ಜಾನುವಾರುಗಳಿಗೆ ಕಾಲು-ಬಾಯಿ ರೋಗ ಲಸಿಕೆ
Team Udayavani, Jun 2, 2018, 4:19 PM IST
ಕಲಘಟಗಿ: ಜಾನುವಾರುಗಳು ರೈತರ ಜೀವಾಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆ ಹಾಕುವುದರೊಂದಿಗೆ ರೈತರ ಬಾಳು ಹಸನಾಗಿಸಬೇಕು ಎಂದು ಶಾಸಕ ಸಿ.ಎಂ. ನಿಂಬಣ್ಣವರ ಅಧಿಕಾರಿಗಳಿಗೆ ಕರೆ ನೀಡಿದರು.
ಜಾನುವಾರುಗಳಲ್ಲಿ ಕಾಲು ಬಾಯಿ ರೋಗ ನಿಯಂತ್ರಣಕ್ಕೆ ಜೂನ್ ತಿಂಗಳ ಪರ್ಯಂತ ಹಮ್ಮಿಕೊಂಡಿರುವ ಲಸಿಕೆ ಅಭಿಯಾನಕ್ಕೆ ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ತಜ್ಞರ ಸಲಹೆ-ಸೂಚನೆಗಳನ್ನು ರೈತರು ಕಟ್ಟುನಿಟ್ಟಾಗಿ ಪಾಲಿಸಬೇಕು. ಲಸಿಕೆಯು ಯಾವುದೇ ಕಾರಣಕ್ಕೂ ತನ್ನ ಗುಣಮಟ್ಟ ಕಳೆದುಕೊಳ್ಳದಂತೆ ಅಧಿಕಾರಿ ವರ್ಗ ನಿಗಾ ವಹಿಸಬೇಕು ಎಂದರು. ಸ್ಥಳೀಯ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ| ಬಿ.ಬಿ. ಅವಾರಿ ಪ್ರಾಸ್ತಾವಿಕ ಮಾತನಾಡಿ, ಜೂ. 1ರಿಂದ 30ರ ವರೆಗೂ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ಹಾಕಲಾಗುವುದು. ಇದೊಂದು ವೈರಾಣು ರೋಗವಾಗಿದ್ದು ಲಸಿಕೆ ಹಾಕುವುದೊಂದೇ ರೋಗ ನಿಯಂತ್ರಣದ ಏಕೈಕ ಮಾರ್ಗವಾಗಿದೆ. ಪೂರ್ಣ ಸುರಕ್ಷತೆಗಾಗಿ ವರ್ಷಕ್ಕೆ ಎರಡು ಬಾರಿ ಲಸಿಕೆ ಹಾಕುವ ಅಗತ್ಯತೆಯಿದೆ. ತಾಲೂಕಿನಲ್ಲಿ 54,103 ದನ ಮತ್ತು ಎಮ್ಮೆಗಳಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಪಟ್ಟಣದ ಪಶು ಆಸ್ಪತ್ರೆ ಸೇರಿದಂತೆ ಮಿಶ್ರಿಕೋಟಿ, ಮುಕ್ಕಲ್ಲ, ಸಂಗಮೇಶ್ವರ, ಸೂರಶೆಟ್ಟಿಕೊಪ್ಪ, ಬೀರವಳ್ಳಿ, ತಾವರಗೇರಿ, ದೇವಿಕೊಪ್ಪ, ದುಮ್ಮವಾಡ, ಹಿರೆಹೊನ್ನಳ್ಳಿ, ತಬಕದಹೊನ್ನಳ್ಳಿ, ಗಳಗಿಹುಲಕೊಪ್ಪ, ಜಿ. ಬಸನಕೊಪ್ಪ, ಮುತ್ತಗಿ, ಕೂಡಲಗಿ, ಗಂಜೀಗಟ್ಟಿ ಗ್ರಾಮಗಳ ಪಶು ಚಿಕಿತ್ಸಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಲ್ಲೂ ಲಸಿಕೆ ಹಾಕುವ ಕಾರ್ಯದಲ್ಲಿ ಪಶು ವೈದ್ಯಾ ಧಿಕಾರಿ ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.