ಬಜೆಟ್‌ನಲ್ಲಿ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Team Udayavani, Jun 4, 2019, 12:06 PM IST

dg-tdy-4..

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಎಐಟಿಯುಸಿ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ದಾವಣಗೆರೆ: ಜುಲೈ 5ರಂದು ಕೇಂದ್ರ ಸರ್ಕಾರ ಮಂಡನೆ ಮಾಡುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಎಐಟಿಯುಸಿ ಕಾರ್ಯಕರ್ತರು ನಗರದ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.

ಕಳೆದ 16 ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರು ಯಾವುದೇ ಸೌಲತ್ತುಗಳಿಂದ ವಂಚಿತರಾಗಿ ದುಡಿಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಅಡುಗೆಯವರಿಗೆ 2700ರೂ. ಹಾಗೂ ಸಹಾಯಕರಿಗೆ 2600ರೂ. ನೀಡುತ್ತಿದ್ದು, ಈ ಗೌರವಧನದಿಂದ ಜೀವನ ನಿರ್ವಹಣೆ ಮಾಡುವುದು ತುಂಬಾ ಕಷ್ಟವಾಗುತ್ತಿದೆ ಎಂದು ದೂರಿದರು.

ಸರ್ಕಾರ ಬಿಸಿಯೂಟ ತಯಾರಿಕರಿಗೆ ಕನಿಷ್ಠ ವೇತನ ಜಾರಿಗೆ ತರಬೇಕು, ಶಾಲೆಗಳ ಬಿಸಿಯೂಟ ಪೂರೈಕೆಯನ್ನು ಇಸ್ಕಾನ್‌, ಮತ್ತಿತರೆ ಖಾಸಗಿ ಸಂಸ್ಥೆಗಳಿಗೆ ಕೊಡುವ ಹುನ್ನಾರವನ್ನು ಕೈಬಿಡಬೇಕು. ಕೆಲಸದ ಭದ್ರತೆ ಒದಗಿಸಬೇಕು, ಬಿಸಿಯೂಟ ಸಿಬ್ಬಂದಿಯನ್ನು ಶಾಲಾ ಸಿಬ್ಬಂದಿಯನ್ನಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ತಯಾರಕರನ್ನು ಕಾರ್ಮಿಕರೆಂದು ಪರಿಗಣಿಸಿ, ಕಾರ್ಮಿಕ ಕಾಯ್ದೆಯಡಿ ತರಬೇಕು. ಪಿಎಫ್‌,ಇಎಸ್‌ಐ ಜಾರಿಗೊಳಿಸಬೇಕು, ಬಿಸಿಯೂಟ ತಯಾರಕರಿಗೆ 2ಲಕ್ಷ ರೂ. ಅಪಘಾತ ಪರಿಹಾರ ಹಾಗೂ 5 ಲಕ್ಷ ರೂ. ಮರಣ ಪರಿಹಾರ ಕೊಡಬೇಕು. 60 ವರ್ಷ ಆದವರಿಗೆ ಮಾಸಿಕ 3ಸಾವಿರ ರೂ. ನಿವೃತ್ತಿ ಪಿಂಚಣಿ ಮತ್ತು 2 ಲಕ್ಷ ರೂ. ಇಡುಗಂಟು ಹಣ ನೀಡಬೇಕು, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಎಐಟಿಯುಸಿ ರಾಜ್ಯ ಗೌರವಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಖಜಾಂಚಿ ರುದ್ರಮ್ಮ ಬೆಳಲಗೆರೆ, ಸಿ.ರಮೇಶ್‌, ಆವರಗೆರೆ ಚಂದ್ರು, ಮಹಮ್ಮದ್‌ ಬಾಷಾ, ಆವರಗೆರೆ ಚಂದ್ರು, ಜ್ಯೋತಿಲಕ್ಷ್ಮಿ, ಸರೋಜ, ವನಜಾಕ್ಷಿ, ಸಾವಿತ್ರಮ್ಮ, ದ್ರಾಕ್ಷಾಣಮ್ಮ, ಲಕ್ಷ್ಮೀಬಾಯಿ, ಮಮತ, ಸುಜಾತಮ್ಮ, ಮಂಜಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.