ಪ್ರತಿ 3 ತಿಂಗಳಿಗೊಮ್ಮೆ ರೈತರ ಸಭೆ: ಡಿಸಿ
Team Udayavani, Dec 10, 2019, 11:21 AM IST
ದಾವಣಗೆರೆ: ರೈತರ ಕುಂದುಕೊರತೆ ಚರ್ಚಿಸಲು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ.
ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ರೈತರ ಸಭೆ ನಡೆಸುವುದರಿಂದ ನಮಗೆ ತಿಳಿಯದ ಅನೇಕ ವಿಷಯತಿಳಿಯುವ ಜೊತೆಗೆ ಸ್ಪಂದಿಸಲು ಅವಕಾಶ ಆಗುತ್ತದೆ. ಹಾಗಾಗಿ ಇನ್ನು ಮುಂದೆ ಪ್ರತಿ 3 ತಿಂಗಳಿಗೊಮ್ಮೆ ರೈತರ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಮಾತನಾಡಿ, ಜಿಲ್ಲಾ ಪಂಚಾಯತ್ ಸಣ್ಣ ಮತ್ತು ಬೃಹತ್ ನೀರಾವರಿ ಇಲಾಖೆಗಳ ಸಣ್ಣ ಮತ್ತು ದೊಡ್ಡ ಕೆರೆಗಳ ಒತ್ತುವರಿಯಾಗಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ಸ್ವಾಧೀನವಾದ ಜಮೀನುಗಳು ಮರು ಮಾರಾಟವಾಗುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಾನೂನು ಕ್ರಮ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿವೆ ಎಂದು ದೂರಿದರು.
ಈಗಾಗಲೇ ಅನೇಕ ಕೆರೆಗಳು ಮುಚ್ಚಿ ಹೋಗಿವೆ. ಹಲವಾರು ಕೆರೆಯಲ್ಲಿ ಹೂಳು ತುಂಬಿದೆ, ದುರಸ್ತಿ ಅಗತ್ಯವಿದೆ. ದೇವರ ಬೆಳಕೆರೆ ಹಾಗೂ ಸೂಳೆಕೆರೆಗಳೂ ಸೇರಿದಂತೆ ಸಮಗ್ರ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯತಿ ಮತ್ತು ನೀರಾವರಿ ಇಲಾಖಾ ವ್ಯಾಪ್ತಿಯಲ್ಲಿ ಎಷ್ಟು ಕೆರೆಗಳು ಬರುತ್ತವೆ. ಅಗತ್ಯವಿರುವ ರಿಪೇರಿ, ಇತರೆ ಕಾಮಗಾರಿ, ಕಾನೂನು ತೊಡಕುಗಳಿದ್ದರೆ ಆ ಕುರಿತ ಮಾಹಿತಿ ಸೇರಿದಂತೆ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ದೇವರ ಬೆಳಕೆರೆಯ ಅಂತಿಮ ಅಧಿಸೂಚನೆಯಲ್ಲಿ ಮೂಲ ಮಾಲೀಕರ ಹೆಸರು ಇದೆಯೋ ಅಥವಾ ಬದಲಾವಣೆ ಆಗಿದೆಯೋ ಎಂಬುದನ್ನು ನೋಡಬೇಕು. ಸರ್ವೇ ಕಾರ್ಯಕ್ಕೆ ತಂಡ ರಚಿಸಲು ಸೂಚನೆ ನೀಡಿದರು. ರೈತರ ಖಾತೆಗೆ ಪಾವತಿಯಾಗುವ ಹಾಲಿನ ಮೊತ್ತವನ್ನು ಬ್ಯಾಂಕ್‌ನವರು ಸುಸ್ತಿ ಪಾವತಿಗೆ ಕಟಾವಣೆ ಮಾಡಿಕೊಳ್ಳುತ್ತಿದ್ದಾರೆ. ಶೈಕ್ಷಣಿಕ ಸಾಲದ ಮರುಪಾವತಿಯ ನೀತಿಯೂ ದ್ವಂದ್ವಮಯವಾಗಿದೆ ಎಂದು ಬಲ್ಲೂರು ರವಿಕುಮಾರ್ ಹೇಳಿದರು.
ಡಿಬಿಟಿ ಮೂಲಕ ಬಿಡುಗಡೆಯಾದ ಮೊತ್ತವನ್ನು ಕಟಾವಣೆ ಮಾಡುವುದಿಲ್ಲ. ಬದಲಾಗಿ ಸ್ವಂತವಾಗಿ ಗಳಿಸಿದ ಮೊತ್ತದಲ್ಲಿ ಸುಸ್ತಿ ಮೊತ್ತವನ್ನು ಕಟಾವಣೆ ಮಾಡುವ ಅಧಿಕಾರ ಇರುತ್ತದೆ.ಕೇಂದ್ರ ಸರ್ಕಾರದ ನಿಯಮಗಳನ್ವಯವೇ ಶೈಕ್ಷಣಿಕ ಸಾಲವನ್ನು ಕಟಾವಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್‌ನ ಸುಶ್ರುತ್ ತಿಳಿಸಿದರು. ಭೂಮಾಪನ ಇಲಾಖೆಯ ಕಚೇರಿಗಳಲ್ಲಿ ಮೇಲ್ಮನವಿಗಳ ವಿಚಾರಣೆ ಮತ್ತು ವಿಲೇವಾರಿ ಅತಿ ವಿಳಂಬವಾಗುತ್ತಿದೆ. ಮೆಕ್ಕೆಜೋಳ, ಭತ್ತವನ್ನು ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಮಾಡದಂತೆ ಜಿಲ್ಲಾ ಧಿಕಾರಿಗಳು ನಿರ್ದೇಶಿಸಬೇಕು. ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿದರೂ ಅಧಿಕಾರಿ, ಸಿಬ್ಬಂದಿ ಸಂಖ್ಯೆ ಹೆಚ್ಚಿಸದ ಕಾರಣ ಜನಸಂದಣಿ ಹೆಚ್ಚಿದ್ದು, ಸಕಾಲದಲ್ಲಿ ವೈದ್ಯಕೀಯ ಸೇವೆ ಲಭ್ಯವಾಗುತ್ತಿಲ್ಲ. ಹಾಗಾಗಿ ಎರವಲು ಸಿಬ್ಬಂದಿ ವ್ಯವಸ್ಥೆ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ಭೂಮಾಪನ ಇಲಾಖೆಯವರು ಆದಷ್ಟು ಶೀಘ್ರವಾಗಿ ಮೇಲ್ಮನವಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬೆಳೆ ದರ ನಿಗದಿ ಕುರಿತು ಚರ್ಚಿಸಲು ಎಪಿಎಂಸಿ ವತಿಯಿಂದ ಸಭೆ ಕರೆಯುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪದ್ಮಾ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ಜಿ. ನಜ್ಮಾ, ಉಪ ವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್, ನಗರಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.