ಬೀಡಿ ಕಟ್ಟೋರಿಗೆ ಯೋಗ್ಯ ಕೂಲಿ ಕೊಡಿ: ದೇವರಾಜ್
Team Udayavani, Jan 17, 2017, 12:41 PM IST
ದಾವಣಗೆರೆ: ಬೀಡಿ ಕಾರ್ಮಿಕರಿಗೆ ಗೌರವಯುತ ಜೀವನ ನಡೆಸಲು ಅಗತ್ಯ ಇರುವಷ್ಟು ಕೂಲಿ ಕೊಡುವ ಜೊತೆಗೆ, ಅವರನ್ನು ಗುರುತಿಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ದಕ್ಷಿಣ ಭಾರತ ಟ್ರೇಡ್ ಯೂನಿಯನ್ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿನ್ ದೇವರಾಜ್ ಒತ್ತಾಯಿಸಿದ್ದಾರೆ.
ರೋಟರಿ ಬಾಲ ಭವನದಲ್ಲಿ ಸೋಮವಾರ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಹಮ್ಮಿಕೊಂಡ ಬೀಡಿ ಕಾರ್ಮಿಕರ ಜಿಲ್ಲಾ ಸಮಾವೇಶ ಉದ್ಘಾಟಿಸಿ, ಮಾತನಾಡಿದ ಅವರು, ಬೀಡಿ ಕಾರ್ಮಿಕರು ಇಂದು ಬರುವ ಕೂಲಿ ಆಧರಿಸಿ, ಅವಶ್ಯಕತೆ ನಿಭಾಯಿಸಿಕೊಳ್ಳುತ್ತಿದ್ದಾರೆ. ಯೋಗ್ಯ ಜೀವನ ಮಾಡುವುದು ಅವರಿಂದ ಸಾಧ್ಯವಾಗುತ್ತಿಲ್ಲ ಎಂದರು.
ನಮ್ಮ ದೇಶದ ಒಟ್ಟು ಶೇ.65ರಷ್ಟು ವರಮಾನ ಬರುತ್ತಿರುವುದು ಕೂಲಿ ಕಾರ್ಮಿಕರಿಂದಲೇ ಹೊರತು ಕಾರ್ಪೋರೇಟ್ ಕಂಪನಿಗಳಿಂದಲ್ಲ. ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕಿದೆ. ಆದರೆ, ಇಂದು ಸರ್ಕಾರ ಕೂಲಿ ಕಾರ್ಮಿಕರನ್ನು ಬಿಟ್ಟು ಕಾರ್ಪೋರೇಟ್ ವಲಯಕ್ಕೆ ಹೆಚ್ಚು ಒತ್ತುಕೊಡುತ್ತಿದೆ.
ದುಡಿಮೆ, ಶ್ರಮ ಇಲ್ಲದೆ ಸದೃಢ ನಿರ್ಮಾಣ ಸಾಧ್ಯವಿಲ್ಲ. ಹಾಗಾಗಿ ಸರ್ಕಾರ ಶ್ರಮಿಕ ವರ್ಗಕ್ಕೆ ಹೆಚ್ಚಿನ ಒತ್ತು ಕೊಡಬೇಕಿದೆ ಎಂದು ಅವರು ತಿಳಿಸಿದರು. ಬೀಡಿ ಕಾರ್ಮಿಕರು ಸಮಾಜದ ಸ್ವಾಸ್ಥÂ ಕೆಡಿಸಲು ಬೀಡಿ ಕಟ್ಟುತ್ತಿಲ್ಲ. ಬದಲಿಗೆ ನಿತ್ಯ ಜೀವನ ನಡೆಸಲು ಬೀಡಿ ಕಟ್ಟುವ ಕಾರ್ಯ ಮಾಡುತ್ತಿದ್ದಾರೆ.
ಅವರಿಗೆ ಪರ್ಯಾಯ ಉದ್ಯೋಗ ಕೊಟ್ಟರೆ ಅದನ್ನೇ ಮಾಡಿಕೊಂಡು ಜೀವನ ಸಾಗಿಸಬಲ್ಲರು. ಸದ್ಯದ ಸ್ಥಿತಿಯಲ್ಲಿ ಬೀಡಿ ಕಾರ್ಮಿಕರ ಜತೆಗೆ ಮನೆಯವರ ಆರೋಗ್ಯ ಹದಗೆಟ್ಟಿದೆ. ಮೇಲಾಗಿ ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಬೀಡಿ ಕಂಪನಿಯ ಗುತ್ತಿಗೆದಾರರು ಕಾನೂನುಗಳನ್ನು ಪದೇ ಪದೇ ಉಲ್ಲಂಘಿಸುತ್ತಿದ್ದಾರೆ.
