ಮಾಸ್ಕ್ -ಸ್ಯಾನಿಟೈಸರ್‌ ಕೊರತೆ ವರದಿ ನೀಡಿ

Team Udayavani, Mar 27, 2020, 4:43 PM IST

dg-tdy-1

ದಾವಣಗೆರೆ: ಡ್ರಗ್‌ ಕಂಟ್ರೋಲರ್‌ ತಮ್ಮ ತಂಡದೊಂದಿಗೆ ನಗರದ ಹಾಗೂ ತಾಲೂಕುಗಳಲ್ಲಿರುವ ಮೆಡಿಕಲ್‌ ಶಾಪ್‌ಗ್ಳಿಗೆ ತೆರಳಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ದಾಸ್ತಾನು ಪರಿಶೀಲಿಸಿ, ತಾತ್ಕಾಲಿಕ ಕೊರತೆ ಕಾರಣದ ಸಂಬಂಧ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದ್ದಾರೆ.

ಕೋವಿಡ್ 19 ಸೋಂಕು ನಿಯಂತ್ರಣ ಕುರಿತು ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಸಿಸ್ಟೆಂಟ್‌ ಡ್ರಗ್‌ ಕಂಟ್ರೋಲರ್‌ ತಮ್ಮ ಅಧಿಧೀನದ ಸಿಬ್ಬಂದಿ ಜೊತೆ ನಗರ ಮತ್ತು ತಾಲ್ಲೂಕುಗಳ ವ್ಯಾಪ್ತಿಯ ಮೆಡಿಕಲ್‌ ಶಾಪ್‌ಗ್ಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್‌ನ ತಾತ್ಕಾಲಿಕ ಕೊರತೆ ನೀಗಬೇಕು ಎಂದರು. ಇತರೆ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ವಾಹನಗಳ ತಪಾಸಣೆಗಾಗಿ ಜಿಲ್ಲೆಯಲ್ಲಿ ಒಟ್ಟು 10 ಚೆಕ್‌ಪೋಸ್ಟ್‌ ತೆರೆದು

ಪೊಲೀಸ್‌, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ಬಾಡಾಕ್ರಾಸ್‌ ದಾವಣಗೆರೆ ನಗರ ಸರಹದ್ದು. ಶಾಮನೂರು ಬಳಿ ದಾವಣಗೆರೆ ನಗರ ಸರಹದ್ದು. ಲಕ್ಕಮುತ್ತೇನಹಳ್ಳಿ ( ದಾವಣಗೆರೆ ತಾಲೂಕು), ಎಚ್‌.ಬಸಾಪುರ (ದಾವಣಗೆರೆ ತಾಲೂಕು), ಕುಮಾರಪಟ್ಟಣಂ ಹಲಸಬಾಳು ಹತ್ತಿರ (ಹರಿಹರ ತಾಲೂಕು), ಕುರುಬರಹಳ್ಳಿ (ಹರಿಹರ ತಾಲೂಕು). ಚೀಲೂರು (ಟಿ.ಜೆ.ಹಳ್ಳಿ ಕ್ರಾಸ್‌ -ಹೊನ್ನಾಳಿ ತಾಲೂಕು), ಸವಳಂಗ ವೃತ್ತ ( ಹೊನ್ನಾಳಿ ತಾಲೂಕು), ಮಾದಾಪುರ (ಚನ್ನಗಿರಿತಾಲೂಕು), ದೊಣ್ಣೆಹಳ್ಳಿ (ಜಗಳೂರು ತಾಲೂಕು) ಈ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾತನಾಡಿ, ಹರಿಹರದಲ್ಲಿ 20, ಜಗಳೂರಿನಲ್ಲಿ 14 ಮತ್ತು ಹೊನ್ನಾಳಿಯಲ್ಲಿ 3 ಸ್ಯಾನಿಟೈಸರ್‌ಯುಕ್ತ ಕೈ ತೊಳೆಯುವ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು. ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ದಾವಣಗೆರೆ ನಗರದಲ್ಲಿ 2 ಕೈತೊಳೆಯುವ ಕೇಂದ್ರ ಆರಂಭಿಸಿದ್ದು ಇನ್ನು ಉಳಿದಂತೆ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಈ ಎರಡು ಕಡೆ ಕ್ಯಾಂಟಿನ್‌ ಅವಶ್ಯಕತೆ ಇರುವುದರಿಂದ ಇಂದಿರಾ ಕ್ಯಾಂಟಿನ್‌ ಸೇವೆಗಾಗಿ ರೋಗಿಗಳ ಸಂಬಂಧಿ ಕರಿಗೆ ಟೋಕನ್‌ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಮಾರ್ಚ್‌ 31ರವರೆಗೆ ಎಲ್ಲ ಮದ್ಯದಂಗಡಿಗಳನ್ನು ಬಂದ್‌ ಮಾಡಲಾಗಿದೆ. ಅಗತ್ಯ ವಸ್ತುಗಳನ್ನು ಪೂರೈಸುವ ಕಾರ್ಗಿಲ್‌ ಅಂತಹ ಫ್ಯಾಕ್ಟರಿಗಳು, ಸಾಬೂನು ಕಾರ್ಖಾನೆ, ಬೇಕರಿಗಳು, ಬೇಕರಿ ಉತ್ಪನ್ನಗಳಿಗೆ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ಆಹಾರ, ದಿನಸಿ ಅಂಗಡಿಗಳು, ಹಾಲು, ತರಕಾರಿಗಳು, ದಿನಬಳಕೆ ವಸ್ತುಗಳು, ಹಣ್ಣು, ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳು ಮತ್ತು ಅಂಗಡಿಗಳು, ಪೆಟ್ರೋಲ್‌ ಬಂಕುಗಳು, ಗ್ಯಾಸ್‌, ಎಲ್‌ಪಿಜಿ, ತೈಲ ಏಜೆನ್ಸಿಗಳು ಮತ್ತು ಅದಕ್ಕೆ ಸಂಬಂಧಿಸಿದ ಉಗ್ರಾಣಗಳು ಹಾಗೂ ಹಿಟ್ಟಿನ ಗಿರಣಿಗಳ ಸೇವೆಗೆ ನಿಷೇಧ ಇರುವುದಿಲ್ಲ ಎಂದರು.

ಎಟಿಎಂಗಳಲ್ಲಿ ಸ್ಯಾನಿಟೈಸರ್‌ ಇಡುವುದು ಕಡ್ಡಾಯವಾಗಿದ್ದು, ನಾನೇ ಸ್ವತಃ ಪರಿಶೀಲಿಸಿದಾಗ ಅನೇಕ ಕಡೆಗಳಲ್ಲಿ ಸ್ಯಾನಿಟೈಸರ್‌ ಇರಿಸದಿರುವುದು ಕಂಡು ಬಂದಿದೆ. ಸಾನಿಟೈಸರ್‌ ಇಡದಿದ್ದಲ್ಲಿ ನೋಟಿಸ್‌ ನೀಡಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಮಾತನಾಡಿ, ಎಲ್ಲ ಅಧಿಕಾರಿಗಳು, ಪಿಡಿಓಗಳು, ಅಂಗನವಾಡಿ ಕಾರ್ಯಕರ್ತೆಯರು, ಅವಲೋಕನಾ ಅವಧಿಯಲ್ಲಿರುವ ಯಾವುದೇ ವ್ಯಕ್ತಿ ಭೇಟಿ ಮಾಡುವ ಸಮಯದಲ್ಲಿ ಅಗತ್ಯ ಸುರಕ್ಷಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.