ಜಿಎಂಐಟಿಗೆ ಚಿನ್ನದ ಪ್ರಾಶಸ್ತ್ಯ ಗೌರವ
Team Udayavani, Jan 14, 2021, 3:21 PM IST
ದಾವಣಗೆರೆ: ಎ.ಐ.ಸಿ.ಟಿ.ಇ ಹಾಗೂ ಸಿ.ಐ.ಐ ಸಂಸ್ಥೆಗಳು ನಡೆಸಿದ ಜಂಟಿ ಸಮೀಕ್ಷೆಯಲ್ಲಿ ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯಕ್ಕೆ ಚಿನ್ನದ ಪ್ರಾಶಸ್ತ್ಯ ಗೌರವ ದೊರೆತಿದೆ. ಕೈಗಾರಿಕೋದ್ಯಮ ಸಂಪರ್ಕದೊಂದಿಗೆ ಬೆಳೆಯುತ್ತಿರುವ ತಾಂತ್ರಿಕ ಮಹಾವಿದ್ಯಾಲಯಗಳ 2020ನೇ ಸಾಲಿನ ಸರ್ವೆಯಲ್ಲಿ ಜಿಎಂಐಟಿ ಕಾಲೇಜಿನ ಸತತ ಸಾಧನೆಗಳನ್ನು ಪರಿಗಣಿಸಿ ಚಿನ್ನದ ಪ್ರಾಶಸ್ತ್ಯಕ್ಕೆ ಆಯ್ಕೆ ಮಾಡಲಾಗಿದೆ.
ಜಿಎಂಐಟಿ ಈಗಾಗಲೇ 75ಕ್ಕೂ ಹೆಚ್ಚು ಕೈಗಾರಿಕೋದ್ಯಮಗಳೊಂದಿಗೆ ಸಹಯೋಗ ಹೊಂದಿದ್ದು, ಹಲವಾರು ಸಂಸ್ಥೆಗಳೊಂದಿಗೆ ಇಂಟರ್ನ್ಶಿಪ್, ಕನ್ಸಲ್ಟೆನ್ಸಿ, ಆರ್ ಅಂಡ್ ಡಿ ಚಟುವಟಿಗಳೊಂದಿಗೆ ತಾಂತ್ರಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ವಿದ್ಯಾರ್ಥಿಗಳ ಗುಣಮಟ್ಟ ಹಾಗೂ ಜ್ಞಾನವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ. 6 ವರ್ಷ ಸತತವಾಗಿ ಶೇ. 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ ವ್ಯೂನಲ್ಲಿ ಉದ್ಯೋಗ ದೊರೆತಿದೆ.
ಇದನ್ನೂ ಓದಿ:ಭಂಡಾರದೊಡೆಯನ ಜಾತ್ರೆಗೆ ಕೊರೊನಾ ವಿಘ್ನ
ಕೆಲವರು ಉದ್ಯಮಶೀಲರಾಗಿ ಹಾಗೂ ಹೆಚ್ಚಿನ ವಿದ್ಯಾಭ್ಯಾಸ ವ್ಯಾಸಂಗ ಮಾಡುತ್ತಿದ್ದಾರೆ. ಜಿಎಂಐಟಿ ಕಾಲೇಜಿಗೆ ಲಭಿಸಿರುವ ಚಿನ್ನದ ಪ್ರಾಶಸ್ತ್ಯ ಹೆಮ್ಮೆಯ ವಿಷಯ ಎಂದು ಸಂಸ್ಥೆಯ ಚೇರ್ಮನ್ ಜಿ.ಎಂ. ಲಿಂಗರಾಜು, ಆಡಳಿತಾಧಿ ಕಾರಿ ಸುಭಾಷ್‌ಚಂದ,ಪ್ರಾಂಶುಪಾಲ ಡಾ| ವೈ. ವಿಜಯಕುಮಾರ್ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸಮಸ್ತ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.