ಇಂದಿನಿಂದ ಜನಜಾಗೃತಿ ಪಾದಯಾತ್ರೆ
Team Udayavani, Jan 12, 2019, 7:10 AM IST
ದಾವಣಗೆರೆ: ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 62ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ ಹಾಗೂ ಸಹಜ ಶಿವಯೋಗದ ಅಂಗವಾಗಿ ಇಂದಿನಿಂದ 17ರವರೆಗೆ ನಗರದ ವಿವಿಧ ಬಡಾವಣೆಗಳಲ್ಲಿ ಜನಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಪ್ರತಿದಿನ ಬೆಳಗ್ಗೆ 7.30ರಿಂದ ಪಾದಯಾತ್ರೆ ಪ್ರಾರಂಭವಾಗಲಿದೆ. ಶನಿವಾರ ವಿರಕ್ತಮಠದಿಂದ ಪ್ರಾರಂಭವಾಗುವ ಪಾದಯಾತ್ರೆಯನ್ನು ಮೇಯರ್ ಶೋಭಾ ಪಲ್ಲಾಗಟ್ಟೆ ಉದ್ಘಾಟಿಸುವರು. ವಿರಕ್ತಮಠದಿಂದ ಪ್ರಾರಂಭವಾಗುವ ಪಾದಯಾತ್ರೆ ಮದಕರಿನಾಯಕ ವೃತ್ತ, ಸ್ವಾಗೇರಪೇಟೆ, ಕಾಯಿಪೇಟೆ, ವಿಜಯಲಕ್ಷ್ಮಿ ರಸ್ತೆಯ ಮೂಲಕ ವಿರಕ್ತಮಠಕ್ಕೆ ವಾಪಸ್ಸಾಗಲಿದೆ. ಭಾನುವಾರ ವಿರಕ್ತಮಠ- ಹಳೇಪೇಟೆ- ಗಾಂಧಿನಗರ- ವಿರಕ್ತಮಠ, ಸೋಮವಾರ ಬಂಬೂಬಜಾರ್‌ನ ಮಲ್ಲಿಕಾರ್ಜುನ ಸ್ವಾಮಿ ಕಲ್ಯಾಣ ಮಂಟಪದಿಂದ ಪ್ರಾರಂಭ, 15ರಂದು ವಿನೋಬ ನಗರದ ಶಂಭುಲಿಂಗ ದೇವಸ್ಥಾನದಿಂದ ಪ್ರಾರಂಭವಾಗಿ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಮುಕ್ತಾಯಗೊಳ್ಳಲಿದೆ. 16ರಂದು ಎಸ್‌ಪಿಎಸ್ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ 17ರಂದು ಕೆಟಿಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ಸಂಚರಿಸಲಿದೆ. ಹೆಚ್ಚಿನ ಮಾಹಿತಿಗೆ ಮೊ: 99455-72979, 90089-40914, 90197-38735ಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.