Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ
ಗ್ಯಾಸ್ ಕಟರ್‌ನಿಂದ ಲಾಕರ್ ಮುರಿದು 17 ಕೆಜಿ ಚಿನ್ನ ಎಗರಿಸಿದ ಕಳ್ಳರು
Team Udayavani, Oct 29, 2024, 5:18 PM IST
ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದ ಎಸ್‌ಬಿಐ ಬ್ಯಾಂಕ್ (SBI Bank) ದರೋಡೆ ಪ್ರಕರಣದಲ್ಲಿ ಬರೋಬರಿ 17.705 ಕೆಜಿ ಚಿನ್ನಾಭರಣ ಕಳ್ಳತನವಾಗಿದ್ದು, ಇದರ ಮೌಲ್ಯ 12.95 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ವಾರಾಂತ್ಯದ (ಶನಿವಾರ-ಭಾನುವಾರ) ಸರಣಿ ರಜೆ ನೋಡಿಕೊಂಡು ಪಟ್ಟಣದ ನೆಹರು ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಗೆ ಕನ್ನ ಹಾಕಿದ ದರೋಡೆಕೋರರು, ಕಿಟಕಿ ಸರಳು ಮುರಿದು ಒಳನುಗ್ಗಿ, ಗ್ಯಾಸ್ ಕಟರ್‌ನಿಂದ ಲಾಕರ್ ಕೊರೆದು 509 ಪುಟ್ಟ ಪುಟ್ಟ ಬ್ಯಾಗ್‌ಗಳಲ್ಲಿ ಕಟ್ಟಿಟ್ಟಿದ್ದ ಕೋಟ್ಯಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಬ್ಯಾಂಕ್‌ನಲ್ಲಿ ಇನ್ನೂ ಎರಡು ಲಾಕರ್ ಗಳಲ್ಲಿ 30 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣವಿತ್ತು. ಆದರೆ, ಸಮಯ ಮೀರಿದ್ದರಿಂದಲೋ, ಗ್ಯಾಸ್ ಕಟರ್ ನ ಗ್ಯಾಸ್ ಖಾಲಿಯಾಗಿದ್ದರಿಂದಲೋ ಕಳ್ಳತರು ಅವುಗಳನ್ನು ಹಾಗೆಯೇ ಬಿಟ್ಟು ಓಡಿ ಹೋಗಿದ್ದಾರೆ. ದರೋಡೆ ಸಂದರ್ಭದಲ್ಲಿ ಲಾಕರ್ ಎಚ್ಚರಿಕೆ ಧ್ವನಿ ಸಂಪರ್ಕ ಕಟ್ ಮಾಡಿದ್ದಾರೆ. ಸಿಸಿಟಿವಿ ಡಿವಿಆರ್ ಸಹಿತ ಹೊತ್ತೊಯ್ದಿದ್ದಾರೆ. ಸಾಕ್ಷ್ಯ ಸುಳಿವು ಸಿಗದಂತೆ ಕಚೇರಿ ತುಂಬೆಲ್ಲ ಖಾರದ ಪುಡಿ ಎರಚಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ.
ಸೋಮವಾರ (ಅ.28) ಬೆಳಿಗ್ಗೆ ಬ್ಯಾಂಕಿನ ಬಾಗಿಲು ತೆಗೆದಾಗ ಬ್ಯಾಂಕ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದ್ದು ಮಂಗಳವಾರ ಶಾಖಾ ವ್ಯವಸ್ಥಾಪಕ ಸುನಿಲಕುಮಾರ್ ಯಾದವ್ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬ್ಯಾಂಕ್‌ನಲ್ಲಿ ಚಿನ್ನದ ಸಾಲಕ್ಕೆ ಸಂಬಂಧಿಸಿ 932ಕ್ಕೂ ಅಧಿಕ ಖಾತೆಗಳಿದ್ದು, ಪ್ರತಿಯೊಂದು ಖಾತೆಯ ಪರಿಶೀಲನೆ ಮಾಡಿ, ಕಳ್ಳತನವಾದ ಮಾಹಿತಿ ಸಂಗ್ರಹಿಸಬೇಕಾಗಿರುವುದರಿಂದ ದೂರು ಕೊಡಲು ತಡವಾಗಿದೆ ಎಂದು ಸಹ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಭದ್ರತಾ ಲೋಪ
ಬ್ಯಾಂಕ್‌ಗೆ ರಾತ್ರಿ ಕಾವಲುಗಾರರನ್ನು ನೇಮಿಸಿಲ್ಲ. ಹಳೆಯ ಕಾಲದ ಸೈರನ್ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಬ್ಯಾಂಕ್ ಭದ್ರತಾ ಲೋಪದಿಂದ ಈ ಘಟನೆ ನಡೆದಿದೆ. ಪ್ರಕರಣದ ತನಿಖೆಗೆ ಐವರು ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ. 10 ಜನ ಪಿಎಸ್‌ಐಗಳು ಸೇರಿ ಹಲವು ಸಿಬ್ಬಂದಿಯನ್ನು ತನಿಖೆಗೆ ನಿಯೋಜಿಸಲಾಗಿದ್ದು, ತನಿಖೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.