ಗುಡಿಸಲು ಜಾಗದ ಹಕ್ಕುಪತ್ರ ನೀಡಿ
Team Udayavani, May 16, 2017, 12:54 PM IST
ದಾವಣಗೆರೆ: ಆನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿನ ಗುಡಿಸಲು ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಬಣ) ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತ ಭವನದ ಮುಂದೆ ಸಾಂಕೇತಿಕ ಧರಣಿ ನಡೆಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆಗೂ ಮುನ್ನ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಗ್ಗೆರೆ ರಂಗಪ್ಪ, ಗ್ರಾಮದ ಆಸ್ಪತ್ರೆ ಆವರಣದಲ್ಲಿ ದಲಿತರು ಗುಡಿಸಲು ಕಟ್ಟಿಕೊಂಡು ಅನೇಕ ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಅವರಿಗೆ ಸ್ವಂತ ನಿವೇಶನ, ಮನೆ ಇಲ್ಲ. ಸ್ವಂತ ಸೂರು ಕಲ್ಪಿಸಲು ಕ್ರಮ ವಹಿಸಬೇಕು ಎಂದು ಕೋರಿದರು.
ಬೇರೆ ಕಡೆ ಜಾಗ ಕೊಡಲು ಇದೀಗ ಎಲ್ಲೂ ಸಹ ಸರ್ಕಾರಿ ಜಮೀನು ಇಲ್ಲ. ಖಾಸಗಿ ಜಮೀನು ಖರೀದಿಸಿ, ಮನೆ ಕಟ್ಟಿಕೊಡಲು ಸದ್ಯ ಇರುವ ಯೋಜನೆಗಳಡಿ ಕಷ್ಟ ಸಾಧ್ಯ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾದ ಜಮೀನು ಇಟ್ಟುಕೊಂಡು ಉಳಿದ ಜಾಗದಲ್ಲಿ ದಲಿತರಿಗೆ ಸೂರು ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.
ಸಮಿತಿಯ ಕಬ್ಬಳ್ಳಿ ಮೈಲಪ್ಪ, ಮೆಳ್ಳೇಕಟ್ಟೆ ಪರುಶುರಾಮ, ಕೊಡಗನೂರು ಲಕ್ಷ್ಮಣ, ಆನಗೋಡು ಪ್ರಶಾಂತ್, ಅಳಗವಾಡಿ ನಿಂಗರಾಜ, ಗುಮ್ಮನೂರು ರಾಮಚಂದ್ರಪ್ಪ, ರೇವಣಸಿದ್ಧಪ್ಪ ಧರಣಿ ನೇತೃತ್ವ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಮನವಿ ಸೀಕರಿಸಿ, ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.