ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಬದ್ಧ: ರೇಣು
Team Udayavani, Mar 23, 2021, 5:35 PM IST
ಹೊನ್ನಾಳಿ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ಶಾಲಾ- ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಹೊಳೆಹರಳಹಳ್ಳಿ ಗ್ರಾಮದಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಹಾಗೂ ಸರ್ಕಾರಿ ಉರ್ದು ಕಿರಿಯ ಶಾಲೆಗೆ ನಿರ್ಮಿಸಿರುವ ನೂತನ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವುದು ಸಾಮಾನ್ಯ. ಶಿಕ್ಷಕರು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಬರುವಂತೆ ಪ್ರೇರೇಪಿಸಬೇಕು. ಒಂದು ಕಾಲದಲ್ಲಿ “ದುಡ್ಡೇ ದೊಡ್ಡಪ್ಪ’ಎನ್ನುತ್ತಿದ್ದರು. ಈಗ ಕಾಲ ಬದಲಾಗಿದ್ದು “ದುಡ್ಡು ದೊಡ್ಡಪ್ಪ ವಿದ್ಯೆ ಅದರಪ್ಪ’ ಎನ್ನಲಾಗುತ್ತಿದೆ. ಹಾಗಾಗಿ ಶಿಕ್ಷಣ ಮಹತ್ವ ಪಡೆದಿದೆ ಎಂದು ತಿಳಿಸಿದರು.
ಗ್ರಾಮಕ್ಕೆ ವಿವಿಧ ಕಾಮಗಾರಿಗಳ ಅಡಿ 104 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನ ತಂದು ಸಮಗ್ರ ಅಭಿವೃದ್ಧಿಪಡಿಸಲಾಗಿದೆ. ಗ್ರಾಮಕ್ಕೆ ಈಗಾಗಲೇ 100 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಗ್ರಾಮದ ಮುಖಂಡರುಗಳು ಇನ್ನು ಹೆಚ್ಚುವರಿಯಾಗಿ 72 ಮನೆಗಳ ಬೇಡಿಕೆ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಮಂಜೂರು ಮಾಡಲಾಗುವುದು. ಹೊಳೆಹರಳಹಳ್ಳಿ, ಕೊನಾಯ್ಕನಹಳ್ಳಿ, ಬಳ್ಳೇಶ್ವರ ಸೇರಿದಂತೆ ಏಳು ಹಳ್ಳಿಗಳಿಗೆ ತುಂಗಭದ್ರಾ ನದಿಯಿಂದ 7.5 ಕೋಟಿ ರೂ. ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಬಸಮ್ಮ ನಾಗರಾಜ್, ಉಪಾಧ್ಯಕ್ಷೆ ಶೃತಿ ಮಂಜುನಾಥ್, ಎಸ್ ಡಿಎಂಸಿ ಅಧ್ಯಕ್ಷ ಫಕ್ಕೀರಪ್ಪ, ಉರ್ದು ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ನಜೀರ್ ಸಾಬ್, ಸದಸ್ಯ ಹನುಮಂತಪ್ಪ, ಗ್ರಾಪಂ ಸದಸ್ಯರಾದ ಸುಭಾಷ್, ಮಂಜುನಾಥ್ ಸೇರಿದಂತೆ ಗ್ರಾಮದ ಮುಖಂಡರು ಇದ್ದರು. ಶಿಕ್ಷಕ ಪರಮೇಶ್ವರಪ್ಪ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.