ಗಣೇಶೋತ್ಸವ: ಮಾರ್ಗಸೂಚಿ ಪಾಲನೆ ಕಡ್ಡಾಯ
Team Udayavani, Aug 22, 2020, 5:23 PM IST
ಹರಿಹರ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮಿ ತಿಳಿಸಿದ್ದಾರೆ.
ದೇವಸ್ಥಾನ, ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬವನ್ನು 20 ಜನರ ಸಂಖ್ಯೆ ಮೀರದಂತೆ ಆಚರಿಸಬೇಕು. ಸಾರ್ವಜನಿಕ ಸ್ಥಳದ ಮೂರ್ತಿ 4 ಅಡಿ, ಮನೆಗಳಲ್ಲಿ 2 ಅಡಿ ಅಳತೆ ಮೀರಬಾರದು. ನಗರಸಭೆಯಿಂದ ಪೂರ್ವಾನುಮತಿ ಪಡೆಯಬೇಕು. ವಾರ್ಡ್‌ಗೆ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಮೆರವಣಿಗೆ ಸೇರಿದಂತೆ ಸಾಂಸ್ಕೃತಿಕ, ಸಂಗೀತ, ನೃತ್ಯ ಇತರೆ ಮನರಂಜನಾ ಕಾರ್ಯಕ್ಕೆ ಅವಕಾಶವಿಲ್ಲ. ಪಿಒಪಿ ಮೂರ್ತಿ ನಿಷೇಧಿಸಿದೆ. ಮನೆಗಳಲ್ಲಿ ಸ್ಥಾಪಿತ ಮೂರ್ತಿಗಳನ್ನು ಮನೆಗಳಲ್ಲಿ, ಸಾರ್ವಜನಿಕ ಮೂರ್ತಿಗಳನ್ನು ಅತಿ ಸಮೀಪದ ನಿಗದಿತ ಹೊಂಡ, ಮೊಬೈಲ್ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು. ಮೂರ್ತಿ ಸ್ಥಾಪಿತ ದೇವಸ್ಥಾನ, ಸಾರ್ವಜನಿಕ ಸ್ಥಳದಲ್ಲಿ ನಿತ್ಯ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್ ಧಾರಣೆ, 6 ಅಡಿ ಅಂತರ ಕಾಪಾಡಬೇಕು. ತಪ್ಪಿದರೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಪಿಒಪಿ ಮೂರ್ತಿ ಮಾರಾಟ ಬೇಡ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರಿಗೆ ಕೆಲ ಸೂಚನೆ ನೀಡಿದೆ. ಗಣೇಶ ಮೂರ್ತಿಗಳನ್ನು ಜೇಡಿಮಣ್ಣಿನಿಂದ ತಯಾರಿಸಿ, ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಮಹಾನಗರಪಾಲಿಕೆ ಕಾಯ್ದೆ ಕಾನೂನು ಕ್ರಮ ಕೈಗೊಳ್ಳಲಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು 10,000ರೂ. ದಂಡ ವಿಧಿಸಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಬಾರದು ಎಂದು ಮಹಾನಗರ ಪಾಲಿಕೆ ಸೂಚಿಸಿದೆ. ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸಬಾರದು ಎಂದು ಮಹಾನಗರಪಾಲಿಕೆ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.