![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 9, 2019, 2:55 PM IST
ಹೊನ್ನಾಳಿ: ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷ ಷಡಾಕ್ಷರಿ ಉದ್ಘಾಟಿಸಿದರು.
ಹೊನ್ನಾಳಿ: ಹಲವಾರು ದಶಕಗಳ ಹಿಂದೆ ಒಬ್ಬ ಧೀಮಂತ ಮಹಿಳೆಯಿಂದ ಆರಂಭಗೊಂಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇಂದು ಬೃಹತ್ ಶಕ್ತಿಯಾಗಿ ಬೆಳೆದು ನಿಂತಿದ್ದು, ಸರ್ಕಾರಿ ನೌಕರರ ಆಶಯಗಳನ್ನು ಸದಾ ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿದೆ ಎಂದು ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘ ಕೇವಲ ತನ್ನ ನೌಕರರ ಹಿತಾಸಕ್ತಿ ಕಾಪಾಡದೇ ಜೊತೆಗೆ ರಕ್ತದಾನ, ಉನ್ನತ ಪರೀಕ್ಷೆಗಳಿಗೆ ತರಬೇತಿ, ಇಲಾಖೆ ತರಬೇತಿಗಳು, ನೌಕರರ ಆರೋಗ್ಯ ತಪಾಸಣೆ ಶಿಬಿರ ಹೀಗೆ ಹತ್ತು ಹಲವು ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ಹೇಳಿದರು.
ಇಂದಿಗೂ ಎನ್.ಪಿ.ಎಸ್ ಸೇರಿದಂತೆ ನೌಕರರ ಹಲವಾರು ಸಮಸ್ಯೆಗಳಿವೆ. ಹಳೆಯ ಪಿಂಚಣಿ ಪದ್ಧತಿ ಜಾರಿಗೆ ಯಾವುದೇ ಹೋರಾಟಕ್ಕೂ ಸಂಘ ಸಿದ್ಧವಿದ್ದು, ನೌಕರರು ಕೂಡ ಸಹಕಾರ ನೀಡಬೇಕೆಂದು ಹೇಳಿದರು.
ತಹಶೀಲ್ದಾರ್ ತುಷಾರ್ ಬಿ. ಹೂಸೂರು ಮಾತನಾಡಿ, ತಾವು ಈ ಹಿಂದೆ ಸೇವೆ ಸಲ್ಲಿಸಿದ ಪ್ರದೇಶಗಳಲ್ಲಿ ಸಂಘದ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ಹೊನ್ನಾಳಿ ತಾಲೂಕಿನ ಸಂಘದ ಕೆಲಸಗಳಿಗೆ ಸ್ಪಂದಿಸುವುದಾಗಿ ಹೇಳಿದರು.
ದಾವಣಗೆರೆ ಜಿಲ್ಲಾಧ್ಯಕ್ಷ ್ಷಪರಶುರಾಮ್ ಮಾತನಾಡಿ, ರಾಜ್ಯದಲ್ಲಿ ಸುಮಾರು 5.20 ಲಕ್ಷ ಸರ್ಕಾರಿ ನೌಕರರಿದ್ದು, ಎಲ್ಲಾ ನೌಕರರ ಸಹಕಾರದಿಂದ ಎನ್.ಪಿ.ಎಸ್. ಸೇರಿದಂತೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಈ ಹಿಂದಿನ ಅಧ್ಯಕ್ಷ ಜಿ.ಮಲ್ಲೇಶಪ್ಪ ನೂತನ ಅಧ್ಯಕ್ಷ ಬಸಣ್ಣ ಮಾದರ್‌ಗೆ ಅಧಿಕಾರ ಹಸ್ತಾಂತರಿಸಿದರು. ಹಿಂದಿನ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರು, ಶಿಕಾರಿಪುರ ತಾಲೂಕಿನ ಅಧ್ಯಕ್ಷರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ನೌಕರರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ರಾಜ್ಯ ಪರಿಷತ್ ಸದಸ್ಯರಾಗಿ ಜಿ.ನಾಗೇಶ್, ಖಜಾಂಚಿಯಾಗಿ ಎಂ.ಎಚ್.ಕೊಟ್ಯಪ್ಪ, ಕಾರ್ಯದರ್ಶಿ ಕೆ.ಆರ್.ರಂಗಪ್ಪ ಪದಗ್ರಹಣ ಮಾಡಿದರು. ತಾ.ಪಂ ಸದಸ್ಯ ವಿಜಯಕುಮಾರ್, ನಿಕಟಪೂರ್ವ ಅಧ್ಯಕ್ಷ ಜಿ.ಮಲ್ಲೇಶಪ್ಪ, ಗೌರವಾಧ್ಯಕ್ಷ ನ್ಯಾಮತಿ ನಾಗರಾಜ್, ಸುರೇಶ್ ಮಾಳಗಿ, ರವಿಗಾಳಿ, ಡಾ| ವಿಶ್ವನಟೇಶ್, ಶಿವಪದ್ಮ, ಸಿದ್ದಪ್ಪ ಹೊಸಕೇರಿ, ವಿ.ಹರೀಶ್, ಎಚ್.ಕೆ. ರಮೇಶ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರಿಬಸಯ್ಯ, ಎಚ್.ಕೆ. ಚಂದ್ರಶೇಖರ್, ಮಂಜುನಾಥ್ ಇಂಗಳಗೊಂದಿ ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.