ಇದ್ದಲ್ಲಿಯೇ ಪಡಿತರ ಪಡೆಯಿರಿ: ಜಿಲ್ಲಾಧಿಕಾರಿ
Team Udayavani, Apr 2, 2020, 5:36 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೋವಿಡ್ 19 ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ಡೌನ್ನಿಂದ ಸಿಲುಕಿಕೊಂಡಿರುವ ನೆರೆ ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳ ಸಾರ್ವಜನಿಕರು ತಮ್ಮ ಬಳಿ ಪಡಿತರ ಚೀಟಿ ಇದ್ದಲ್ಲಿ ತಾವಿರುವಲ್ಲಿಯೇ ಪಡಿತರ ಪಡೆಯಬಹುದು ಎಂದು ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.
ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಅಧಿ ಕಾರಿಗಳ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಯಾವುದೇನಿರಾಶ್ರಿತರು ಹಸಿವಿನಿಂದ ಬಳಲಬಾರದು. ವಿವಿಧ ರಾಜ್ಯಗಳ ಕಾರ್ಮಿಕರು, ಅಲೆಮಾರಿ ಜನಾಂಗದವರು ಇರುವಲ್ಲಿಗೇ ತೆರಳಿ, ಸಿದ್ಧ ಆಹಾರ ಅಥವಾ ಪಡಿತರ ಒದಗಿಸುವ ಮೂಲಕ ಅವರಿಗೆ ನೆರವು ನೀಡಬೇಕೆಂದರು.
ಲೈಂಗಿಕ ಕಾರ್ಯಕರ್ತರು, ಮಂಗಳಮುಖೀಯರಿಗೆ ಆಯಾ ತಾಲೂಕಿನ ತಹಶೀಲ್ದಾರರು ಅಗತ್ಯ ಪಡಿತರ ವಿತರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ 156 ಸಫಾಯಿ ಕರ್ಮಚಾರಿ ಕುಟುಂಬಗಳಿದ್ದು, ಅವರಲ್ಲಿ ಕೆಲವರಿಗೆ ಪಡಿತರ ಚೀಟಿ ಇದೆ. ಒಂದು ವೇಳೆ ಇಲ್ಲದವರಿಗೂ ಅಗತ್ಯ ಪಡಿತರ ನೀಡಬೇಕಲ್ಲದೆ, ಬೇಕರಿಗಳು ಕಾರ್ಯಾರಂಭವಾಗಿರುವ ಬಗ್ಗೆ ಖಚಿತಪಡಿಸಿ ಎಂದು ಸೂಚಿಸಿದರು.
ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕೋವಿಡ್ 19 ಪಾಸಿಟಿವ್ ಬಂದಿರುವ ವ್ಯಕ್ತಿ ನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅವರ ತಪಾಸಣೆ ನಡೆಸಿದ ವೈದ್ಯರನ್ನು ಹೋಮ್ ಕ್ವಾರೆಂಟೈನ್ನಲ್ಲಿ ಇಡಲಾಗಿದೆ. ಅವರಲ್ಲಿ ಯಾವುದೇ ಸೋಂಕಿನ ಲಕ್ಷಣ ಕಂಡುಬಂದಿಲ್ಲ. ದಾವಣಗೆರೆ ಮತ್ತು ಹರಿಹರ ಹೊರತುಪಡಿಸಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಮೊಟ್ಟೆಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಕೋವಿಡ್ 19 ವೈರಸ್ ಸೋಂಕು ಹರಡುವಿಕೆ ತಡೆ ಹಿನ್ನೆಲೆಯಲ್ಲಿ ಲಾಕ್ಡೌನ್ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ನೂತನ್ ಕಾಲೇಜು ರಸ್ತೆಯ ಸವಿತಾ ಹೋಟೆಲ್, ವಿದ್ಯಾನಗರದ ಸಿಗಂಧೂರೇಶ್ವರಿ ಹೋಟೆಲ್, ಅಜ್ಜಿ ಹೋಟೆಲ್, ಆಂಜನೇಯ ಬಡಾವಣೆ ಬಿಐಇಟಿ ರಸ್ತೆಯ ಮಮತಾ ಹೋಟೆಲ್, ಹದಡಿ ರಸ್ತೆಯ ಶಿವಸಾಗರ್ ಹೋಟೆಲ್ಗಳನ್ನು ತೆರೆಯಲು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಮಂಟೇಸ್ವಾಮಿ, ಸ್ಮಾರ್ಟ್ಸಿಟಿ ಯೋಜನೆ ಲಿ. ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.