Lok Sabha Election: ಮೋದಿಯವರ ಜನಪರ ಆಡಳಿತ ಬೆಂಬಲಿಸಿ: ಗಾಯತ್ರಿ ಸಿದ್ದೇಶ್ವರ
ನಗರ ಸೇರಿ ಜಿಲ್ಲೆಯ ವಿವಿಧೆಡೆ ಮತಯಾಚನೆ
Team Udayavani, Mar 24, 2024, 9:10 AM IST
ದಾವಣಗೆರೆ: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ದೇಗುಲ ಭೇಟಿ ಹಾಗೂ ಸಾರ್ವಜನಿಕ ಮತಯಾಚನೆ ಶುರು ಮಾಡಿದ್ದು ಶನಿವಾರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಮತಯಾಚಿಸಿದರು.
ನಗರದ ಕುಂದವಾಡ ಕೆರೆ, ಗಂಗೂಬಾಯಿ ಹಾನಗಲ್ ಉದ್ಯಾನವನ ಸೇರಿದಂತೆ ವಿವಿಧ ಉದ್ಯಾನವನಗಳಿಗೆ ಭೇಟಿ ನೀಡಿದ ಗಾಯತ್ರಿ ಸಿದ್ದೇಶ್ವರ, ವಾಯುವಿಹಾರ ಮಾಡುವರಲ್ಲಿ ಮತಯಾಚಿಸಿದರು. ಕೇಂದ್ರ ಸರ್ಕಾರದ ಸಾಧನೆ, ಕಳೆದ 20 ವರ್ಷಗಳಿಂದ ಸಂಸದರು ಮಾಡಿರುವ ಅಭಿವೃದ್ಧಿ ಕೆಲಸಗಳ ಕುರಿತು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದರು. ಮೋದಿ ನೇತೃತ್ವದಲ್ಲಿ ಭಾರತ ವಿಶ್ವಗುರು ಆಗುತ್ತಿದೆ. ಮೋದಿ ಜೀ ಅವರ ಆಡಳಿತ ಎಲ್ಲರೂ ಮೆಚ್ಚಿಕೊಂಡಿದ್ದು, ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕು ಎನ್ನುವುದು ಜನರ ಸಂಕಲ್ಪ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ತಮ್ಮನ್ನು ಗೆಲ್ಲಿಸಿ ಕಳುಹಿಸುವ
ಮೂಲಕ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕು ಎಂದು ಗಾಯತ್ರಿ ಸಿದ್ದೇಶ್ವರ ಮತದಾರರಲ್ಲಿ ಮನವಿ ಮಾಡಿದರು.
ಪಾಲಿಕೆ ಸದಸ್ಯೆ ಶಿಲ್ಪಾ ಜಯಪ್ರಕಾಶ್, ಮುಖಂಡರಾದ ಗ್ಯಾರಿಹಳ್ಳಿ ಶಿವಕುಮಾರ್, ಪಾಲಿಕ ಸದಸ್ಯೆ ರೇಖಾ ಸುರೇಶ್ ಗಂಡಗಾಳೆ, ಜಯಮ್ಮ, ಸವಿತಾ ರವಿಕುಮಾರ್, ಚಂದ್ರಕಲಾ, ಜ್ಯೋತಿ, ಸುರೇಶ್, ರಘು ಅಂಬರ್‌ಕರ್, ದೊಗ್ಗಳ್ಳಿ ಜಯ್ಯಣ್ಣ, ರಮೇಶ್, ನನ್ನಯ್ಯ ಸಿ. ಮತ್ತಿತರರು ಈ ಸಂದರ್ಭದಲ್ಲಿದ್ದರು.
ನಗರದ ನಿಟ್ಟುವಳ್ಳಿಯ ಶ್ರೀದುರ್ಗಾಂಬಿಕಾ ದೇವಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಮೀಪದಲ್ಲೇ ಇರುವ ಶ್ರೀ ಗಣಪತಿ ದೇವಸ್ಥಾನ, ಗಂಗಾಪರಮೇಶ್ವರಿ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಿಟ್ಟುವಳ್ಳಿಯಲ್ಲಿರುವ ನಾಯಕ ಸಮಾಜದ ಮುಖಂಡ ಹಾಗೂ ಜೆಡಿಎಸ್‌ನ ಚಂದ್ರಶೇಖರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ,
ಅಭಿಮಾನದ ಸನ್ಮಾನ ಸ್ವೀಕರಿಸಿದರು.
ಧೂಡಾ ಮಾಜಿ ಅಧ್ಯಕ್ಷ ಪ್ರಕಾಶ್, ಮುಖಂಡರಾದ ಕೆ.ಬಿ. ಕೊಟ್ರೇಶ್, ಪಾಲಿಕೆ ಸದ್ಯಸರಾದ ಉಮಾ ಪ್ರಕಾಶ್. ಸಂಗನಗೌಡರು, ದುಗೇìಶ್, ರೇಣುಕಾ ಶ್ರೀನಿವಾಸ್, ಬಸವರಾಜ್, ಶಶಿಕುಮಾರ್ ಒಡೆಯರ್, ಕುಂಬಾರ ನಾಗರಾಜ್, ಲಾಯರ್ ಹನುಮಂತಪ್ಪ, ಶಿವಾಜಿ ರಾವ್ ಮುಕದಪ್ಪ ಮತ್ತಿತರರು ಇದ್ದರು.
ಬಳಿಕ ಸಮೀಪದ ದೊಡ್ಡ ಬಾತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ಗಾಯತ್ರಿ ಸಿದ್ದೇಶ್ವರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ
ದರ್ಶನ ಪಡೆದರು. ಈ ವೇಳೆ ದೇವಸ್ಥಾನ ಸಮಿತಿ ಸದಸ್ಯರು ಸನ್ಮಾನಿಸಿ, ಗೌರವಿಸಿದರು. ನಂತರ ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಹಣ್ಣು ನೀಡುವ ಮೂಲಕ ಭಕ್ತಿ ಸಮರ್ಪಿಸಿದರು.
ಇದನ್ನೂ ಓದಿ: Lok Sabha Election: ಗುಜರಾತ್‌ನ 2 ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.