ಮೈದುಂಬಿ ಹರಿದ ತುಂಗಭದ್ರೆ; ಬೆಳೆಗಳು ಜಲಾವೃತ
Team Udayavani, Aug 12, 2018, 3:04 PM IST
ಕಂಪ್ಲಿ: ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಗೆ ಇನ್ನು ಕೇವಲ ಎರಡು ಅಡಿ ಬಾಕಿ ಉಳಿದಿದ್ದು, ಜಲಾಶಯಕ್ಕೆ 90 ಸಾವಿರ ಕ್ಯುಸೆಕ್ಸ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 32 ಕ್ರೆಸ್ಟ್ ಗೇಟುಗಳ ಮೂಲಕ ತುಂಗಭದ್ರಾ ನದಿಗೆ 90 ಸಾವಿರ ಕ್ಯುಸೆಕ್ಸ್ ನೀರು ಬಿಟ್ಟಿರುವುದರಿಂದ ಕಂಪ್ಲಿ ಕೋಟೆ ಸೇತುವೆ ಮುಳುಗಡೆಗೆ ಕೇವಲ ಒಂದಡಿ ಬಾಕಿ ಉಳಿದಿದ್ದು, ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
2014ರಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕ ಮಳೆಯಾಗದಿರುವುದರಿಂದ ಜಲಾಶಯ ಭರ್ತಿಯಾಗಿರಲಿಲ್ಲ ಹಾಗೂ ನದಿಗೆ ನೀರು ಬಿಡದಿರುವುದರಿಂದ ಕಂಪ್ಲಿ ಭಾಗದಲ್ಲಿ ತುಂಗಭದ್ರಾ ನದಿ ತುಂಬಿ ಹರಿದಿರಲಿಲ್ಲ. ಆದರೆ ಈ ವರ್ಷ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಅವಧಿಗೂ ಮುನ್ನ ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಈ ಹಿನ್ನೆಲೆಯಲ್ಲಿ ಜಲಾಶಯದಿಂದ ತುಂಗಭದ್ರಾ ನದಿಗೆ ಭಾರಿ ಪ್ರಮಾಣದಲ್ಲಿ 12 ದಿನಗಳ ಕಾಲ ನೀರು ಹರಿ ಬಿಡಲಾಗಿತ್ತು.
ಇದೀಗ ಪುನಃ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಬರುತ್ತಿರುವುದರಿಂದ ಇಂದು ಸುಮಾರು 90 ಸಾವಿರ ಕ್ಯುಸೆಕ್ಸ್ ನೀರು ನದಿಗೆ ಬಿಟ್ಟಿದ್ದು, ಕಂಪ್ಲಿ ಕೋಟೆ ಸಮೀಪ ನದಿಗೆ ನಿರ್ಮಿಸಿರುವ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದೆ. ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಮೂರ್‍ನಾಲ್ಕು ವರ್ಷಗಳ ನಂತರ ಬಿಟ್ಟಿರುವುದರಿಂದ ನದಿಯಲ್ಲಿದ್ದ ಗಿಡ ಗಂಟಿಗಳು ನೀರಿನೊಂದಿಗೆ ಹರಿದು ಬರುತ್ತಿರುವುದರಿಂದ ಕಸಕಡ್ಡಿಗಳು ಸೇತುವೆ ಮೇಲೆ ಬಂದಿದ್ದು, ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಇನ್ನು ಹತ್ತು ಸಾವಿರ ಕ್ಯುಸೆಕ್ಸ್ ನೀರು ಬಿಟ್ಟರೆ ಸೇತುವೆ ಮೇಲೆ ನೀರು ಹರಿಯಲಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಹತ್ತಿರ ಕಟ್ಟೆಚ್ಚರ ವಹಿಸಲಾಗಿದೆ.
ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ
ಮೂರ್‍ನಾಲ್ಕು ವರ್ಷಗಳ ನಂತರ ಕಂಪ್ಲಿ ಭಾಗದಲ್ಲಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದನ್ನು ನೋಡಲು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನ ಆಗಮಿಸುತ್ತಿದ್ದು, ಸಾರ್ವಜನಿಕರು ಮತ್ತು ವಾಹನಗಳ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ತುಂಗಭದ್ರಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿ ಪಾತ್ರದ ಜನತೆ ಜಾಗ್ರತೆಯಲ್ಲಿರುವಂತೆ ಸೂಚಿಸಿದ್ದಾರೆ. ನದಿ ಪಾತ್ರದಲ್ಲಿ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಜಲಾವೃತಗೊಂಡ ಜಮೀನುಗಳು
ತುಂಗಭದ್ರಾ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿ ತೀರದ ಬಹುತೇಕ ಜಮೀನುಗಳು ಜಲಾವೃತಗೊಂಡಿವೆ. ಕೋಟೆ ಬಳಿಯಲ್ಲಿನ ಕಬ್ಬಿನ ಗದ್ದೆ, ಬಾಳೆ ತೋಟಗಳು ಜಾಲವೃತಗೊಂಡಿದ್ದು, ನದಿಯಲ್ಲಿ ನೀರಿನ ಪ್ರಮಾಣ ಇದೇ ರೀತಿ ಮುಂದುವರಿದರೆ ಬೆಳೆಗಳು ಹಾನಿಯಾಗಲಿವೆ ಎಂದು ರೈತರು ಆತಂಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.