Lok Sabha Election: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತಯಾಚನೆ ಶುರು…

Team Udayavani, Mar 22, 2024, 10:01 AM IST

Lok Sabha Election: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತಯಾಚನೆ ಶುರು…

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಗುರುವಾರ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.

ಶಾಮನೂರಿನ ಆಂಜನೇಯಸ್ವಾಮಿ ಹಾಗೂ ಈಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮುಖಂಡರ ಮನೆಗಳಿಗೆ ತೆರಳಿ ಉಭಯ ಕುಶಲೋಪರಿ ವಿಚಾರಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿದ ಗಾಯತ್ರಿ ಸಿದ್ದೇಶ್ವರ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಪುಣ್ಯಾನಂದಪುರಿ ಸ್ವಾಮೀಜಿ ಅವರ ಗದ್ದಿಗೆಗೆ ನಮನ ಸಲ್ಲಿಸಿದರು. ಬಳಿಕ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ಶಾಸಕ ಬಿ.ಪಿ. ಹರೀಶ್‌, ಮಾಜಿ ಶಾಸಕ ಎಸ್‌.ವಿ. ರಾಮಚಂದ್ರ, ಹನಗವಾಡಿ ವೀರೇಶ್‌, ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಮುಖಂಡ ಜಿ.ಎಸ್‌. ಅನಿತ್‌ಕುಮಾರ್‌, ಬಿ.ಎಸ್‌. ಜಗದೀಶ್‌ ಇತರರು ಇದ್ದರು.

ನಂದಿಗುಂಡಿ ಗ್ರಾಮದ ನಂದಿಗುಡಿ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು. ಉಕ್ಕಡಗಾತ್ರಿಯ ಶ್ರೀ ಗುರು ಕರಿಬಸವೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು.

ಉಕ್ಕಡಗಾತ್ರಿ ಗ್ರಾಮದ ದಾನೇಶಸ್ವಾಮಿ ಅವರ ಮನೆಗೆ ಭೇಟಿ ನೀಡಿದ ಗಾಯತ್ರಿ ಸಿದ್ದೇಶ್ವರ ಮತ್ತು ಮುಖಂಡರು ಅನೇಕ ವಿಷಯಗಳ ಬಗ್ಗೆ ಚರ್ಚಿಸಿದರು.

ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಆಂಜನೇಯಸ್ವಾಮಿ ದೇವಾಲಯ, ಹಳ್ಳಿಹಾಳ್‌ ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯ, ಜಿ.ಬೇವಿನಹಳ್ಳಿ ಗ್ರಾಮದ ಮಂಜುನಾಥ ಸ್ವಾಮಿ, ಗಣೇಶ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನ ಹಾಗೂ ಮಠಗಳ ಭೇಟಿ ನಂತರ ಆಯಾ ಗ್ರಾಮದ ಮುಖಂಡರ ಮನೆಗಳಿಗೆ ತೆರಳಿ ಮತಯಾಚನೆ ಮಾಡಿ, ಕೇಂದ್ರ ಸರ್ಕಾರದ ಮತ್ತು ಜಿ.ಎಂ. ಸಿದ್ದೇಶ್ವರ ಅವರು, ಕಳೆದ ನಾಲ್ಕು ಅವಧಿಯಲ್ಲಿ ಮಾಡಿವಂತಹ ಅಭಿವೃದ್ಧಿ ಕೆಲಸ-ಕಾರ್ಯ, ಗ್ರಾಮಗಳ ಭೇಟಿ ನೀಡಿದ್ದಾರೆ. ಅವರಂತೆ ತಮಗೂ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಹರಿಹರ ತಾಲೂಕಿನ ಗೋವಿನಹಾಳ್‌, ಮೂಗಿನಗುಂದಿ, ಹಿಂಡಸಘಟ್ಟ, ಕೊಕ್ಕನೂರು, ಹಳ್ಳಿಹಾಳ್‌, ಜಿ.ಬೇವಿನಹಳ್ಳಿ, ಜಗಳಿ ಗ್ರಾಮಗಳಿಗೆ ಭೇಟಿ ನೀಡಿ ಸಾವಿರಾರು ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿ ಚುನಾವಣೆ ಬಗ್ಗೆ ಚರ್ಚಿಸಿದರು. ಎಲ್ಲೆಡೆ ಗಾಯತ್ರಿ ಸಿದ್ದೇಶ್ವರ ಅವರಿಗೆ ಪ್ರೀತಿಪೂರ್ವಕ ಸ್ವಾಗತ ದೊರೆಯಿತು.

ಜೆಡಿಎಸ್‌ ಮುಖಂಡರ ವಿಶ್ವಾಸ ಗಳಿಸಲು ಯತ್ನ
ಪ್ರವಾಸದುದ್ದಕ್ಕೂ ಬಿಜೆಪಿ ಜೊತೆ ಜೆಡಿಎಸ್‌ ಮುಖಂಡರು, ಕಾರ್ಯಕರ್ತರನ್ನು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭೇಟಿಯಾದರು. ಹಿಂಡಸಘಟ್ಟ ಗ್ರಾಮದ ಜೆಡಿಎಸ್‌ ಮುಖಂಡ ಮುರುಗೇಶಪ್ಪ ಅವರ ಮನೆಗೆ ಭೇಟಿ ನೀಡಿ, ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ
ಹೋಗುತ್ತಿದ್ದೇವೆ. ದೇಶದ ಅಭಿವೃದ್ಧಿ, ಮೋದಿ ಅವರ ಆಡಳಿತಕ್ಕೆ ಜೆಡಿಎಸ್‌ ವರಿಷ್ಠರು ಮೆಚ್ಚಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ದಾವಣಗೆರೆಯಲ್ಲೂ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ನಮ್ಮನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕೆಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಜೊತೆ ಸೀಟು ಹೊಂದಾಣಿಕೆ ಮಾಡಿಕೊಂಡಿದೆ. ನಾವು ಒಂದಾಗಿ ಚುನಾವಣೆ ಎದುರಿಸಿದರೆ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.