ಜೀವನದಲ್ಲಿ ಹೋರಾಡಿ, ಸಾಧನೆ ಮಾಡಬೇಕು
Team Udayavani, Dec 10, 2019, 11:44 AM IST
ದಾವಣಗೆರೆ: ಅಂಗವಿಕಲರು ಉತ್ತಮ ಸಾಧನೆಯ ಮೂಲಕ ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ತಿಳಿಸಿದರು.
ಸೋಮವಾರ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಅಂಗವಿಕಲರ ಆಶಾಕಿರಣ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶೇಷ ಮಕ್ಕಳ ರಾಜ್ಯಮಟ್ಟದ ವಿಶೇಷ ಒಲಿಂಪಿಕ್ ಅಥ್ಲೆಟಿಕ್ಸ್ ಉದ್ಘಾಟಿಸಿ ಮಾತನಾಡಿದ ಅವರು, ಅಂಗವಿಕಲರು ಜೀವನದಲ್ಲಿ ಹೋರಾಡಿ, ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಅಂಗವಿಕಲರಾಗಿ ಜನಿಸಿದರೂ ಅದನ್ನೂ ಮೀರಿ ಬೆಳೆದು ಸಾಧನೆ ಮಾಡಬೇಕು. ಸಾಮಾನ್ಯ ಮಕ್ಕಳು ಆಡುವುದು ನೋಡಿದ್ದೇವೆ. ಅಂಗವಿಕಲ ಮಕ್ಕಳು ಜಾಣ್ಮೆಯಿಂದ ಆಡುತ್ತಾರೆ. ಈಜು ಸೇರಿ ವಿವಿಧ ಕ್ರೀಡೆಗಳಲ್ಲಿ ಸಾಕಷ್ಟು ಸಾಧಕರು ಇದ್ದಾರೆ. ನೀವು ಜೀವನದಲ್ಲಿ ಹೋರಾಡಿ, ಸಾಧನೆ ಮಾಡಬೇಕು ಎಂದು ಹೇಳಿದರು.
ಬೆಂಗಳೂರಿನ ಎಸ್‌ಒಬಿಕೆ ವಲಯ ನಿರ್ದೇಶಕಿ ಕುಮುದಾ ಮಾತನಾಡಿ, ವಿಶೇಷ ಮಕ್ಕಳು ಏನು ಮಾಡಬಲ್ಲರು ಎಂಬ ತಪ್ಪು ಕಲ್ಪನೆ ಇದೆ. ಅನೇಕ ವಿಕಲಚೇತನರು ಸಾಮಾನ್ಯರಂತೆ ಆಡಬಲ್ಲೆವು, ಎಲ್ಲರಂತೆ ನಾವು ಸಮರ್ಥರು ಎಂಬುದನ್ನು ಸಾಬೀತುಪಡಿಸಿದ್ದಾರೆ. ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರೆತಲ್ಲಿ ಸಾಧನೆ ಮಾಡಲಿದ್ದಾರೆ ಎಂದು ತಿಳಿಸಿದರು. ಹಿಂದಿನ ಅಂತಾರಾಷ್ಟ್ರೀಯ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ 398 ಕ್ರೀಡಾಪಟುಗಳು 358 ಪದಕ ತಂದಿದ್ದಾರೆ. 11 ಜನರು ನಮ್ಮ ರಾಜ್ಯದವರು ಎಂದು ತಿಳಿಸಿದರು.
ಜಿಲ್ಲಾ ಚಿಗಟೇರಿ ಆಸ್ಪತ್ರೆ ಅಧೀಕ್ಷಕ ಡಾ| ನಾಗರಾಜ್ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದು ವಿಶೇಷ ಶಕ್ತಿ ಇದೆ. ಗುರಿ ತಲುಪಲು ಸತತ ಪ್ರಯತ್ನ, ಮನಸಿದ್ದರೆ ಉತ್ತೇಜನ ಅಗತ್ಯ ಎಂದರು. ಮಹಾನಗರ ಪಾಲಿಕೆ ಸದಸ್ಯೆ ರೇಖಾ ಸುರೇಶ್ ಗಂಡಗಾಳೆ, ಅಂಗವಿಕಲರ ಆಶಾಕಿರಣ ಟ್ರಸ್ಟ್ ಕಾರ್ಯದರ್ಶಿ ಪೋಪಟ್‌ಲಾಲ್ ಜೈನ್, ಕಾರ್ಯಾಧ್ಯಕ್ಷ ರಮಣ್ ಲಾಲ್ ಪಿ.ಸಂಘವಿ, ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಾಜನಹಳ್ಳಿ ರಮಾನಂದ್, ದಾವಣಗೆರೆಯ ಸಿಆರ್‌ಸಿ ಕೇಂದ್ರದ ನಿರ್ದೇಶಕ ಡಾ| ಜ್ಞಾನವೇಲು, ಎಸ್‌ಒಬಿಕೆ ಕ್ರೀಡಾ ನಿರ್ದೇಶಕ ಎ.ಅಮರೇಂದ್ರ, ಡಾ|ಪಿ.ಎಂ.ಮರುಳಸಿದ್ದಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.