Lok Sabha Polls: “ಸ್ವ-ನಿಧಿ ಯೋಜನೆ ವ್ಯಾಪಾರಿಗಳಿಗೆ ಸಂಜೀವಿನಿ’: ಗಾಯತ್ರಿ ಸಿದ್ದೇಶ್ವರ್
Team Udayavani, Apr 8, 2024, 9:15 AM IST
ದಾವಣಗೆರೆ: ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ ದೇಶದ ಕೋಟ್ಯಂತರ ಬೀದಿಬದಿ ವ್ಯಾಪಾರಿಗಳು ಬದುಕು ರೂಪಿಸಿಕೊಳ್ಳಲು, ಜೀವನ ಮಟ್ಟ ಸುಧಾರಿಸಿಕೊಳ್ಳಲು ಸಂಜೀವಿನಿಯಾಗಿದೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತಿಳಿಸಿದರು.
ಭಾನುವಾರ ಹಳೇ ದಾವಣಗೆರೆ ಭಾಗದ ಗಡಿಯಾರದ ಕಂಬ, ಕಾಯಿಪೇಟೆ ಮಾರ್ಕೆಟ್ ಸೇರಿದಂತೆ ವಿವಿಧ ಭಾಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಜೊತೆ ಚರ್ಚೆ ನಡೆಸಿ, ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಯಾಗಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಕೊರೊನಾ ನಂತರ ಬೀದಿ ಬದಿ ವ್ಯಾಪಾರಿಗಳ ಬದುಕು ದುಸ್ತರವಾಗಿತ್ತು. ಲೇವಾದೇವಿಗಳ ಬಳಿಕ ಅಧಿಕ ಬಡ್ಡಿಗೆ ಹಣ ತಂದು ಸಂಕಷ್ಟಕ್ಕೆ ಒಳಗಾಗಿದ್ದರು.
ಅವರೆಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಸಹೋದರನಾಗಿ, ಮನೆ ಮಗನಾಗಿ ಬೆನ್ನಿಗೆ ನಿಂತು ಪಿಎಂ ಸ್ವ-ನಿಧಿ ಯೋಜನೆ ಜಾರಿಗೆ ತರುವ
ಮೂಲಕ ಸಾಕಷ್ಟು ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ತಿಳಿಸಿದರು.
ಪಿಎಂ ಸ್ವ-ನಿಧಿ ಯೋಜನೆಯಿಂದ ತಳ್ಳುವ ಗಾಡಿ, ಹಣ್ಣು ವ್ಯಾಪಾರಿಗಳು, ಉಡುಪು ಮಾರಾಟಗಾರರು, ûೌರಿಕರು, ಲಾಂಡ್ರಿ, ಪಂಕ್ಚರ್ ಶಾಪ್ ಸೇರಿದಂತೆ ಎಲ್ಲ
ಬಗೆಯ ಬೀದಿ ಬದಿ ವ್ಯಾಪಾರಿಗಳಿಗೆ ಅತ್ಯಂತ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಿದ್ದಾರೆ
ಎಂದು ತಿಳಿಸಿದರು.
ಪಿಎಂ ಸ್ವ-ನಿಧಿ ಯೋಜನೆ ಅಡಿ ಬೀದಿ ಬದಿ ವ್ಯಾಪಾರಿಗಳಿಗೆ ಮೊದಲ ಹಂತದಲ್ಲಿ 10 ಸಾವಿರ, 2ನೇ ಹಂತದಲ್ಲಿ 20 ಸಾವಿರ, 3ನೇ ಹಂತದಲ್ಲಿ 50 ಸಾವಿರ
ಸಾಲ ನೀಡಿ ಆರ್ಥಿಕ ಸಹಾಯ ಮಾಡಲಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 16,345 ಜನ ಬೀದಿಬದಿ ವ್ಯಾಪಾರಿಗಳಿಗೆ 19 ಕೋಟಿಯಷ್ಟು ಸಾಲ ಸೌಲಭ್ಯ ನೀಡಲಾಗಿದೆ ಎಂದು ತಿಳಿಸಿದರು.
ಪಿಎಂ ಸ್ವ-ನಿಧಿ ಯೋಜನೆ ಮೂಲಕ ಸಾಲ ಸೌಲಭ್ಯ ಒದಗಿಸಲು ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಪ್ರಾಮಾಣಿಕ ಕೆಲಸವೂ ಕಾರಣ. ಮತದಾರರು ನನಗೆ
ನೀಡುವ ಒಂದೊಂದು ಮತವೂ ಮೋದಿ ಅವರಿಗೆ ನೀಡುವ ಮತಗಳು. ಬೀದಿಬದಿ ವ್ಯಾಪಾರಿಗಳ ಜೀವನ ಮಟ್ಟ ಇನ್ನಷ್ಟು ಸುಧಾರಿಸಲು, ಮಕ್ಕಳ ಭವಿಷ್ಯ
ಉಜ್ವಲಗೊಳ್ಳಲು ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿ ಆಗಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್,ಯುವ ಮುಖಂಡ ಜಿ.ಎಸ್.ಅನಿತ್ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಆರ್.ಎಲ್. ಶಿವಪ್ರಕಾಶ್, ಬಸವರಾಜ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಗ್ಯ ಪಿಸಾಳೆ, ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಜಯಮ್ಮ, ರೇಣುಕಾಕೃಷ್ಣ, ಡಾ| ಸಿ.ಆರ್. ನಸೀರ್ ಅಹಮದ್, ಗೌತಮ್ ಜೈನ್, ಟಿಂಕರ್ ಮಂಜಣ್ಣ, ಶಿವನಗೌಡ ಟಿ. ಪಾಟೀಲ್, ತರಕಾರಿ ಶಿವು, ಕರಾಟೆ ಕೃಷ್ಣ, ಚೇತುಭಾಯ್ ಇತರರು ಇದ್ದರು.
ಬೀದಿಬದಿ ವ್ಯಾಪಾರಿಗಳ ಸಂಕಷ್ಟ ಆಲಿಸಿದ ಅಭ್ಯರ್ಥಿ
ಗಾಯತ್ರಿ ಸಿದ್ದೇಶ್ವರ್ ಅವರು ಗಡಿಯಾರ ಕಂಬದ ಮಾರ್ಕೆಟ್, ಕಾಯಿಪೇಟೆ ಮಾರ್ಕೆಟ್ ಭಾಗದಲ್ಲಿ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳ ಬಳಿ ತೆರಳಿ ಸಂಕಷ್ಟ ಆಲಿಸಿದರು. ಅವರ ಸಂಕಷ್ಟಕ್ಕೆ ಧ್ವನಿಯಾಗಲು, ಅವರ ಬೇಡಿಕೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಎಲ್ಲರ ಬಳಿ ಚರ್ಚಿಸಿದರು. ಪಿಎಂ ಸ್ವ-ನಿಧಿ ಯೋಜನೆ
ಉಪಯೋಗಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಲಹೆ ನೀಡಿದರು. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಬೇಕು ಅನ್ನೋದು ಎಲ್ಲ ವರ್ಗದವರ ಆಶಯ. ನನಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಗೆಲ್ಲಿಸಿ ಕಳುಹಿಸಿ. ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಂಡು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.