ನಿವೃತ್ತ ಯೋಧರಿಗೆ ಪುಷ್ಪಾರ್ಚನೆ-ಅದ್ದೂರಿ ಸ್ವಾಗತ
Team Udayavani, Apr 3, 2022, 12:34 PM IST
ದಾವಣಗೆರೆ: ಭಾರತೀಯ ಸೇನೆಯಲ್ಲಿ ಸುದೀರ್ಘ ಸೇವೆ ಮಾಡಿ ನಿವೃತ್ತಿ ನಂತರ ಶುಕ್ರವಾರ ದಾವಣಗೆರೆಗೆ ಆಗಮಿಸಿದ ಯೋಧರಾದ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದಾವಣಗೆರೆಯ ನಿಟುವಳ್ಳಿಯ ಯೋಧರಾದ ಪರಮೇಶ್ ಮತ್ತು ಪುಟ್ಟಸ್ವಾಮಿ ಸೇನೆಯಲ್ಲಿ ಸಾಕಷ್ಟು ಕಾಲ ಕೆಲಸ ನಿರ್ವಹಿಸಿದವರು. ರೈಲಿನಿಂದ ಇಳಿಯುತ್ತಿದ್ದಂತೆ ಇಬ್ಬರು ಯೋಧರಿಗೆ ಪುಷ್ಪಾರ್ಚನೆ ಮಾಡಲಾಯಿತು.
ಭಾರತ್ ಮಾತಾ ಕೀ ಜೈ… ಯೋಧರಾದ ಪರಮೇಶ್ ಮತ್ತು ಪುಟ್ಟಸ್ವಾಮಿ ಅವರಿಗೆ ಜಯ ಘೋಷಣೆ ಮೊಳಗಿಸಲಾಯಿತು. ಪರಮೇಶ್ ಹಾಗೂ ಪುಟ್ಟಸ್ವಾಮಿ ಅಹ್ಮದ್ ನಗರ, ಸೂರತ್, ಪಂಜಾಬ್, ಕಾಶ್ಮೀರದ ವಿವಿದ ಭಾಗದಲ್ಲಿ 17 ವರ್ಷ ಸೇವೆ ಸಲ್ಲಿಸಿರುವುದನ್ನ ಸ್ಮರಿಸಲಾಯಿತು. ಇಬ್ಬರು ಯೋಧರನ್ನು ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಮಾತನಾಡಿದ ಯೋಧ ಪರಮೇಶ್, ದಾವಣಗೆರೆ ಜನರು ನೀಡಿರುವಂತಹ ಅದ್ಧೂರಿ ಸ್ವಾಗತ ನೋಡಿ ಅತ್ಯಂತ ಸಂತಸವಾಗುತ್ತಿದೆ. ಪ್ರತಿಯೊಬ್ಬರು ಸೇನೆಗೆ ಹೋಗಿ ದೇಶ ಭದ್ರತೆ ಮಾಡಬೇಕು. ದೇಶ ಇದ್ದರೆ ನಾವು, ಇಲ್ಲವಾದ್ರೆ ಉಕ್ರೇನ್ ಪರಿಸ್ಥಿತಿ ಉಂಟಾಗುತ್ತದೆ.ಐದಾರು ವರ್ಷಗಳಿಂದ ಭಾರತ ಸೇನೆ ಎಂದರೆ ಬೇರೆ ದೇಶಗಳಿಗೂ ಭಯ ಇದೆ.ಆದ್ದರಿಂದ ಪ್ರತಿಯೊಬ್ಬ ಯುವಕರೂ ಕೂಡ ಸೇನೆ ಸೇರಿ ದೇಶ ಸೇವೆ ಮಾಡುವಂತೆ ಮನವಿ ಮಾಡಿದರು.
ಮೇಯರ್ ಆರ್. ಜಯಮ್ಮ ಗೋಪಿನಾಯ್ಕ, ಉಪ ಮೇಯರ್ ಗಾಯತ್ರಿಬಾಯಿ ಖಂಡೋಜಿರಾವ್, ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್, ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಯಶವಂತರಾವ್ ಜಾಧವ್, ಯುವ ಮುಖಂಡ ಎನ್. ರಾಜಶೇಖರ್, ಪಿ.ಸಿ. ಶ್ರೀನಿವಾಸ್, ರವಿಬಾಬು, ಯೋಧರ ಕುಟುಂಬ ಸದಸ್ಯರು, ಬಂಧುಗಳು, ಆಪ್ತರು, ಅಭಿಮಾನಿಗಳು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.