ಉತ್ತಮ ಮಳೆ: ಸಮೃದ್ಧ ಬೆಳೆ ನಿರೀಕ್ಷೆ


Team Udayavani, Aug 31, 2020, 7:08 PM IST

ಉತ್ತಮ ಮಳೆ: ಸಮೃದ್ಧ ಬೆಳೆ ನಿರೀಕ್ಷೆ

ಸಾಂದರ್ಭಿಕ ಚಿತ್ರ

ಹೊನ್ನಾಳಿ: ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಆಗಿರುವುದರಿಂದ ಬಿತ್ತಿದ ಬೆಳೆ ಸಮೃದ್ಧವಾಗಿ ಬೆಳೆದಿದೆ. ಈಗ ಕಾಳು ಕಟ್ಟುವ ಸಮಯವಾಗಿದ್ದು, ರೈತರಲ್ಲಿ ಹರ್ಷ ಮೂಡಿದೆ.

ತಾಲೂಕಿನ ಬಹುತೇಕ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಇನ್ನುಳಿದಂತೆ ಹತ್ತಿ, ಶೇಂಗಾ, ರಾಗಿ, ನವಣೆ, ತೊಗರಿ, ಹೆಸರು, ಅಲಸಂದೆ, ಸೂರ್ಯಕಾಂತಿ ಮತ್ತಿತರ ಬೆಳೆಗಳನ್ನೂ ಬಿತ್ತನೆ ಮಾಡಿದ್ದಾರೆ. ಹಿರೇಗೋಣಿಗೆರೆ, ಕೋಣನತಲೆ, ಬೇಲಿ ಮಲ್ಲೂರು, ಕೋಟೆಮಲ್ಲೂರು ಮತ್ತಿತರ ಗ್ರಾಮಗಳ ಹೊಲಗಳಲ್ಲಿ ತಡವಾಗಿ ಮೆಕ್ಕೆಜೋಳದ ಬೆಳೆ ಬಿತ್ತನೆ ಮಾಡಿರುವ ಕಾರಣಕ್ಕೆ ಫಾಲ್‌ ಆರ್ಮಿ ವರ್ಮ್ ಎಂಬ ಕೀಟದ ಬಾಧೆ ಕಂಡುಬಂದಿದೆ. ಕೃಷಿ ಇಲಾಖೆ ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ಕೀಟ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ತುಂಗಾ ಎಡ ದಂಡೆ ನಾಲೆ ಮತ್ತು ಭದ್ರಾ ನಾಲೆಗಳ ನೀರನ್ನು ಅವಲಂಬಿಸಿ ತಾಲೂಕಿನಲ್ಲಿ ಅನೇಕ ರೈತರು ಭತ್ತ ನಾಟಿ ಮಾಡಿದ್ದಾರೆ.

ಅಲ್ಲದೆ ಈ ಬಾರಿ ತುಂಗಾ ಎಡದಂಡೆ ನಾಲೆಯ ಆಧುನೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ನಾಲೆಯ ಕೊನೆಯ ಭಾಗದ ಗದ್ದೆಗಳಿಗೂ ನೀರು ಸರಾಗವಾಗಿ ಹರಿಯುತ್ತಿದೆ. ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ: ಉತ್ತಮ ಮುಂಗಾರು ಮಳೆಯ ಕಾರಣ ಭದ್ರಾ ಜಲಾಶಯ ಭರ್ತಿಯಾಗಲು ಮೂರು ಅಡಿ ಮಾತ್ರ ನೀರು ಬರಬೇಕಿದೆ. ಇದರಿಂದಾಗಿ ಈ ಜಲಾಶಯವನ್ನು ನಂಬಿರುವ ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಕಾಡಾ ಈಗಾಗಲೇ ಭದ್ರಾ ನಾಲೆಗಳಿಗೆ ನೀರು ಹರಿಸಲು ಪ್ರಾರಂಭಿಸಿದ್ದು, ಭದ್ರಾ ನಾಲೆ ವ್ಯಾಪ್ತಿಯ ರೈತರು ಕೂಡ ಭತ್ತ ನಾಟಿಯನ್ನು ಪೂರೈಸಿದ್ದಾರೆ. ಭದ್ರಾ ಜಲಾಶಯದಲ್ಲಿ 183 ಅಡಿಗಳಷ್ಟು ನೀರು ಸಂಗ್ರಹವಾಗಿ ರುವುದ ರಿಂದ ಈ ಬಾರಿಯ ಬೇಸಿಗೆ ಭತ್ತದ ಬೆಳೆಗೂ ತೊಂದರೆಯಿಲ್ಲ. ಅಂತೂ ಈ ಬಾರಿ ಮುಂ ಗಾರು ಮಳೆ ರೈತರ ಕೈ ಹಿಡಿದಿದ್ದು, ಮುಂದಿನ ದಿನಗಳಲ್ಲೂ ಇದೇ ರೀತಿ ಸಕಾಲಕ್ಕೆ ಮಳೆ ಸುರಿಯಲಿ ಎಂಬುದು ಅನ್ನದಾತರ ಆಶಯ.

ಬೆಳೆ ಬಿತ್ತನೆ ಮಾಡಿರುವ ಜಮೀನುಗಳಲ್ಲಿ ಫಾಲ್‌ ಆರ್ಮಿ ವರ್ಮ್ ಎಂಬ ಕೀಟದ ಬಾಧೆ ಕಂಡು ಬಂದಿದೆ. ರೈತರು ನಿರ್ಲಕ್ಷé ಮಾಡದೆ ತಕ್ಷಣ ಸಮೀಪದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಕೀಟ ಬಾಧೆ ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು. ಸಿ.ಟಿ. ಸುರೇಶ್‌, ಸಹಾಯಕ ಕೃಷಿ ನಿರ್ದೇಶಕ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.