ವಿವಿಧ ಬೇಡಿಕೆ ಈಡೇರಿಕೆಗೆ ಮಾಜಿ ಸೈನಿಕರ ಧರಣಿ


Team Udayavani, Jan 28, 2020, 12:13 PM IST

dg-tdy-2

ದಾವಣಗೆರೆ: ಸೈನಿಕ ಶಾಲೆ ಮಾದರಿ ತರಬೇತಿ ಕೇಂದ್ರ, ಸಮುದಾಯ ಭವನ, ಹುತಾತ್ಮ ಯೋಧರ ಸ್ಮಾರಕದ ಅನುಷ್ಠಾನ, 24ಗಿ7 ಕಾಲ ಅತ್ಯುಚ್ಚ ಸುವರ್ಣ ಧ್ವಜ ಸ್ಥಾಪನೆಗೆ ಸೂಕ್ತ ಸ್ಥಳವಕಾಶ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ದಾವಣಗೆರೆ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘದ ನೇತೃತ್ವದಲ್ಲಿ ಮಾಜಿ ಸೈನಿಕರು, ಕುಟುಂಬದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿದರು.

ಬೆಳಗಾವಿ, ಚಿತ್ರದುರ್ಗ ಇತರೆಡೆಯಂತೆ ದಾವಣಗೆರೆಯಲ್ಲಿ ದಿನದ 24 ಗಂಟೆ ಸದಾ ತ್ರಿವರ್ಣ ಧ್ವಜ ಹಾರಾಡುವ ವ್ಯವಸ್ಥೆ ಮಾಡಬೇಕು ಎಂಬುದು ಮಾಜಿ ಸೈನಿಕರ ಉತ್ಕಟ ಬಯಕೆ. ಅದಕ್ಕೆ ಸೂಕ್ತ ಸ್ಥಳಾವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಸಂಬಂಧಿತರಿಗೆ ಮನವಿ ಮಾಡಲಾಗಿದೆ. ಆದರೆ, ಈವರೆಗೆ ಯಾವುದೇ ಪ್ರಯೋಜನ ಆಗಿಲ್ಲ ಎಂದು ತಿಳಿಸಿದರು.

ದಾವಣಗೆರೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಮಹಾನಗರ ಪಾಲಿಕೆಯಲ್ಲಿ ಅನುಮೋದನೆ ಪಡೆದು 6 ತಿಂಗಳು ಕಳೆದರೂ ಅನುಷ್ಠಾನಕ್ಕೆ ಬರದೇ ಇರುವುದು ಖೇದಕರ ಸಂಗತಿ. ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ಅನೇಕ ಯುವಕರಿಗೆ ಸೈನ್ಯಕ್ಕೆ ಸೇರುವ ಬಯಕೆ ಇರುತ್ತದೆ. ಸೈನ್ಯಕ್ಕೆ ಸೇರುವ ನಿಟ್ಟಿನಲ್ಲಿ ಸೂಕ್ತ ಮಾಹಿತಿ, ಒಂದಷ್ಟುತರಬೇತಿ ಅತ್ಯಗತ್ಯ. ಮಾಜಿ ಸೈನಿಕರು ಆಸಕ್ತರಿಗೆ ಅಗತ್ಯ ತರಬೇತಿ ನೀಡಲು ಸದಾ ಸಿದ್ಧರಿದ್ದಾರೆ. ಸೈನಿಕ ಶಾಲೆ ಮಾದರಿಯ ತರಬೇತಿ ಶಾಲೆಗೆ ಸೂಕ್ತ ಕಡೆ ಜಾಗದ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಮಾಜಿ ಹಾಗೂ ಹಾಲಿ ಸೈನಿಕರ ಕುಟುಂಬಗಳಿಗೆ ಸಭೆ, ಸಮಾರಂಭ, ಕಾರ್ಯಕ್ರಮಕ್ಕೆ ಅನುಕೂಲ ಆಗುವಂತೆ ಸಮುದಾಯ ಭವನಕ್ಕೆ ಜಾಗ ನೀಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆಯಲ್ಲಿ 1800-1900 ರಷ್ಟು ಹಾಲಿ, ಮಾಜಿ ಸೈನಿಕರು, 6 ಸಾವಿರದಷ್ಟು ಅವಲಂಬಿತರಿದ್ದಾರೆ. ಕುಂದುಕೊರತೆ, ಸಮಸ್ಯೆ, ಮಾಹಿತಿಗಾಗಿ ಕಚೇರಿಯ ಅಗತ್ಯವಿದೆ. 28 ವರ್ಷಗಳಿಂದ ಸೈನಿಕರು ತಮ್ಮ ವೆಚ್ಚದಲ್ಲೇ ಕಚೇರಿ ನಿರ್ವಹಣೆ ಮಾಡುತ್ತಿದ್ದಾರೆ. ಭವಿಷ್ಯದಲ್ಲಿ ಕಷ್ಟಸಾಧ್ಯ. ಹಾಗಾಗಿ ಸರ್ಕಾರಿ ಕಟ್ಟಡದಲ್ಲಿ ಕಚೇರಿಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಸರ್ಕಾರಿ ಆದೇಶದಂತೆ ಮಾಜಿ ಸೈನಿಕರಿಗೆ ನಿವೇಶನ, ಜಮೀನು, ಸಂಘದ ಕಚೇರಿಗೆ ಸ್ಥಳವಕಾಶ, ನೇರ, ಗುತ್ತಿಗೆ ಆಧಾರದಲ್ಲಿ ಕೆಲಸನೇಮಕಾತಿಯಲ್ಲಿ ಮೀಸಲಾತಿ… ಇತರೆ ಬೇಡಿಕೆ ಈಡೇರಿಸುವ ತನಕ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಎಂ.ಎನ್‌. ಸತ್ಯಪ್ರಕಾಶ್‌, ಉಪಾಧ್ಯಕ್ಷ ಎಂ.ಎಸ್‌. ಮಹೇಂದ್ರಕರ್‌, ಕಾರ್ಯದರ್ಶಿಓ.ಬಿ. ಶಶಿಕಾಂತ್‌, ಖಜಾಂಚಿ ಎಂ. ದಾಸಪ್ಪ, ಗೋಪಾಲ್‌, ಬಸವರಾಜ್‌, ಎಂ.ಎನ್‌. ಬಸವರಾಜಪ್ಪ, ಅಂದಾನಪ್ಪ, ಎಸ್‌.ಎಸ್‌. ಷಣ್ಮುಖಪ್ಪ, ರಘುನಾಥ್‌ ಜಾಧವ್‌, ಉದಯ್‌ಕುಮಾರ್‌, ಪರಶುರಾಮ್‌, ದಾಕ್ಷಾಯಣಮ್ಮ ಅಂದಾನಪ್ಪ ಇತರರು ಇದ್ದರು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.