ಕಾರ್ಮಿಕರಿಗೆ ಕನಿಷ್ಠ ಸವಲತ್ತು ಕೊಡುತ್ತಿಲ್ಲ. ಕೊಡುವ ಕೂಲಿಯಲ್ಲಿ ಒಂದಿಷ್ಟು ತಮ್ಮ ಪಾಲು ಎಂಬುದಾಗಿ ತೆಗೆದಿಟ್ಟುಕೊಳ್ಳುತ್ತಾರೆ. ಇಷ್ಟೆಲ್ಲಾ ಕಾನೂನು ಉಲ್ಲಂಘಿಸಿದರೂ ಸಹ ಸರ್ಕಾರ ಅವರ ಮೇಲೆ ಯಾವುದೇ ಕ್ರಮ ವಹಿಸುವುದಿಲ್ಲ. ಬೇರೆಯವರು ಒಂದೆರಡು ಬಾರಿ ಕಾನೂನು ಉಲ್ಲಂಘಿಸಿದರೆ ತಕ್ಷಣ ಕ್ರಮಕ್ಕೆ ಮುಂದಾಗುವ ಸರ್ಕಾರ, ಗುತ್ತಿಗೆದಾರರ ವಿಷಯದಲ್ಲಿ ರಿಯಾಯಿತಿ ಏಕೆ ಎಂದು ಅವರು ಪ್ರಶ್ನಿಸಿದರು.
ಸಂವಿಧಾನದ ಪ್ರಕಾರ ಎಲ್ಲರಿಗೂ ಬದುಕುವ ಹಕ್ಕಿದೆ. ಇಲ್ಲಿ ಯಾರೂ ಸಹ ಮೇಲು-ಕೀಳಲ್ಲ. ಕೂಲಿ ಕಾರ್ಮಿಕರ ಶ್ರಮದಲ್ಲಿ ಕೋಟ್ಯಂತರ ರೂಪಾಯಿ ದುಡಿದು, ಐಶರಾಮಿ ಜೀವನ ನಡೆಸುವವರು ತಮ್ಮ ಒಳಿತಿಗಾಗಿ ದುಡಿದ ಮಂದಿಗೆ ಒಂದಿಷ್ಟು ಸವಲತ್ತು ಕೊಡಬೇಕು. ಬಂದ ಲಾಭದಲ್ಲಿ ಲಾಭಾಂಶ ತೆಗೆದಿಟ್ಟು ಅವರ ಜೀವನ ಸುಧಾರಿಸಲು ಕ್ರಮ ವಹಿಸಬೇಕು ಎಂದುಅವರು ಆಗ್ರಹಿಸಿದರು.
ಮಾನವ ಹಕ್ಕುಗಳ ಕಾರ್ಯಕರ್ತೆ ಉಷಾ ರವಿಕುಮಾರ್ ಮಾತನಾಡಿ, ಬೀಡಿ ಕಾರ್ಮಿಕರು ಅತಿ ಕಡಿಮೆ ಕೂಲಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ವಿಷಯ ತಿಳಿದು ಕಳೆದ 4 ವರ್ಷದಿಂದ ಸಂಘಟಿತ ಹೋರಾಟ ನಡೆಸಲಾಗಿದೆ. ಇದೀಗ ಒಂದೊಂದೇ ಸಮಸ್ಯೆಗೆ ಪರಿಹಾರ ಸಹ ಕಂಡುಕೊಳ್ಳಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟದ ಮೂಲಕ ಸವಲತ್ತು ಪಡೆಯಬೇಕಿದೆ ಎಂದರು. ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನ ಸದಸ್ಯೆ ಹಸೀನಾಬಾನು ಅಧ್ಯಕ್ಷತೆ ವಹಿಸಿದ್ದರು. ಎಂ. ಕರಿಬಸಪ್ಪ, ಜಬೀನಾ ಖಾನಂ ವೇದಿಕೆಯಲ್ಲಿದ್ದರು. 1000 ಬೀಡಿಗೆ ಕನಿಷ್ಠ 300 ರೂ. ಕೂಲಿ ಕೊಡುವ ಜತೆಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಆಗ್ರಹಿಸಲು ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.