂಬಿಸಿ ಬದುಕುತ್ತಿದ್ದಾರೆ. ದೇಶದ 130 ಕೋಟಿ ಜನತೆಗೆ ಅನ್ನದಾತರಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.  ಅನ್ನದಾತರನ್ನು ನೆನಪಿಸಿಕೊಳ್ಳಲು ಡಿ. 23ರಂದು ದಿನಾಚರಣೆಯ ಮೂಲಕ ರೈತರಿಗೆ ಗೌರವ ಸಮರ್ಪಿಸುವ ಕಾರ್ಯಕ್ರಮ ನಿಜಕ್ಕೂ ಸಂತಸದ ವಿಚಾರ. ಇಂದಿನ ವಾತಾವರಣಕ್ಕೆ, ಖರ್ಚಿಗೆ ಅನುಗುಣವಾಗಿ ರೈತರೇ ತಮ್ಮ ಬೆಳೆಗಳಿಗೆ ಬೆಲೆಯನ್ನ ನಿರ್ಧರಿಸುವಂತಾಗಬೇಕು. ಆಗ ರೈತರ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ತಿಳಿಸಿದರು.

ರೈತರ ಕ್ಷೇತ್ರಗಳಲ್ಲಿ ಉತ್ಪಾದನೆ ಹೆಚ್ಚಾಗುತ್ತಿದೆಯೇ ಹೊರತು ಕುಟುಂಬದ ಆದಾಯ ಮಾತ್ರ ಹಾಗೆಯೇ ಇದೆ. ಕೇಂದ್ರ ಸರ್ಕಾರ ಆದಾಯ ದ್ವಿಗುಣಗೊಳಿಸುವ ಯೋಜನೆ ಹಮ್ಮಿಕೊಂಡಿರುವುದು ರೈತರ ಪಾಲಿಗೆ ಆಶಾದಾಯಕ ಬೆಳವಣಿಗೆ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್‌ ಮಾತನಾಡಿ, ಡಿ. 23 ಮಾಜಿ ಪ್ರಧಾನಿ ಚರಣ್‌ಸಿಂಗ್‌ರವರ ಜನ್ಮದಿನ. ಚರಣ್‌ಸಿಂಗ್‌ರವರು ರೈತರ ಶ್ರೇಯೋಭಿವೃದ್ಧಿ, ಕೃಷಿ ಕ್ಷೇತ್ರದ ಅಭಿವೃದ್ದಿಗಾಗಿ ಸಾಕಷ್ಟು ಯೋಜನೆ, ಕಾರ್ಯಕ್ರಮಗಳನ್ನು ತಂದು ಅನುಷ್ಠಾನ ಮಾಡಿರುವ ಜ್ಞಾಪಕಾರ್ಥವಾಗಿ ಅವರ ಜನ್ಮದಿನವನ್ನು ರೈತರ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ರೈತರ ದಿನಾಚರಣೆ ಹಸನಾಗಬೇಕಾದರೆ ರೈತರ ಉತ್ಪಾದನೆ, ಆದಾಯ ಜಾಸ್ತಿ ಆಗಬೇಕು. ಆ ನಿಟ್ಟಿನಲ್ಲಿ ರೈತರು ಕೃಷಿಯನ್ನು ಮಾಡಬೇಕಾಗಿದೆ. ರೈತ ಶಕ್ತಿ ಗುಂಪುಗಳು ಎಫ್‌.ಪಿ.ಓ  ರಚಿಸಿಕೊಂಡು, ಸಂಘಟಿತರಾಗುವ ಮೂಲಕ ತಾವು ಬೆಳೆದಂತಹ ಉತ್ಕೃಷ್ಟವಾದ ಧಾನ್ಯಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ವಾತಾವರಣವನ್ನು ಸೃಷ್ಟಿಸಿಕೊಳ್ಳಬೇಕು ಎಂದು ತಿಳಿಸಿದರು. ರೈತರು ಮುಂದಿನ ದಿನಗಳಲ್ಲಿ ರಾಸಾಯನಿಕ ಕಡಿಮೆ ಮಾಡಿ, ಕ್ರಮೇಣವಾಗಿ ಸಾವಯವ ಕೃಷಿ ಅಳವಡಿಸುವ ಮೂಲಕ ಖರ್ಚನ್ನು ಕಡಿಮೆ ಮಾಡಿ, ಉತ್ಕೃಷ್ಟವಾದ ಉತ್ಪನ್ನಗಳನ್ನು ಬೆಳೆಯುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಹಾಗೂ ಇಲಾಖೆಯ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಜೆ. ರಘುರಾಜ್‌ ಸಂಘ ಸಂಸ್ಥೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಪವನ್‌ ಪ್ರಾಸ್ತಾವಿಕ ಮಾತುಗಳಾಡಿದರು. ಪ್ರಗತಿ ಪರ ರೈತರಾದ ಇಂದ್ರಮ್ಮ, ಕುಕ್ಕುವಾಡ ರೈತ ಶಕ್ತಿ ಗುಂಪಿನ ಅಧ್ಯಕ್ಷ ಚಂದ್ರಶೇಖರಪ್ಪ ಅನಿಸಿಕೆ ಹಂಚಿಕೊಂಡರು. ಹುಣಸೆಕಟ್ಟೆ, ಆಲೂರು, ಕುಕ್ಕವಾಡ, ಕುರ್ಕಿ, ಹೊನ್ನಮರಡಿ ಗ್ರಾಮಗಳ ರೈತ ಶಕ್ತಿ ಗುಂಪಿನ ಸದಸ್ಯರು, ಆತ್ಮ ಯೋಜನೆ ಉಪಯೋಜನಾ ನಿರ್ದೇಶಕ ಜಿ.ಎಂ. ಚಂದ್ರಶೇಖರಪ್ಪ , ತಾಲೂಕು ತಾಂತ್ರಿಕ ವ್ಯವಸ್ಥಾಪಕ ಬಿ.ಎಸ್‌. ವೆಂಕಟೇಶ್‌ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ರೇಷ್ಮಾ ಇತರರು ಇದ್ದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.