ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಬಾಲಕನ ಬಂಧನ
Team Udayavani, Apr 8, 2018, 10:52 AM IST
ಕೊಪ್ಪ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಾಲಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಸಗೋಡಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
6 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ ಸುಮುಖ (16) ಬಂಧಿತ ಆರೋಪಿ. ವಿದ್ಯಾರ್ಥಿನಿ ಶಾಲೆಯಿಂದ ಕೆಸಗೋಡಿನ ತನಕ ಆಟೋದಲ್ಲಿ ಆಗಮಿಸಿ ನಂತರ ಅರ್ಧ ಕಿಲೋ ಮೀಟರ್ ದೂರದಲ್ಲಿ ಇರುವ ತಮ್ಮ ಮನೆಗೆ ಕಾಡಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ಈ ಸಂಬಂಧ ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಹರಿಹರಪುರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ವಿದ್ಯಾರ್ಥಿನಿಯ ಮೃತ ದೇಹವನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತನಿಖೆ ಭರವಸೆ: ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಾಗೂ ಹರಿಹರಪುರ ಪೊಲೀಸ್ ಠಾಣೆಗೆ ಜಿಲ್ಲಾ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಭೇಟಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂತರ ಠಾಣೆಯ ಮುಂದೆ ಜಮಾಯಿಸಿದ್ದ ಜನರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈಗಾಗಲೇ ಓರ್ವನನ್ನು ಬಂಧಿಸಲಾಗಿದೆ. ಆತನ ಡಿ.ಎನ್.ಎಯನ್ನ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ. ತನಿಖೆಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಆರೋಪಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.