ತಂದೆ-ತಾಯಿ ಕಡೆಗಣಿಸದಿರಿ
Team Udayavani, Apr 12, 2017, 2:52 PM IST
ಹೊನ್ನಾಳಿ: ಇಳಿ ವಯಸ್ಸಿನಲ್ಲಿ ತಂದೆ-ತಾಯಿಗಳನ್ನು ಯಾರೂ ಕಡೆಗಣಿಸಬಾರದು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ಇಲ್ಲಿನ ಹಿರೇಕಲ್ಮಠದ ಗುರುನಿವಾಸದಲ್ಲಿ ಭಾನುವಾರ ರಾತ್ರಿ ನಡೆದ ಸಂಸ್ಕೃತಿ-ಸಂಸ್ಕಾರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈಚಿನ ದಿನಗಳಲ್ಲಿ ಕೂಡು ಕುಟುಂಬಗಳು ಕಣ್ಮರೆಯಾಗುತ್ತಿವೆ. ಹಿರಿಯ ಜೀವಗಳ ನೈತಿಕ ಕಥೆಗಳ ಆಲಿಕೆಯ ಭಾಗ್ಯವೂ ಅವರಿಗಿಲ್ಲವಾಗಿದೆ. ಇದು ನಮ್ಮ ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಕಡಿಮೆಯಾಗಲು ಕಾರಣವಾಗುತ್ತಿದೆ. ಇಂಥ ಕಾಲಘಟ್ಟದಲ್ಲಿ ಹಿರೇಕಲ್ಮಠದಲ್ಲಿ ಸಂಸ್ಕೃತಿ-ಸಂಸ್ಕಾರ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಸಂಸ್ಕಾರ ಇಲ್ಲದ ವ್ಯಕ್ತಿಯ ಜೀವನ ನಿರರ್ಥಕ. ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ನೀಡಬೇಕು. ಆಗ ಮಾತ್ರ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡಲು ಸಾಧ್ಯ ಎಂದು ತಿಳಿಸಿದರು. ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಮಕ್ಕಳನ್ನು ದಂಡಿಸದೇ ಶಿಕ್ಷಣ ನೀಡಬೇಕು.
ಒಳ್ಳೆಯ ಬುದ್ಧಿ ಕಲಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಗಳು, ಬೋಧಕರು ಚಿಂತಿಸಬೇಕು ಎಂದರು. ಮಕ್ಕಳು ಸಸಿಗಳಂತೆ. ಬೆಳೆಯುವ ಅವಧಿಧಿಯಲ್ಲೇ ಅವರಿಗೆ ಸಂಸ್ಕಾರ ಕಲಿಸಬೇಕು. ನೈತಿಕ ಬದುಕಿಗೆ ಅವಶ್ಯಕವಾದ ನೀತಿ ಕಥೆ, ಹಾಡು ಹೇಳುವುದು ಮತ್ತಿತರ ವಿಷಯಗಳನ್ನು ಕಲಿಸಬೇಕು.
ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಯುವಕರು ತಮ್ಮ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಲು ಸೂಕ್ತ ತರಬೇತಿ ನೀಡಲಾಗುವುದು. 15ರಿಂದ ಪ್ರತಿ ದಿನ ಬೆಳಿಗ್ಗೆ 6ರಿಂದ 7ರವರೆಗೆ ಮತ್ತು ಸಂಜೆ 5.30ರಿಂದ 6.30ರವರೆಗೆ ಉಚಿತ ಯೋಗಾಸನ ತರಬೇತಿ ಶಿಬಿರ ಆಯೋಜಿಸಲಾಗುವುದು ಎಂದರು.
ಡಾ| ಎಚ್.ಪಿ. ರಾಜ್‌ಕುಮಾರ್, ಶಾಂತರಾಜ್ ಪಾಟೀಲ್, ಪ್ರೇಮ್‌ಕುಮಾರ್ ಭಂಡಿಗಡಿ, ಎಸ್.ಎ. ಹುಡೇದ್, ಪಿಎಸ್‌ಐ ಎನ್.ಸಿ. ಕಾಡದೇವರ ಮತ್ತಿತರರಿದ್ದರು. ಚನ್ನಪ್ಪಸ್ವಾಮಿ ವಿದ್ಯಾಪೀಠದ ನಿರ್ದೇಶಕರಾದ ಎಚ್.ಪಿ. ರಾಮಮೂರ್ತಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹೊಸಕೇರಿ ಸುರೇಶ್, ಎಚ್.ಎ. ಉಮಾಪತಿ, ಪಪಂ ಸದಸ್ಯ ಮಂಜುನಾಥ್ ಸರಳಿನಮನೆ, ಕುಮಾರಸ್ವಾಮಿ, ರಾಜು, ಡಾ| ಲಿಂಗರಾಜ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.