ಮಾಸ್ಕ್ ಧರಿಸದವರಿಗೆ ದಂಡದ ಬಿಸಿ
ದಾವಣಗೆರೆಯ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದ ಡಿಸಿ ನೇತೃತ್ವದ ತಂಡ
Team Udayavani, Nov 4, 2020, 6:15 PM IST
ವಿಜಯಪುರ: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಜೊತೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ, ಭತ್ಯೆ ಕೊಡಿಸುವಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಸರ್ಕಾರದೊಂದಿಗೆ ನಿರಂತರ ಒತ್ತಡ ಹೇರುತ್ತಿದೆ. ಸರ್ಕಾರ ನೌಕರರ ಬೇಡಿಕೆ ಈಡೇರಿಕೆ ನಿರ್ಲಕ್ಷ್ಯ ಮಾಡಿದಲ್ಲಿ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್.ಷಡಕ್ಷರಿ ಹೇಳಿದರು.
ಮಂಗಳವಾರ ನಗರದಲ್ಲಿ ನೌಕರರ ಸಮಸ್ಯೆ ಕುರಿತ ಚರ್ಚೆ, ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸಂಘದ ಅಧ್ಯಕ್ಷನಾದ ಒಂದು ವರ್ಷದ ಅವಧಿಯಲ್ಲಿ ಹಲವು ವರ್ಷಗಳ ಬೇಡಿಕೆಯಾಗಿದ್ದ ಸುಮಾರು 20 ಬೇಡಿಕೆ ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇನೆ. ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರ ವೇತನ ತಾರತಮ್ಯ, ಸಿ ಆ್ಯಂಡ್ ಆರ್, ಸಕಾಲಕ್ಕೆ ವೇತನ ಬಡ್ತಿ ನೀಡದಿರುವುದು, ಪ್ರತಿ ತಿಂಗಳು ವೇತನ ನೀಡಿಕೆಯಂಥ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ ಎಂದರು.
ರಾಜ್ಯದ ಸರ್ಕಾರಿ ನೌಕರರು ಒಳ-ಹೊರ ರೋಗಿಯಾಗಿ ಸಂಪೂರ್ಣ ನಗದು ರಹಿತ ಚಿಕಿತ್ಸೆ ಪಡೆಯಲು ಅನುಕೂಲ ಆಗುವಂತೆ ಆರೋಗ್ಯ ಯೋಜನೆ ಜಾರಿಗೆ ತರಲಾಗುತ್ತಿದೆ. ಸದರಿ ಯೋಜನೆಯಲ್ಲಿ ಎಲ್ಲ ಔಷ ಧ ಇತರೆ ಆರೋಗ್ಯ ಸೇವೆ ಉಚಿತವಾಗಿ ದೊರೆಯಲಿದೆ. ರೋಗಿಗಳಿಗೆ ವಾಹನ ಸೌಲಭ್ಯವೂ ಸಿಗಲಿದೆ. ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ರಾಜ್ಯ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ ಮಾತನಾಡಿ, ಸಂಘಗಳು ನೌಕರರ ಹಿತ ಕಾಪಾಡಬೇಕು. ಈ ವಿಷಯದಲ್ಲಿ ಸಂಘ ತನ್ನ ಬದ್ಧತೆ ಮೆರೆಯುತ್ತಿದೆ ಎಂದು ವಿವರಿಸಿದರು.
ವಿಜಯಪುರ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಶೇಡಶ್ಯಾಳ ಮಾತನಾಡಿ, ಎನ್‌ಪಿಎಸ್ ಎಂಬುದು ವಿಷಮ ಕಳೆ ಇದ್ದಂತೆ. ಹೀಗಾಗಿ ಕೂಡಲೇ ಸರ್ಕಾರ ಎನ್‌ಪಿಎಸ್ ರದ್ದುಗೊಳಿಸಲು ರೂಪಿಸಿರುವ ಸಮಿತಿ ವರದಿಯನ್ನು ತುರ್ತಾಗಿ ಜಾರಿಗೆ ತರಬೇಕು ಎಂದರು.
ಆದರ್ಶ ಶಿಕ್ಷಕ ವೇದಿಕೆ ಸಂಚಾಲಕ ಜಗದೀಶ ಬೋಳಸೂರ ಪ್ರಾಸ್ತಾವಿಕ ಮಾತನಾಡಿದರು.ಸದಾಶಿವ ಹಂಚಲಿ ಮಾತನಾಡಿದರು. ಶ್ರೀಶೈಲ ಅಕ್ಷರ, ಮೋಹನ, ಶಂಭುಲಿಂಗನಗೌಡ, ಜುಬೇರ ಕೆರೂರ, ರಾಜಶೇಖರ ದೈವಾಡಿ, ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ಉಮೇಶ ಕವಲಗಿ, ರಾಜು ಬಿಸನಾಳ, ಶಿವಾನಂದ ಮಂಗಾನವರ, ಅಶೋಕ ಪಾಟೀಲ, ರಾಘು ಕುಲಕರ್ಣಿ, ಭೀಮನಗೌಡ ಬಿರಾದರ, ಎಸ್.ಬಿ.ಬಿರಾದಾರ, ಆರ್.ಎನ್. ಅಂಗಡಿ, ಎಂ.ಎನ್. ಅಂಗಡಿ, ಎಂ.ಎಸ್. ಬೂಸಾಗೊಂಡ, ಎಚ್.ಎಂ. ಚಿತ್ತರಗಿ, ಬಸವರಾಜ ಬೇವನೂರ, ಎ.ಎಂ. ಬಗಲಿ, ಎಸ್. ಎನ್. ಪಡಶೆಟ್ಟಿ, ಬಸವರಾಜ ದೊರನಹಳ್ಳಿ, ಎಚ್. ಕೆ. ಬೂದಿಹಾಳ, ಚಿನ್ನಯ್ಯ ಮಠಪತಿ, ಸಂತೋಷ ಕುಲಕರ್ಣಿ, ರವೀಂದ್ರ ಉಗಾರ, ಬಸವರಾಜ ಅಮರಪ್ಪಗೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.