Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Team Udayavani, Apr 17, 2024, 9:51 AM IST
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರು ಮಂಗಳವಾರ ತಮ್ಮ ಜನ್ಮದಿನವನ್ನು ಸರಳವಾಗಿ
ಆಚರಿಸಿಕೊಂಡರು.
ಜಿಎಂಐಟಿ ಅತಿಥಿಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪತಿ, ಸಂಸದ ಜಿ.ಎಂ. ಸಿದ್ದೇಶ್ವರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು. ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಹೋದರಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ದೇವರು ಆರೋಗ್ಯ, ಆಯುಷ್ಯ ನೀಡಲಿ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹಾರೈಸಿದರು. ನಂತರ ಆವರಗೆರೆ ಬಳಿಯ ಗೋಶಾಲೆಗೆ ಭೇಟಿ ನೀಡಿದ ಗಾಯಿತ್ರಿ ಸಿದ್ದೇಶ್ವರ, ಗೋಮಾತೆಗೆ ಮೇವು ತಿನ್ನಿಸಿ ಪೂಜೆ ಸಲ್ಲಿಸಿದರು.
ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗವಾಯಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಅಂಧ ಮಕ್ಕಳಿಗೆ ಸಿಹಿ ವಿತರಿಸಿದರು. ಅವರಗೆರೆಯ ಜೈನ
ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್,
ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್,ಟಿ. ಗಣೇಶ ದಾಸಕರಿಯಪ್ಪ, ಜಿ.ಎಸ್.ಅನಿತ್‌ಕುಮಾರ್, ಜಿ.ಎಸ್. ಅಶ್ವಿನಿ, ಗ್ಯಾರಳಿ ಶಿವು, ಗೌತಮ್ ಜೈನ್
ಇತರರು ಇದ್ದರು.
ಇದನ್ನೂ ಓದಿ: Baba Ramdev: ನೀವು ಅಮಾಯಕರೇನೂ ಅಲ್ಲ: ರಾಮ್‌ದೇವ್‌ಗೆ ಸುಪ್ರೀಂ ಚಾಟಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.