ಎತ್ತುಗಳ ಜಾತ್ರೆಗೆ ರೈತರಿಂದ ಉತ್ತಮ ಸ್ಪಂದನೆ
Team Udayavani, Apr 5, 2022, 2:44 PM IST
ಜಗಳೂರು: ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡದಗುಡ್ಡದಲ್ಲಿ ನಡೆದ ಎತ್ತುಗಳ ಜಾತ್ರೆಯಲ್ಲಿ ಎತ್ತುಗಳ ಮಾರಾಟಕ್ಕೆ ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಬೆಲೆ ಅಧಿಕವಾದರೂ ರೈತರು ವ್ಯವಸಾಯಕ್ಕೆ ಸೂಕ್ತವಾದ ಎತ್ತುಗಳನ್ನು ಖರೀದಿಸಿದರು. ಕೊಡದಗುಡ್ಡ ಗ್ರಾಮದಲ್ಲಿ ವೀರಭದ್ರಸ್ವಾಮಿಯ ರಥೋತ್ಸವದ ನಂತರ ಎತ್ತುಗಳ ಜಾತ್ರೆ ನಡೆಯುವುದು ವಾಡಿಕೆ. ಈ ಜಾತ್ರೆಗೆ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿಜಯನಗರ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಂದ ವ್ಯಾಪಾರಸ್ಥರು ಆಗಮಿಸಿ ವ್ಯಾಪಾರ ವಹಿವಾಟು ಮಾಡಿದರು.
ಕೊರೊನಾ ಹಿನ್ನಲೆಯಲ್ಲಿ ಕಳೆದೆರೆಡು ವರ್ಷಗಳಿಂದ ಎತ್ತುಗಳ ಜಾತ್ರೆಯನ್ನು ರದ್ದು ಮಾಡಲಾಗಿತ್ತು. ಈ ಬಾರಿ ಕೋವಿಡ್ ನಿಯಮಗಳು ಸಡಿಲಗೊಂಡ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಸಾವಿರಾರು ಜೋಡಿ ಎತ್ತುಗಳು ಮಾರಾಟವಾದವು. ಒಂದು ಜೊತೆ ಎತ್ತುಗಳಿಗೆ 60 ಸಾವಿರದಿಂದ 1.80 ಲಕ್ಷ ರೂ.ವರೆಗೆ ದರ ನಿಗದಿಯಾಗಿತ್ತು.
ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವ್ಯವಸಾಯಕ್ಕೆ ಎತ್ತುಗಳೇ ಸೂಕ್ತ. ಬಿತ್ತನೆ ಮಾಡುವಾಗ ಮತ್ತು ಕಟಾವು ಮಾಡಿದ ಬೆಳೆಯನ್ನು ತುಳಿಸುವಾಗ ಎತ್ತುಗಳು ಬೇಕೆ ಬೇಕು. ಅಲ್ಲದೆ ಮನೆಯ ಮುಂದೆ ಎತ್ತುಗಳಿದ್ದರೆ ಅದರ ಸೊಗಸೇ ಬೇರೆ ಎನ್ನುತ್ತಾರೆ ರೈತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.