ಬಗರ್‌ಹುಕುಂ ಅರ್ಜಿ ವಿಲೇಗೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, May 14, 2019, 2:47 PM IST
ದಾವಣಗೆರೆ/ಮಾಯಕೊಂಡ: ಬಗರ್‌ಹುಕುಂ ಸಾಗುವಳಿದಾರರು ನಮೂನೆ-57ರಡಿಯಲ್ಲಿ ಸಾಗುವಳಿಗಾಗಿ ಸಲ್ಲಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಮತ್ತು ಆನಗೋಡು ಹೋಬಳಿಯ ಎಲ್ಲಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಆನಗೋಡಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆನಗೋಡು ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನೆ ನಡೆಸಿದ ರೈತರು, ನಾಡಕಚೇರಿಗೆ ತೆರಳಿ ಉಪತಹಶೀಲ್ದಾರ್ ಹಾಲೇಶಪ್ಪಗೆ ಮನವಿ ಸಲ್ಲಿಸಿದರು.
ಆನಗೋಡು ಹೋಬಳಿ ವ್ಯಾಪ್ತಿಗೆ ಹಲವಾರು ಗ್ರಾಮಗಳ ಜನರು ಸಂಬಂಧಪಟ್ಟ ಇಲಾಖೆಗೆ ಬಹು ಹಿಂದಿನಿಂದಲೂ ಸಾಗುವಳಿಗಾಗಿ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೇ ನಮೂನೆ-57ರ ಅಡಿಯಲ್ಲಿ ಸಾಗುವಳಿ ಅರ್ಜಿ ಫಾರಂಗಳನ್ನು ಸಲ್ಲಿಸಿರುತ್ತೇವೆ. ಹಾಗಾಗಿ ಕೂಡಲೇ ಸರ್ಕಾರ ಸದರಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿದರು.
ಬೇಸಿಗೆ ಕಾಲವಾಗಿರುವ ಈ ದಿನಗಳಲ್ಲಿ ಸರಿಯಾಗಿ ಮಳೆಯಾಗದೇ ಸಾಕಷ್ಟು ನೀರಿನ ಸಮಸ್ಯೆ ಉಂಟಾಗಿದೆ. ಗ್ರಾಮದ ಜನರಿಗೆ ಕುಡಿಯುವ ನೀರು ಸಿಗುತ್ತಿಲ್ಲ. ಇನ್ನೂ ಜಾನುವಾರುಗಳ ಸ್ಥಿತಿ ಶೋಚನಿಯವಾಗಿದೆ. ಹಾಗಾಗಿ ಅಧಿಕಾರಿಗಳು ಕೂಡಲೇ ಕ್ರಮಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.
ಸೇನೆಯ ಆನಗೋಡು ಹೋಬಳಿ ಅಧ್ಯಕ್ಷ ಎಂ.ಸಿ. ಕೃಷ್ಣಮೂರ್ತಿ, ರುದ್ರೇಶ್, ಗುಡಾಳು ರಾಜಪ್ಪ, ಮಹೇಶಪ್ಪ, ಜಂಪಣ್ಣ, ಹನುಮಂತಪ್ಪ, ಹನುಮಕ್ಕ, ವಿಜಯ್, ದಂಡೆಪ್ಪ, ಹುಲಿಕಟ್ಟೆ ಮಂಜಪ್ಪ, ಆಲೂರುಹಟ್ಟಿ ಪುಟ್ಟಾನಾಯ್ಕ, ನಾಗರಾಜ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆನಗೋಡು ನಾಡಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.